ಬೆಂಗಳೂರು: ರಾಜ್ ಕುಟುಂಬದ ಸೊಸೆ ಅಶ್ವಿನಿ ಪುನೀತ್ರಾಜ್ಕುಮಾರ್ ಅವರು ರಾಜಕೀಯ ಪ್ರವೇಶಿಸುತ್ತಾರಾ ಎನ್ನುವ ಪ್ರಶ್ನೆ ಎದ್ದಿದ್ದು, ಈ ಬಗ್ಗೆ ಕೊನೆಗೂ ಸ್ಪಷ್ಟನೆ ಸಿಕ್ಕಿದೆ.
ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜೀವನಾಧಾರಿತ ಎಐ ತಂತ್ರಜ್ಞಾನ ಬಳಸಿ ಮಾಡಿರುವ ‘ಕನ್ನಡದ ಅಪ್ಪು’ ಮೊಬೈಲ್ ಆ್ಯಪ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬಿಡುಗಡೆಗೊಳಿಸಿ, ಮಾತನಾಡಿದ ಅವರು, ರಾಜಕಾರಣಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸೆಳೆಯಲು ನಾನು ಅನೇಕ ಬಾರಿ ಪ್ರಯುತ್ನ ಪಟ್ಟೆ, ಚಾಕಲೇಟ್ ಕೊಟ್ಟೆ. ಆದರೆ ಅವರು ಬರಲಿಲ್ಲ. ಸಹೋದರಿ ಅಶ್ವಿನಿ ಅವರನ್ನು ಸಹ ಆಹ್ವಾನಿಸಿದೆ. ಅವರು ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು, ರಾಜಕಾರಣಕ್ಕೆ ಬರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಅಶ್ವಿನಿ ಅವರು ರಾಜಕೀಯಕ್ಕೆ ಬರಲು ತಿರಸ್ಕರಿಸಿದಾಗ. ಸಕ್ರಿಯ ರಾಜಕಾರಣಕ್ಕೆ ಬರುವುದು ಬೇಡ ಆದರೆ ಮುಖ್ಯವಾಹಿನಿಯಲ್ಲಿರಿ ಎಂದು ತಿಳಿಸಿದ್ದೆ. ಇಷ್ಟು ದಿನ ಇದನ್ನು ಬಹಿರಂಗ ಗೊಳಿಸಿರಲಿಲ್ಲ. ಇಂದು ಬಹಿರಂಗಗೊಳಿಸಿದ್ದೇನೆ ಎಂದು ಹೇಳಿದರು. ರಾಮಾಯಣ ಮತ್ತು ಮಹಾಭಾರತಗಳು ಅನೇಕ ವರ್ಷಗಳಿಂದ ನಮ್ಮ ನಡುವೆ ಉಳಿದುಕೊಂಡಿವೆ.
ಪುನೀತ್ ರಾಜಕುಮಾರ್ ಅವರು ಮಾಡಿರುವ ಕೆಲಸಗಳು ಹೊಸ ತಂತ್ರಜ್ಞಾನದ ಮೂಲಕ ನಮ್ಮ ನಡುವೆ ಜೀವಂತವಾಗಿರುತ್ತವೆ ಎಂದು ತಿಳಿಸಿದರು. ಎಐ ತಂತ್ರಜ್ಞಾನದ ಮೂಲಕ ಭೀಮ, ಅರ್ಜುನ, ರಾಮ ಹೀಗೆ ಅನೇಕ ಪಾತ್ರಗಳನ್ನು ನೈಜತೆಗೆ ಹತ್ತಿರವಾದಂತೆ ಚಿತ್ರಿಸಲಾಗುತ್ತಿದೆ. ಅದೇ ರೀತಿ ಈ ಆ್ಯಪ್ ನಲ್ಲಿ ಬಾಲ್ಯಕಾಲದ ಪುನೀತ್ ಸೇರಿದಂತೆ ಇತ್ತೀಚಿನ ದಿನದವರೆಗಿನ ತನಕ ಸೃಷ್ಟಿಸಲಾಗಿದೆ.
ಪುನೀತ್ ಅವರು ಕೊನೆಯುಸಿರು ಎಳೆದ ಸಂದರ್ಭದಲ್ಲಿ ಎಷ್ಟೊಂದು ಅಭಿಮಾನಿಗಳು ಅವರಿಗಾಗಿ ಮಿಡಿದರು. ನೂರಾರು ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ಅವರ ಹೆಸರನ್ನು ತಮ್ಮ ಮಕ್ಕಳಿಗೆ ಇಟ್ಟಿದ್ದಾರೆ. ಕತ್ತಲೆಗೆ ಹೋಗಿರುವ ಅಪ್ಪು ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದಿದ್ದಾರೆ ಎಂದರು.
ರಾಜ್ ಕುಟುಂಬವನ್ನು ಸ್ಯಾಂಡಲ್ವುಡ್ನಲ್ಲಿ ದೊಡ್ಮನೆ ಎಂದೇ ಕರೀತಾರೆ. ಕರ್ನಾಟಕದಾದ್ಯಂತ ರಾಜ್ಫ್ಯಾಮಿಲಿ ಬಹುದೊಡ್ಡ ಅಭಿಮಾನಿ ಬಳಗ ಹೊಂದಿದೆ. ಅಣ್ಣಾವ್ರ ಇದ್ದಾಗಲು ರಾಜಕೀಯ ಪ್ರವೇಶಕ್ಕೆ ಒತ್ತಡ ಹೆಚ್ಚಿತ್ತು ಆದ್ರೂ ರಾಜ್ಕುಮಾರ್ಅವರು ರಾಜಕಾರಣದಿಂದ ದೂರ ಉಳಿದಿದ್ರು. ಅವರ ಮಕ್ಕಳಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ಹಾಗೂ ಸಹ ಅವರ ಹಾದಿಯಲ್ಲೇ ಸಾಗ್ತಿದ್ದಾರೆ.

