ಬೆಂಗಳೂರು : ಸ್ಮೃತಿ ಮಂದಾನ, ಭಾರತ ತಂಡದ ಪರ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕದ ಬಾರಿಸಿದ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 50 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಮಂದಾನ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ಅತಿ ವೇಗದ ಶತಕ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಈ ಹಿಂದೆ ಭಾರತದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ, 2012-13ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 52 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಒಂದು ದಶಕಕ್ಕೂ ಹೆಚ್ಚು ಕಾಲ ಈ ದಾಖಲೆಯನ್ನು ಹೊಂದಿದ್ದರು.
ಸ್ಮೃತಿ ಮಂದಾನ ಶತಕವು ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಅತ್ಯಂತ ವೇಗದ ಶತಕವಾಗಿದ್ದು, ಇದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಮೆಗ್ ಲ್ಯಾನಿಂಗ್ ಅವರ 45 ಎಸೆತಗಳಲ್ಲಿ ಶತಕ ಬಾರಿಸಿದ್ದರು.
3 ಪಂದ್ಯಗಳ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ 413 ಬೃಹತ್ ಮೊತ್ತ ಬೆನ್ನಟ್ಟಿದ ಭಾರತದ ಪರ ಗಟ್ಟಿಯಾಗಿ ನಿಂತು ತಿರುಗೇಟು ನೀಡಿದ ಮಂದಾನ, ಶ್ರೇಷ್ಟ ಕ್ರಿಕೆಟಿಗನ ಹೆಸರಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.
ಲೆಗ್ ಸೈಡ್ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಶತಕದ ಸಂಭ್ರಮಾಚರಣೆ ನಡೆಸಿದರು. ಇದಕ್ಕೂ ಮೊದಲು ಮಂದಾನ ಭಾರತ ಮಹಿಳಾ ತಂಡದ ಪರ ಏಕದಿನ ಕ್ರಿಕೆಟ್‌ನಲ್ಲಿ 70 ಎಸೆತಗಳಲ್ಲಿ ಶತಕ ಬಾರಿಸಿದ್ದರು.

