ಬಾಗಲಕೋಟೆ: ಇಲ್ಲಿನ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ.ಮಠದ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಸದಸ್ಯರರು ಈ ನಿರ್ಧಾರ ಕೈಗೊಂಡಿದ್ದು, ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ.
ಕಳೆದ ಹಲವು ದಿನಗಳಿಂದ ಈ ವಿಚಾರದಲ್ಲಿ ರಾಜಕೀಯ ಜಟಾಪಟಿ ಜೋರಾಗಿತ್ತು.ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು (ಸೆ.21) ಪಂಚಮಸಾಲಿ ಟ್ರಸ್ಟ್ ನ ಕಾರ್ಯಕಾರಿಣಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಬಾಗಲಕೋಟೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಸಕ ಹಾಗೂ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಟ್ರಸ್ಟ್ ನ ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿ ಇತರೆ ಸದಸ್ಯರು ಈ ನಿರ್ಣಯ ಕೈಗೊಂಡಿದ್ದಾರೆ. ಹೀಗಾಗಿ ಅಧಿಕೃತವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ.

