By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪದಭೂಷಣ ಪುರಸ್ಕೃತ ಕನ್ನಡದ ಪ್ರಖ್ಯಾತ ಸಾಹಿತಿ ಎಸ್‌‍.ಎಲ್‌.ಭೈರಪ್ಪ ವಿಧಿವಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಪದಭೂಷಣ ಪುರಸ್ಕೃತ ಕನ್ನಡದ ಪ್ರಖ್ಯಾತ ಸಾಹಿತಿ ಎಸ್‌‍.ಎಲ್‌.ಭೈರಪ್ಪ ವಿಧಿವಶ
ರಾಜ್ಯ-KarnatakaLatest

ಪದಭೂಷಣ ಪುರಸ್ಕೃತ ಕನ್ನಡದ ಪ್ರಖ್ಯಾತ ಸಾಹಿತಿ ಎಸ್‌‍.ಎಲ್‌.ಭೈರಪ್ಪ ವಿಧಿವಶ

Padabhushan awardee and renowned Kannada writer SL Bhairappa passes away

Published September 24, 2025
Share
2 Min Read
SHARE

ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು. 94 ವರ್ಷದ ವಯಸ್ಸಿನವರಾಗಿದ್ದ ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ಕಳೆದ ಕೆಲದಿನಗಳಿಂದ ವಯಸೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಎಲ್‌ ಭೈರಪ್ಪ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.
ಮೂರು ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲೇ ಇದ್ದ ಎಸ್‌ಎಲ್ ಭೈರಪ್ಪ ಅವರು ಹಿರಿಯ ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಮನೆಯಲ್ಲಿ ವಾಸವಾಗಿದ್ದರು, 94 ವರ್ಷ ವಯಸ್ಸಿನ ಅವರು ಕಳೆದ ಕೆಲ ಸಮಯದಿಂದ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.

ಭೈರಪ್ಪ ಅವರ ಪೂರ್ಣ ಹೆಸರು ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂದು. ಕನ್ನಡ ಸಾಹಿತ್ಯ ಲೋಕದ ದಿಗ್ಗಜ ವ್ಯಕ್ತಿಯಾಗಿದ್ದರು. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದರು. ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಸಣ್ಣ ವಯಸ್ಸಿನಲ್ಲೇ ತಮ್ಮ ತಾಯಿಯ ಧೀಮಂತಿಕೆಯನ್ನು ಭೈರಪ್ಪ ಅವರು ಮೈಗೂಡಿಸಿ ಕೊಂಡು ಬೆಳೆದರು.

ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ `ಧರ್ಮಶ್ರೀ’ ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. `ಪರ್ವ’ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.

You Might Also Like

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನನ್ನು ಜೀವಂತವಾಗಿ ಸುಟ್ಟುಹತ್ಯೆ

ಬನಶಂಕರಿ ಜಾತ್ರೆಯಲ್ಲಿ ಮಹಿಳೆಯರ ತಾಳಿ, ಚೈನ್ ಹಾಗೂ ಮೊಬೈಲ್ ಕಳ್ಳತನ

ಖ್ಯಾತ ಶಿಲ್ಪಿ, ಕನ್ನಡಿಗ ಅರುಣ್ ಯೋಗಿರಾಜ್‌ಗೆ ವಿನಾಕಾರಣ ವೀಸಾ ನಿರಾಕರಿಸಿದ ಅಮೇರಿಕಾ

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಕೆ.ಗೋಪಾಲಯ್ಯ ಚಾಲನೆ

ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್

TAGGED:SL Bhairappa
Share This Article
Facebook Copy Link Print
Previous Article ಲವ್ ಜಿಹಾದ್ ಆರೋಪಗಳ ಕುರಿತು ಸ್ಪಷ್ಟನೆ ನೀಡಿದ ಯೂಟ್ಯೂಬರ್ ಮುಕಳೆಪ್ಪ
Next Article ಲಡಾಖ್​​ನಲ್ಲಿ ಹಿಂಸಾತ್ಮಕ ಪ್ರತಿಭಟನೆ, ನಾಲ್ವರ ಸಾವು, ಹಲವರಿಗೆ ಗಂಭೀರ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up