ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ರಾಜ್ಯ ಸರ್ಕಾರ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಲಹೆ ನೀಡಿದೆ.
ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 200 ಕಫ್ ಸಿರಪ್ಗಳಲ್ಲಿ 2 ಕೆಮ್ಮಿನ ಸಿರಪ್ಗಳು ಅಸುರಕ್ಷಿತ ಎಂಬ ವರದಿ ಆರೋಗ್ಯ ಇಲಾಖೆ ಕೈಸೇರಿದೆ. ಆರೋಗ್ಯ ಇಲಾಖೆ ಜುಲೈನಲ್ಲಿ 200 ಸ್ಯಾಂಪಲ್ಸ್ ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳಸಿತ್ತು. ಅದರ ವರದಿ ಅಗಸ್ಟ್ನಲ್ಲಿ ಇಲಾಖೆಯ ಕೈಸೇರಿದ್ದು, ಎರಡು ಕಫ್ ಸಿರಫ್ ಅಸುರಕ್ಷಿತ ಎಂಬುದು ಗೊತ್ತಾಗಿದೆ. ಈ ಎರಡು ಕೆಮ್ಮಿನ ಸಿರಪ್ಗಳಲ್ಲಿ ನಿಗದಿತ ಪ್ರಮಾಣದಲ್ಲಿ ರಾಸಾಯನಿಕಗಳ ಬಳಕೆ ಮಾಡಿಲ್ಲ ಎಂಬುದು ಗೊತ್ತಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀತ್ತು.
ಹಿಮಾಚಲಪ್ರದೇಶದ ಎಲ್‌ವಿ ಲೈಫ್ ಸೈನ್ಸ್ ತಯಾರಿಸುವ ಸಿರಪ್ ಮತ್ತು ಮತ್ತು ಪುದುಚೆರಿಯ ಎಥಿಡ್ರಸ್ ಸಂಶೋಧನಾ ಪ್ರಯೋಗಾಲಯ ಉತ್ಪಾದಿಸುವ ಸಿ ಆ್ಯಂಡ್ ಸಿ-ಎಲ್‌ಎಸ್ ಸಿರಪ್‌ನ ಸಿಎಸ್‌ಎಲ್-129ನೇ ಬ್ಯಾಚ್‌ಗಳು ನಿಗದಿತ ಮಾನದಂಡಗಳನ್ನು ತಲುಪುವಲ್ಲಿ ವಿಫಲವಾಗಿವೆ.
ಇವುಗಳನ್ನು ಹಿಂಪಡೆದು, ತಯಾರಿಕಾ ಘಟಕಗಳಲ್ಲಿ ಪರಿಶೀಲನೆ ನಡೆಸಬೇಕು ಹಾಗೂ ತಯಾರಕರ ವಿರುದ್ಧ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ’ ಎಂದು ‘ಸೌತ್‌ಫಸ್ಟ್’ ಎಂಬ ಸುದ್ದಿ ವೆಬ್‌ಸೈಟ್ ವರದಿ ಪ್ರಕಟಿಸಿದೆ.
ಎಲ್‌ವಿ ಲೈಫ್ ಸೈನ್ಸ್‌ನ ಸಿರಪ್ ಅನ್ನು ಬ್ರಾಂಕೈಟಿಸ್, ಆಸ್ತಮಾ ಮತ್ತು ಸಿಒಪಿಡಿಯಂತಹ ಉಸಿರಾಟಕ್ಕೆ ಸಂಬಂಧಿಸಿದ ಕೆಮ್ಮು ನಿವಾರಣೆಗೆ ಬಳಸಲಾಗುತ್ತದೆ. ಸಿ ಆ್ಯಂಡ್ ಸಿ-ಎಲ್‌ಎಸ್ ಸಿರಪ್ ಅನ್ನು ಕಫ ಮತ್ತು ಉಸಿರಾಟದ ತೊಂದರೆಗಳೊಂದಿಗೆ ಬರುವ ಕೆಮ್ಮನ್ನು ನಿವಾರಿಸಲು ತಯಾರಿಸಲಾಗಿದೆ. ಆದರೆ ಗುಣಮಟ್ಟ ಪರೀಕ್ಷೆಯಲ್ಲಿ ಈ ಎರಡೂ ಔಷಧಗಳು ವಿಫಲವಾಗಿವೆ ಎಂದು ಸಿಡಿಎಸ್‌ಸಿಒ ವರದಿ ಹೇಳಿದೆ ಎಂದು ಗೊತ್ತಾಗಿದೆ.

