By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮತ್ತೊಮ್ಮೆ ವಿದೇಶದ ನೆಲದಲ್ಲಿ ಕುಳಿತು ದೇಶದ ಕುರಿತು ಟೀಕೆ ಮಾಡಿದ ರಾಹುಲ್ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಮತ್ತೊಮ್ಮೆ ವಿದೇಶದ ನೆಲದಲ್ಲಿ ಕುಳಿತು ದೇಶದ ಕುರಿತು ಟೀಕೆ ಮಾಡಿದ ರಾಹುಲ್ ಗಾಂಧಿ

ವಿದೇಶ-InternationalLatest

ಮತ್ತೊಮ್ಮೆ ವಿದೇಶದ ನೆಲದಲ್ಲಿ ಕುಳಿತು ದೇಶದ ಕುರಿತು ಟೀಕೆ ಮಾಡಿದ ರಾಹುಲ್ ಗಾಂಧಿ

Did Rahul Gandhi criticize the country again while sitting on foreign soil?

Published October 3, 2025
Share
3 Min Read
Rahul Rahul Rahul
SHARE

ಕೊಲಂಬಿಯಾ : ವಿದೇಶದಲ್ಲಿ ನಿಂತು ಭಾರತದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಮೇಲೆ ಸಂಪೂರ್ಣ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ(ಅ. 02) ಮತ್ತೊಮ್ಮೆ ಆರೋಪ ಮಾಡಿದ್ದಾರೆ.

ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಮೇಲಿನ ದಾಳಿಯೇ ದೊಡ್ಡ ಅಪಾಯ. ಭಾರತವು ವಿವಿಧ ಧರ್ಮ, ಸಂಪ್ರದಾಯ, ಭಾಷೆಗಳನ್ನು ಹೊಂದಿದೆ. ವಾಸ್ತವವಾಗಿ ಅದರ ಎಲ್ಲಾ ಜನರ ನಡುವಿನ ಸಂಭಾಷಣೆಯೇ ಭಾರತ. ಇದೆಲ್ಲವಕ್ಕೂ ಸ್ಥಳಾವಕಾಶ ಬೇಕಾಗುತ್ತೆ, ಅದನ್ನು ಸೃಷ್ಟಿಸುವ ಉತ್ತಮ ವ್ಯವಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆ. ಆದರೆ ಪ್ರಸ್ತುತ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಭಾರತೀಯ ಮತ್ತು ಚೀನಾ ರಾಜಕೀಯ ವ್ಯವಸ್ಥೆ ಹೋಲಿಕೆ ಮಾಡಿ ಮಾತನಾಡಿರುವ ಅವರು, ಭಾರತದಲ್ಲಿ ಸುಮಾರು 16, 17 ವಿಭಿನ್ನ ಭಾಷೆಗಳು, ಎಂಟು ವಿಭಿನ್ನ ಧರ್ಮಗಳಿವೆ. ಈ ವಿಭಿನ್ನ ಸಂಪ್ರದಾಯಗಳು ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು, ಅವುಗಳಿಗೆ ತಮ್ಮನ್ನು ತಾವು ವ್ಯಕ್ತಪಡಿಸಲು ಸ್ಥಳಾವಕಾಶ ನೀಡುವುದು ಭಾರತದಂತಹ ದೇಶಕ್ಕೆ ಬಹಳ ಮುಖ್ಯ. ಜನರನ್ನು ಹತ್ತಿಕ್ಕುವ ಮತ್ತು ಸರ್ವಾಧಿಕಾರಿ ವ್ಯವಸ್ಥೆಯನ್ನು ನಡೆಸುವ ಚೀನಾ ಮಾದರಿ ರಾಜಕೀಯ ನಾವು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಉದಾಹರಣೆಗೆ, ಅಮೆರಿಕಾದಲ್ಲಿ ಟ್ರಂಪ್ ಜೊತೆ ಧ್ರುವೀಕರಣ ಸೃಷ್ಟಿಸುತ್ತಿರುವ ಬಹುತೇಕ ಜನರು, ಉತ್ಪಾದನಾ ಕ್ಷೇತ್ರದಿಂದ ತಮ್ಮ ಉದ್ಯೋಗಗಳನ್ನು ಕಳೆದುಕೊಂಡವರೇ. ಚೀನಾ ವಿಶ್ವಕ್ಕೆ ಅಧಿಕಾರಶಾಹಿ (ನಾನ್-ಡೆಮಾಕ್ರಟಿಕ್) ವ್ಯವಸ್ಥೆಯಲ್ಲಿ ಉತ್ಪಾದನೆಯನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ತೋರಿಸಿದೆ, ಆದರೆ ನಾವು ಆ ರೀತಿಯಲ್ಲಿ ಮಾಡಲಾಗದು. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆಯೇ ಉತ್ಪಾದನೆಯನ್ನು ಅಭಿವೃದ್ಧಿಪಡಿಸುವುದು ಸವಾಲಾಗಿದೆ ಎಂದಿದ್ದಾರೆ.

ಭಾರತದಲ್ಲಿ ಮಧ್ಯಮ ವ್ಯವಹಾರ ನಾಶಕ್ಕೆ ಕೇಂದ್ರ ಸರ್ಕಾರ ಪ್ರಮುಖ ಎರಡು ನೀತಿಗಳನ್ನು ತಂದಿತು. ಮೊದಲನೆಯೇದಾಗಿ, ನೋಟು ರದ್ದತಿ, ಇದು ಮೂಲಭೂತವಾಗಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ನಾಶಮಾಡಿತು. ದೊಡ್ಡ ಉದ್ಯಮಿಗಳು ನಮ್ಮ ಆರ್ಥಿಕತೆಯ ದೊಡ್ಡ ಭಾಗವನ್ನು ನಿಯಂತ್ರಿಸಲು ಅವಕಾಶ ಮಾಡಿಕೊಟ್ಟಿತು. ಎರಡನೆಯದಾಗಿ ಜಿಎಸ್​ಟಿ ಇದು, ಮಧ್ಯಮ ಮತ್ತು ಸಣ್ಣ ವ್ಯವಹಾರಗಳಿಗೆ ಹಾನಿ ಮಾಡಿತು ಎಂದು ಹೇಳಿದ್ದಾರೆ.

ಭಾರತದಲ್ಲಿ ಕೇಂದ್ರೀಕೃತವಾದ ಭ್ರಷ್ಟಾಚಾರದ ದೊಡ್ಡ ವ್ಯವಸ್ಥೆಯೇ ಇದೆ. ಮೂರು ಅಥವಾ ನಾಲ್ಕು ವ್ಯವಹಾರಗಳು ಇಡೀ ಆರ್ಥಿಕತೆಯನ್ನು ಆಕ್ರಮಿಸಿಕೊಳ್ಳುತ್ತಿವೆ. ಪ್ರಧಾನಿಗಳಿಗೆ ಇವುಗಳ ಜೊತೆ ನೇರ ಸಂಬಂಧವಿದೆ. ಆ ಭ್ರಷ್ಟಾಚಾರ ಭಾರತದಾದ್ಯಂತ ವ್ಯಾಪಕವಾಗಿ ಹರಡಿದೆ ಎಂದು ಆರೋಪಿಸಿದ್ದಾರೆ.

ಚೀನಾ ಬಗ್ಗೆ ವಿದೇಶಾಂಗ ಸಚಿವ ಎಸ್​.ಜೈಶಂಕರ್ ಮತ್ತು ಮುಸ್ಲಿಂ ವ್ಯಕ್ತಿ ಥಳಿಸುವ ಬಗ್ಗೆ ವಿ.ಡಿ.ಸಾವರ್ಕರ್ ಹೇಳಿಕೆ ಉಲ್ಲೇಖಿಸಿ ಬಿಜೆಪಿ-ಆರ್​ಎಸ್ಎಸ್​ ಸಿದ್ದಾಂತದ ಹೃದಯ ಭಾಗದಲ್ಲೇ ಹೇಡಿತವಿದೆ ಎಂದು ವಾಗ್ದಾಳಿ ನಡೆಸಿದರು.

ವಿದೇಶಾಂಗ ಸಚಿವರ ಹೇಳಿಕೆಯನ್ನು ನೀವು ಗಮನಿಸಿದರೆ ಅವರು, ‘ಚೀನಾ ನಮಗಿಂತ ಹೆಚ್ಚು ಶಕ್ತಿಶಾಲಿ. ನಾನು ಅವರೊಂದಿಗೆ ನಾವು ಹೇಗೆ ಹೋರಾಡಬೇಕು? ಎಂದು ಹೇಳುತ್ತಾರೆ. ಇದು ಸಿದ್ದಾಂತದ ಮೂಲದ ಹೇಡಿತನ. ಹಾಗೆಯೇ ಸಾವರ್ಕರ್ ತಮ್ಮ ಪುಸ್ತಕದಲ್ಲಿ, ಒಮ್ಮೆ ಅವರು ಮತ್ತು ಅವರ ಕೆಲವು ಸ್ನೇಹಿತರು ಒಬ್ಬ ಮುಸ್ಲಿಂ ವ್ಯಕ್ತಿಯನ್ನು ಹೊಡೆದರು, ಮತ್ತು ಆ ದಿನ ಅವರು ತುಂಬಾ ಸಂತೋಷಪಟ್ಟರು ಎಂದು ಬರೆದಿದ್ದಾರೆ. ಐದು ಜನರು ಒಬ್ಬ ವ್ಯಕ್ತಿಯನ್ನು ಹೊಡೆದರೆ, ಅದು ಅವರಲ್ಲಿ ಒಬ್ಬರಿಗೆ ಸಂತೋಷವನ್ನುಂಟುಮಾಡುತ್ತದೆ, ಅದು ಹೇಡಿತನ. ಇದು ದುರ್ಬಲ ಜನರನ್ನು ಹೊಡೆಯುವುದು ಆರ್‌ಎಸ್‌ಎಸ್ ಸಿದ್ಧಾಂತ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, ವಿಜಯದಶಮಿಯಂದು ಭಾರತೀಯರಿಗೆ ಶುಭಾಶಯ ಕೋರುವ ಬದಲು ಗಾಂಧಿಯವರು “ಭಾರತದ ವಿರುದ್ಧ ಮಾತನಾಡಲು” ಆಯ್ಕೆ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರು ದೇಶವನ್ನು ಕೆಣಕುವ ಮತ್ತು ವಿದೇಶಿ ನೆಲದಲ್ಲಿದ್ದಾಗಲೂ ಜನರು ಅನುಭವಿಸುವ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಅವರು ಪ್ರಧಾನಿ ಮೋದಿಯವರ ವಿರುದ್ಧ ನಿರಂತರವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಾರೆ, ನಾಚಿಕೆಯಿಲ್ಲದೆ ಅವರನ್ನು ನಿಂದಿಸುತ್ತಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ ಎಂದು ವಿದೇಶಗಳಲ್ಲಿ ಹೇಳಿಕೊಳ್ಳುತ್ತಾರೆ. ರಾಹುಲ್ ಗಾಂಧಿ ಹೇಳುವ ಎಲ್ಲವೂ ಆಧಾರರಹಿತ. ಅವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ ಎಂದು ಹೇಳುತ್ತಾರೆ ಎಂದಿದ್ದಾರೆ.

You Might Also Like

ಕಾಂಗ್ರೆಸ್ ರಾಜಕಾರಣದ ಕುರಿತು ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ

ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಬೆಂಗಳೂರಿನ ಬಹುನಿರೀಕ್ಷಿತ ಹಳದಿ ಮಾರ್ಗದಲ್ಲಿ ಟ್ರಯಲ್ ಪ್ರಾರಂಭ

ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ

ಪಾಠ ಕೇಳುತ್ತಿರುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

TAGGED:Rahul Gandhi
Share This Article
Facebook Copy Link Print
Previous Article Vladimir Putin PM Modi ಭಾರತ ಅಪಮಾನ ಸಹಿಸಲ್ಲ, ಮೋದಿ ಒಬ್ಬ ಸಮತೋಲಿತ ಮತ್ತು ಬುದ್ಧಿವಂತ ನಾಯಕ : ಪುಟಿನ್‌
Next Article Rain Alert ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up