By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮನಮೋಹನ ಸಿಂಗ್ ಅವರ 93ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮನಮೋಹನ ಸಿಂಗ್ ಅವರ 93ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ

ರಾಷ್ಟ್ರೀಯ-NationalLatest

ಮನಮೋಹನ ಸಿಂಗ್ ಅವರ 93ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ

Manmohan Singh's 93rd birthday

Published September 26, 2025
Share
2 Min Read
Manmohan-Singh Passed Away
SHARE

ನವದೆಹಲಿ: ಇಂದು ಮಾಜಿ ಪ್ರಧಾನಿ, ದಿವಂಗತ ಮನಮೋಹನ್ ಸಿಂಗ್ ಅವರ 93ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ದೀರ್ಘ ಅವಧಿಯ ಸಾರ್ವಜನಿಕ ಜೀವನದಲ್ಲಿ ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ನಾವು ಸ್ಮರಿಸುತ್ತೇವೆ’ ಎಂದು ನರೇಂದ್ರ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅತ್ಯಂತ ನಮ್ರತೆ ಮತ್ತು ಬುದ್ಧಿವಂತಿಕೆಯ ವ್ಯಕ್ತಿಯಾಗಿ ಹಾಗೂ ಬಲವಾದ ಆರ್ಥಿಕತೆಯನ್ನು ನಿರ್ಮಿಸಲು ಅವರು ನೀಡಿದ ಐತಿಹಾಸಿಕ ಕೊಡುಗೆಗಾಗಿ ಮನಮೋಹನ್ ಸಿಂಗ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಮರಿಸಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಸಿಂಗ್ ಅವರ ಕೊಡುಗೆಯನ್ನು ನೆನಪಿಸಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರು ಭಾರತದ ಆರ್ಥಿಕ ಪರಿವರ್ತನೆಯ ಸೌಮ್ಯ ಶಿಲ್ಪಿಯಾಗಿದ್ದರು ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ನಮ್ರತೆ ಮತ್ತು ಬುದ್ಧಿವಂತಿಕೆಯ ವ್ಯಕ್ತಿಯಾಗಿದ್ದ ಅವರು ಘನತೆಯಿಂದ ನಡೆದುಕೊಂಡಿದ್ದರು. ತಮ್ಮ ಮಾತುಗಳಿಗಿಂತ ಜೋರಾಗಿ ತಮ್ಮ ಕಾರ್ಯಗಳೇ ಮಾತನಾಡುವಂತೆ ಮಾಡಿದ್ದರು. ಆರ್ಥಿಕ ಸುಧಾರಣೆಗಳ ಬಗ್ಗೆ ಅವರ ದೃಷ್ಟಿಕೋನವು ಅವಕಾಶದ ಹೊಸ ಬಾಗಿಲುಗಳನ್ನು ತೆರೆಯಿತು. ಮಧ್ಯಮ ವರ್ಗದ ಅಭಿವೃದ್ಧಿಗೆ ನೆರವಾಯಿತು. ಅಸಂಖ್ಯಾತ ಕುಟುಂಬಗಳನ್ನು ಬಡತನದಿಂದ ಹೊರತಂದಿತು ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

ಸಿಂಗ್ ನ್ಯಾಯಸಮ್ಮತ ಮತ್ತು ಎಲ್ಲರನ್ನೂ ಒಳಗೊಳ್ಳುವಲ್ಲಿ ಆಳವಾಗಿ ನಂಬಿಕೆ ಇಟ್ಟಿದ್ದರು. ಲಕ್ಷಾಂತರ ಜನರ ಜೀವನವನ್ನು ಮುಟ್ಟಿದ ಕಲ್ಯಾಣ ಕ್ರಮಗಳ ಮೂಲಕ ಬೆಳವಣಿಗೆಗೆ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.’ಭಾರತೀಯರ ಪಾಲಿಗೆ ಹಲವು ಪೀಳಿಗೆವರೆಗೂ ಅವರು ಪ್ರಾಮಾಣಿಕತೆ, ಬುದ್ಧಿಶಕ್ತಿ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಶಾಶ್ವತ ಸಂಕೇತವಾಗಿ ಉಳಿದಿದ್ದಾರೆ ಎಂದಿದ್ದಾರೆ.ರಾಷ್ಟ್ರ ನಿರ್ಮಾಣಕ್ಕೆ ಅವರ ಅಚಲ ಬದ್ಧತೆ, ಬಡವರು ಮತ್ತು ತುಳಿತಕ್ಕೊಳಗಾದವರ ಪರವಾಗಿ ಅವರ ದಿಟ್ಟ ನಿರ್ಧಾರಗಳು, ಬಲವಾದ ಆರ್ಥಿಕತೆಯನ್ನು ನಿರ್ಮಿಸಲು ಅವರ ಐತಿಹಾಸಿಕ ಕೊಡುಗೆ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತದೆ ಎಂದು ರಾಹುಲ್ ಗಾಂಧಿ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಅವರ ಸರಳತೆ, ನಮ್ರತೆ ಮತ್ತು ಪ್ರಾಮಾಣಿಕತೆ ನಮ್ಮೆಲ್ಲರಿಗೂ ಸ್ಫೂರ್ತಿಯ ಮೂಲವಾಗಿದೆ’ ಎಂದಿದ್ದಾರೆ.2004ರಿಂದ 2014ರವರೆಗೆ ಸಿಂಗ್ ದೇಶದ ಪ್ರಧಾನಿಯಾಗಿದ್ದರು. ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನೇತೃತ್ವ ವಹಿಸಿದ್ದರು. ದೇಶದಲ್ಲಿ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದು ಪರಿಗಣಿಸಲ್ಪಟ್ಟಿದ್ದರು.

ಸಿಂಗ್ 2004 ಮತ್ತು 2014ರ ನಡುವೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದರು. 1991 ಮತ್ತು 1996ರ ನಡುವೆ ಪಿ.ವಿ. ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಸಿಂಗ್ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಭಾರತವು ಆರ್ಥಿಕ ಸುಧಾರಣೆಗಳಿಗೆ ಸಾಕ್ಷಿಯಾಯಿತು.

You Might Also Like

ಮೈಸೂರು ದಸರಾ ಮಾದರಿಯಲ್ಲಿ ಬೆಂಗಳೂರು ಕರಗ ಶಕ್ತ್ಯೋತ್ಸವ

ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆಗೆ ಮುಂದಾದ ಕೇಂದ್ರ ಗೃಹ ಇಲಾಖೆ

ಮೀನು ತಿಂದು ದೇವಸ್ಥಾನಕ್ಕೆ ಹೋದವರು ಧರ್ಮಸ್ಥಳವನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ : ಪ್ರತಾಪ್‌ ಸಿಂಹ

ಉಕ್ರೇನ್‌ ಮೇಲೆ ರಷ್ಯಾ ರುದ್ರತಾಂಡವ : 477 ಡ್ರೋನ್‌, 60 ಮಿಸೈಲ್‌ಗಳಿಂದ ಅತಿ ದೊಡ್ಡ ದಾಳಿ

ವೇದಿಕೆ ಮೇಲೆ ಅವಮಾನಕ್ಕೆ ಮನನೊಂದು ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಎಎಸ್​ಪಿ ಭರಮನಿ ಮನವೊಲಿಸಿದ ಸಿಎಂ

TAGGED:Manmohan Singh
Share This Article
Facebook Copy Link Print
Previous Article Trump Trump Trump ಬ್ರ್ಯಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಿಗಳ ಮೇಲೆ ಶೇ.100 ಸುಂಕ ಘೋಷಿಸಿದ ಟ್ರಂಪ್
Next Article Tr Tr Tr ಟ್ರಂಪ್ ಭೇಟಿಯಾದ ಪಾಕ್​ ಪ್ರಧಾನಿ ಷರೀಫ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up