ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣ (ಸರ್ಕಾರಿ ಜಾಗಗಳಲ್ಲಿ) ರಾಷ್ಟ್ರೀಯ ಸ್ವಯಂ ಸೇವಕ ಸಂಘ ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿದಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ. ವಿಶೇಷವೆಂದರೆ ಆರ್‌ಎಸ್‌ಎಸ್ ಹೆಸರು ಉಲ್ಲೇಖಿಸದೇ ಜಾಣ ನಡೆ ಪ್ರದರ್ಶಿಸಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್ ಚಟುವಟಿಕೆ ನಿಷೇಧಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

