ಶಿರಾ : ನಗರದ ಹೊರವಲಯದ ಬೈಪಾಸ್ ಹತ್ತಿರ ಸಾಯಿ ಡಾಬ ಸಮೀಪ 28ನೇ ಸೆಪ್ಟೆಂಬರ್ ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 3 ಜನ ಸಾವನಪ್ಪಿರುತ್ತಾರೆ.
ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(28) ಶಿರಾ ನಗರದಿಂದ ತಮ್ಮ ಸ್ವಗ್ರಾಮವಾದ ಎಮ್ಮೇರಹಳ್ಳಿ ತಾಂಡಕ್ಕೆ ತೆರಳುತ್ತಿದ್ದ ಎದುರುಗಡೆಯಿಂದ ಹೊಂಡಾ ಆಕ್ಟಿವಾದಲ್ಲಿ ಬರುತ್ತಿದ್ದ ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಕಾಮಾಕ್ಷಿ ಕಾಲೋನಿಯ ಮುತ್ತುರಾಜ್ (36) ಮತ್ತು ವೆಂಕಟಮಾದನಶೆಟ್ಟಿ (64) ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ವಿಷ್ಣು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾನೆ. ಶಿರಾ ನಗರಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

