By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಮೋದಿ ಮೆಚ್ಚುಗೆಗೆ ಪಾತ್ರರಾಗಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಸೇರ್ಪಡೆ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಪ್ರಧಾನಿ ಮೋದಿ ಮೆಚ್ಚುಗೆಗೆ ಪಾತ್ರರಾಗಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಸೇರ್ಪಡೆ..?

ರಾಷ್ಟ್ರೀಯ-NationalLatest

ಪ್ರಧಾನಿ ಮೋದಿ ಮೆಚ್ಚುಗೆಗೆ ಪಾತ್ರರಾಗಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಸೇರ್ಪಡೆ..?

Folk singer Maithili Thakur likely to contest Bihar election from Alinagar seat

Published October 7, 2025
Share
2 Min Read
Maithili Thakur Maithili Thakur Maithili Thakur
SHARE

ನವದೆಹಲಿ : ಒಮ್ಮೆ ಪ್ರಧಾನಿ ಮೋದಿ ಅವರಿಂದ ಮೆಚ್ಚುಗೆ ಪಡೆದಿದ್ದ ಖ್ಯಾತ ಗಾಯಕಿ ಮೈಥಿಲಿ ಠಾಕೂರ್ ಅವರು 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರವಾದ ಮಧುಬನಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಿಹಾರದ ಉಸ್ತುವಾರಿ ವಿನೋದ್ ತಾವ್ಡೆ ಅವರು ಇತ್ತೀಚೆಗಷ್ಟೇ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರ ಜೊತೆ ಮೈಥಿಲಿ ಮತ್ತು ಅವರ ತಂದೆಯನ್ನು ಭೇಟಿ ಮಾಡಿದ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಮೈಥಿಲಿ ಬಗ್ಗೆ ಹರಿದಾಡುತ್ತಿರುವ ವದಂತಿಗಳಿಗೆ ಇದೀಗ ಮತ್ತೆ ಬಲ ಬಂದಿದೆ. ತಮ್ಮ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ತಾವ್ಡೆ, ಮೈಥಿಲಿಯನ್ನು “ಬಿಹಾರದ ಮಗಳು” ಎಂದು ಸಂಬೋಧಿಸಿ ರಾಜ್ಯಕ್ಕೆ ಮರಳಿ ಸ್ವಾಗತಿಸಿದ್ದಾರೆ.

1995ರಲ್ಲಿ ಲಾಲು ಪ್ರಸಾದ್​ ಯಾದವ್​ ಅಧಿಕಾರಕ್ಕೆ ಬಂದ ನಂತರ ಮೈಥಿಲಿ ಅವರ ಕುಟುಂಬ ಬಿಹಾರವನ್ನು ತೊರೆದಿತ್ತು. ಇದೀಗ ಬಿಹಾರದ ಬದಲಾವಣೆಯ ವೇಗವನ್ನು ನೋಡಿ ಬಿಹಾರಕ್ಕೆ ಮರಳಲು ಮೈಥಿಲಿ ಬಯಸಿದ್ದಾರೆ. ಆಕೆ ಬಿಹಾರದ ಮಗಳು. ಆಕೆಗೆ ಆತ್ಮೀಯ ಸ್ವಾಗತ ಎಂದು ಹೇಳುವ ಮೂಲಕ ತಾವ್ಡೆ ಅವರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಜನರಿಗೆ “ಕೊಡುಗೆ” ಮತ್ತು “ಅವರ ನಿರೀಕ್ಷೆಗಳನ್ನು ಪೂರೈಸಲು” ಮೈಥಿಲಿಯನ್ನು ನಿತ್ಯಾನಂದ ರೈ ಮತ್ತು ತಾವ್ಡೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ತಾವ್ಡೆ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಠಾಕೂರ್, ಬಿಹಾರಕ್ಕಾಗಿ ದೊಡ್ಡ ಕನಸು ಕಾಣುವ ಜನರೊಂದಿಗಿನ ಪ್ರತಿ ಸಂಭಾಷಣೆಯೂ ನನಗೆ ದೃಷ್ಟಿ ಮತ್ತು ಸೇವೆಯ ಶಕ್ತಿಯನ್ನು ನೆನಪಿಸುತ್ತದೆ. ನಾನು ಅವರಿಗೆ ಗೌರವ ಮತ್ತು ಹೃದಯದಿಂದ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಅಂದಹಾಗೆ, ಶಾಸ್ತ್ರೀಯ ಗಾಯಕಿ ಮೈಥಿಲಿ ಅವರು ಮಿಥಿಲಾ ಪ್ರದೇಶದವರು. ಈ ಪ್ರದೇಶ ಮಧುಬನಿಯಲ್ಲಿದೆ. ಬಿಜೆಪಿ, ಠಾಕೂರ್ ಅವರಿಗೆ ಎರಡು ಸ್ಥಾನಗಳನ್ನು ನೀಡುವ ಸಾಧ್ಯತೆಯಿದೆ. ದರ್ಭಂಗಾದ ಮಧುಬನಿ ಮತ್ತು ಅಲಿಗಢ ಎರಡು ಕ್ಷೇತ್ರಗಳಲ್ಲಿ ಒಂದು ಸ್ಪರ್ಧಿಸುವ ಅವಕಾಶವನ್ನು ನೀಡಲಾಗಿದೆ. ಅಲ್ಲದೆ, ಮೈಥಿಲಿ ಕೂಡ ಸ್ಪರ್ಧಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬಿಹಾರ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಚುನಾವಾಣಾ ಆಯೋಗ ಸೋಮವಾರ (ಅ.06) ಘೋಷಿಸಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.

2024, ಜನವರಿ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಠಾಕೂರ್ ಅವರನ್ನು ಶ್ಲಾಘಿಸಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ, ಮೈಥಿಲಿ ಹಾಡಿದ ವಿಡಿಯೋವನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ಸಂದರ್ಭವು ದೇಶಾದ್ಯಂತ ನನ್ನ ಕುಟುಂಬ ಸದಸ್ಯರಿಗೆ ಭಗವಾನ್ ಶ್ರೀ ರಾಮನ ಜೀವನ ಮತ್ತು ಆದರ್ಶಗಳಿಗೆ ಸಂಬಂಧಿಸಿದ ಪ್ರತಿಯೊಂದು ಘಟನೆಯನ್ನು ನೆನಪಿಸುತ್ತಿದೆ. ಅಂತಹ ಒಂದು ಭಾವನಾತ್ಮಕ ಘಟನೆ ಶಬರಿಗೆ ಸಂಬಂಧಿಸಿದೆ. ಮೈಥಿಲಿ ಠಾಕೂರ್ ಜಿ ಅದನ್ನು ತಮ್ಮ ಸುಮಧುರ ರಾಗಗಳಲ್ಲಿ ಹೇಗೆ ಹಾಡಿದ್ದಾರೆ ಎಂಬುದನ್ನು ಕೇಳಿ ಎಂದು ಬರೆದುಕೊಂಡಿದ್ದರು.

ಇನ್ನು 2024 ರಲ್ಲಿ “ಆತ್ಮವಿಶ್ವಾಸ, ದೃಢನಿಶ್ಚಯದ ನವ ಭಾರತದ ಕಥೆಗಾರರನ್ನು” ಉತ್ತೇಜಿಸಲು ಸರ್ಕಾರ ಆಯೋಜಿಸಿದ ಮೊದಲ ರಾಷ್ಟ್ರೀಯ ಕ್ರಿಯೇಟರ್​ ಪ್ರಶಸ್ತಿಗಳಲ್ಲಿ ಪ್ರಶಸ್ತಿ ಪಡೆದ 24 ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ಗಳಲ್ಲಿ ಠಾಕೂರ್ ಕೂಡ ಒಬ್ಬರು. ಅವರಿಗೆ ‘ವರ್ಷದ ಸಾಂಸ್ಕೃತಿಕ ರಾಯಭಾರಿ’ ಪ್ರಶಸ್ತಿಯನ್ನು ನೀಡಲಾಯಿತು.

You Might Also Like

ಸಂವಿಧಾನ ಕುರಿತ ಭಾಷಣದ ವೇಳೆ ಸಾವರ್ಕರ್, ಅದಾನಿ, ಮನುಸ್ಮೃತಿ, ಏಕಲವ್ಯ ಎಳೆತಂದ ರಾಹುಲ್

ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್

ಮಂತ್ರಿ ಸ್ಥಾನಕ್ಕೆ ಒತ್ತಡ ಹಾಕಲ್ಲ ಎಂದ ಹೆಚ್‌ಡಿಕೆ

ಬೆಂಗಳೂರಲ್ಲಿ ನಾನಾ ಅವಾಂತರ ಸೃಷ್ಟಿಸಿದ ರಾತ್ರಿ ಮಳೆ

ಮೈಸೂರು ದಸರಾ ಮಾದರಿಯಲ್ಲಿ ಬೆಂಗಳೂರು ಕರಗ ಶಕ್ತ್ಯೋತ್ಸವ

TAGGED:Maithili Thakur
Share This Article
Facebook Copy Link Print
Previous Article Rakesh Kishor Rakesh Kishor Rakesh Kishor ಯಾವುದೇ ಯಾವುದೇ ತಪ್ಪು ಮಾಡಿಲ್ಲ , ಕ್ಷಮೆ ಕೇಳಲ್ಲ : ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌
Next Article Shilpa Shetty Shilpa Shetty Shilpa Shetty ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ-ರಾಜ್ ಕುಂದ್ರಾ ದಂಪತಿ ವಿಚಾರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up