ಬೆಂಗಳೂರು : ನಿನ್ನೆ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದೆ. ಆಸ್ಪತ್ರೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಸಾರ್ವಜನಿಕ ದರ್ಶನಕ್ಕೆ ಎಸ್‌ಎಲ್ ಭೈರಪ್ಪ ಪಾರ್ಥಿವ ಶರೀರ ಸ್ಥಳಾಂತರಿಸಲಾಗಿದ್ದು.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬಳಿಕ ಮಧ್ಯಾಹ್ನ 2 ಗಂಟೆಯ ನಂತರ ಪಾರ್ಥೀವ ಶರೀರವನ್ನ ಮೈಸೂರಿಗೆ ಶಿಫ್ಟ್ ಮಾಡಲಿದ್ದು ಸಂಜೆ 6 ಗಂಟೆವರೆಗೆ ಮೈಸೂರಿನ ಕಲಾಮಂದಿರ ಮುಂಭಾಗ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್ :
ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಇಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಂತಿಮ ನಮನ ಸಲ್ಲಿಸಿದರು .
ನಂತರ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮವಿಭೂಷಣ, ಸಾಹಿತ್ಯಲೋಕದ ಮೇರು ಪರ್ವ ದಿವಂಗತ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಇಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದರು.
ಮೈಸೂರಿನಲ್ಲಿ ಎಲ್ಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ. ಸರ್ಕಾರದ ಪರವಾಗಿ, ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ನಮ್ಮೆಲ್ಲರ ಪರವಾಗಿ ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು.

