By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರೂರ್ ರ‍್ಯಾಲಿ ಕಾಲ್ತುಳಿತ : ಸಾವಿನ ಸಂಖ್ಯೆ 39ಕ್ಕೆ ಏರಿಕೆ, ಪರಿಹಾರ ಘೋಷಿಸಿದ ವಿಜಯ್ ಮತ್ತು ಸ್ಟಾಲಿನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕರೂರ್ ರ‍್ಯಾಲಿ ಕಾಲ್ತುಳಿತ : ಸಾವಿನ ಸಂಖ್ಯೆ 39ಕ್ಕೆ ಏರಿಕೆ, ಪರಿಹಾರ ಘೋಷಿಸಿದ ವಿಜಯ್ ಮತ್ತು ಸ್ಟಾಲಿನ್

ರಾಷ್ಟ್ರೀಯ-NationalLatest

ಕರೂರ್ ರ‍್ಯಾಲಿ ಕಾಲ್ತುಳಿತ : ಸಾವಿನ ಸಂಖ್ಯೆ 39ಕ್ಕೆ ಏರಿಕೆ, ಪರಿಹಾರ ಘೋಷಿಸಿದ ವಿಜಯ್ ಮತ್ತು ಸ್ಟಾಲಿನ್

Karur stampede tragedy: Vijay announces Rs 20 lakh compensation for each

Published September 28, 2025
Share
3 Min Read
Sty Sty Sty
SHARE

ಕಾಲಿವುಡ್ ನಟ, ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. ಶನಿವಾರ (ಸೆಪ್ಟೆಂಬರ್ 27) ಕರೂರಿನಲ್ಲಿ ನಡೆದ ಈ ಘಟನೆಯಲ್ಲಿ ಹಲವರು ನಿಧನರಾಗಿದ್ದಾರೆ. ಈ ಭೀಕರ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 39ಕ್ಕೆ ಏರಿಕೆ ಆಗಿದೆ. ತಮಿಳುನಾಡಿನ ಕರೂರಿನಲ್ಲಿ ದಳಪತಿ ವಿಜಯ್ ಅವರು ರಾಯಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಉಂಟಾದ ಕಾಲ್ತುಳಿತದಿಂದ ಈ ದುರಂತ ಸಂಭವಿಸಿದೆ. ಸಾವಿನ ಸಂಖ್ಯೆ ( ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ದಳಪತಿ ವಿಜಯ್ ಅವರಿಗೆ ಅಪಾರ ಜನಪ್ರಿಯತೆ ಇದೆ. ಅವರು ಎಲ್ಲಿಯೇ ಹೋದರೂ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಾರೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ವಿಜಯ್ ಅವರು ತಮಿಳಿಗ ವಿಟ್ರಿ ಕಳಗಂ ಪಕ್ಷದ ಪ್ರಚಾರಕ್ಕೆ ಹೆಚ್ಚು ಗಮನ ನೀಡಿದ್ದಾರೆ. ಕರೂರು ಜಿಲ್ಲೆಯಲ್ಲಿ ಅವರು ದೊಡ್ಡ ರ‍್ಯಾಲಿ ನಡೆಸಿದರು. ಜನರನ್ನು ನಿಯಂತ್ರಿಸಲು ಸಾಧ್ಯವಾಗದೇ ಪರಿಸ್ಥಿತಿ ಕೈ ಮೀರಿತು.

ಕರೂರು ಕಾಲ್ತುಳಿದಲ್ಲಿ 6 ಮಕ್ಕಳು ಸೇರಿದಂತೆ ಈವರೆಗೂ ಒಟ್ಟು 39 ಜನರು ಮೃತರಾಗಿದ್ದಾರೆ. 40ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರ‍್ಯಾಲಿಯಲ್ಲಿ ಅಂದಾಜು 60 ಸಾವಿರ ಜನರು ಸೇರಿದ್ದರು ಎನ್ನಲಾಗಿದೆ. ದಳಪತಿ ವಿಜಯ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಕಾರಣಕ್ಕೆ ಎಲ್ಲರೂ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಯಿತು.

ಈ ಕಾಲ್ತುಳಿತ ಸುದ್ದಿ ತಿಳಿದ ಕೂಡಲೇ ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಅರವಿಂದ್ ಕೇಜ್ರಿವಾಲ್, ಎಂ.ಕೆ. ಸ್ಟಾಲಿನ್ ಮುಂತಾದವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಕಾಲ್ತುಳಿತಕ್ಕೆ ನಿಜವಾಗಿ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಮೃತರ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ‘ತಮಿಳುನಾಡಿನ ಯಾವುದೇ ರಾಜಕೀಯ ರ‍್ಯಾಲಿಯಲ್ಲಿ ಇಂಥ ದೊಡ್ಡ ದುರಂತ ಎಂದಿಗೂ ಸಂಭವಿಸಿರಲಿಲ್ಲ’ ಎಂದು ಸ್ಟಾಲಿನ್ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್
ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್‌, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಗಾಯಗೊಂಡಿರುವ ಕುಟುಂಬಗಳಿಗೂ ಚಿಕಿತ್ಸೆಗಾಗಿ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ವಿಜಯ್‌ ತಿಳಿಸಿದ್ದಾರೆ.

karur stampede karur stampede karur stampede

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರೂರು ಪಟ್ಟಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಪ್ರತಿ ಕುಟುಂಬಗಳಿಗೆ 20 ಲಕ್ಷ ರೂ. ಪರಿಹಾರ ನೀಡುತ್ತೇನೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೂ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.

ಮಧ್ಯರಾತ್ರಿಯೇ ಕರೂರ್​ಗೆ ಸಿಎಂ ಭೇಟಿ
ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಚಾರ ರ‍್ಯಾಲಿಯನ್ನು ಆಯೋಜಿಸಿದ್ದರು. ಈ ವೇಳೆ ವಿಜಯ್​ನನ್ನು ನೋಡಲು ಹತ್ತಾರು ಸಾವಿರ ಜನ ಸೇರಿದ್ದರು. ವಿಜಯ್ ಭಾಷಣ ಆರಂಭಿಸುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಹಲವು ಜನ ಮೂರ್ಛೆ ತಪ್ಪಿದ್ದರು.

ತಕ್ಷಣ ಅವರನ್ನು ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಜಯ್ ಕೂಡ ಅರ್ಧದಲ್ಲೇ ಭಾಷಣ ಮುಗಿಸಿ ಆ ಸ್ಥಳದಿಂದ ಹೊರಟಿದ್ದರು. ಕಾಲ್ತುಳಿತದಿಂದ ಇದುವರೆಗೂ ಚಿಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ 39 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ಮಧ್ಯರಾತ್ರಿಯೇ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕರೂರಿನ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದು, ಈ ಘಟನೆಯನ್ನು ಅತ್ಯಂತ ಭಯಾನಕ ಎಂದಿದ್ದಾರೆ. ಕಾಲ್ತುಳಿತದ ಕುರಿತು ಮಾತನಾಡಿದ ಅವರು, “ಇದುವರೆಗೆ 39 ಜನರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿಲ್ಲ. ಭವಿಷ್ಯದಲ್ಲಿ ಇಂತಹ ದುರಂತ ಎಂದಿಗೂ ಸಂಭವಿಸಬಾರದು. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದಿದ್ದಾರೆ.

“ಪ್ರಾಣ ಕಳೆದುಕೊಂಡವರಿಗೆ ನಾನು ಭಾರವಾದ ಹೃದಯದಿಂದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸುವಂತೆ ನಾನು ಆದೇಶಿಸಿದ್ದೇನೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

You Might Also Like

ಹೂಡಿಕೆದಾರ ಸ್ವರ್ಗ ಬೆಂಗಳೂರು ಕಣ್ಣೀರು ಹಾಕುತ್ತಿದೆ : ಸರ್ಕಾರದ ವಿರುದ್ಧ ಹೆಚ್ಡಿಕೆ ಆಕ್ರೋಶ

ಬಾರ್‌ನಲ್ಲಿ ಸಿಬ್ಬಂದಿಯನ್ನ ಕೊಲೆಗೈದ ಕುಡುಕ- ಬಿಯರ್ ಬಾಟಲಿ ಇರಿದು ಹತ್ಯೆ

ಚಾಮರಾಜನಗರ: ಎರಡು ಹುಲಿ ಮರಿಗಳು ಸಾವು

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಸಿಹಿಸುದ್ದಿ ನೀಡಿದ ಕೆ.ಎಲ್.ರಾಹುಲ್ ಹಾಗೂ ಅಥಿಯಾ ಶೆಟ್ಟಿ ದಂಪತಿ

TAGGED:Karur Stampede
Share This Article
Facebook Copy Link Print
Previous Article S Jaishankar S Jaishankar S Jaishankar ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್
Next Article Rain Alert ಅ.4ರವರೆಗೆ ಭಾರೀ ಮಳೆ ಸಾಧ್ಯತೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up