By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಹಾರ ವಿಧಾನಸಭಾ ಚುನಾವಣೆ : ಎನ್‌ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಬಿಹಾರ ವಿಧಾನಸಭಾ ಚುನಾವಣೆ : ಎನ್‌ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆ

ರಾಷ್ಟ್ರೀಯ-NationalLatest

ಬಿಹಾರ ವಿಧಾನಸಭಾ ಚುನಾವಣೆ : ಎನ್‌ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆ

Bihar Assembly Elections: NDA Alliance Manifesto Released

Published October 31, 2025
Share
2 Min Read
sfgsdgg sfgsdgg sfgsdgg
SHARE

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೂ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲು (ನ4) ಇನ್ನು ನಾಲ್ವೇ ದಿನ ಬಾಕಿ ಇರುವಾಗ, ಬಿಜೆಪಿ- ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಣಾಳಿಕೆ ಬಿಡುಗಡೆ ಮಾಡಿದೆ. ತಮಗೆ ಮತ್ತೊಮ್ಮೆ ಅಧಿಕಾರ ಸಿಕ್ಕರೆ ಏನೆಲ್ಲ ಮಾಡಲಿದೆ ಎಂಬುದನ್ನು ವಿವರಿಸಿದೆ.

ಮಹಿಳೆಯರು ಮತ್ತು ಯುವ ಜನರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಲಾಗಿದೆ. ಪ್ರಸ್ತುತ ಚುನಾವಣೆಯ ಪ್ರಮುಖ ವಿಷಯವಾಗಿರುವ ‘ವಲಸೆ’ಗೆ ತಡೆಯೊಡ್ಡುವ ನಿಟ್ಟಿನಲ್ಲಿ, ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಲಾಗಿದೆ.

ಎದುರಾಳಿ ‘ಮಹಾಘಟಬಂಧನ್’ ಮೈತ್ರಿಕೂಟಕ್ಕೆ ಪ್ರತಿಯಾಗಿ ಶುಕ್ರವಾರ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ಎನ್‌ಡಿಎ, ಒಗ್ಗಟು ಪ್ರದರ್ಶಿಸಿದೆ.
ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿ (ಯು) ಮುಖ್ಯಸ್ಥ ನಿತೀಶ್ ಕುಮಾರ್, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಜೀತನ್ ರಾಮ್ ಮಾಂಝಿ (ಎಚ್‌ಎಎಂ), ಚಿರಾಗ್ ಪಾಸ್ವಾನ್ (ಎಲ್‌ಜಿಪಿ ಆರ್) ಮತ್ತು ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹ (ಆರ್‌ಎಲ್‌ಎಂ) ಅವರು ಮಿತ್ರಪಕ್ಷಗಳ ಎಲ್ಲ ನಾಯಕರ ಸಮ್ಮುಖದಲ್ಲಿ ಪಟ್ನಾದಲ್ಲಿ ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದ್ದಾರೆ.

ಸ್ವಂತ ವ್ಯವಹಾರ ನಡೆಸಲು ಬಯಸುವ ಮಹಿಳೆಯರಿಗೆ ₹ 10,000 ಸಹಾಯಧನ ನೀಡಲಾಗುವುದು. ಅದೇ ವ್ಯವಹಾರವನ್ನು ವಿಸ್ತರಿಸಿಕೊಳ್ಳಲು 12 ಲಕ್ಷದ ವರೆಗೂ ಹೆಚ್ಚುವರಿ ನೆರವು ಒದಗಿಸಲಾಗುವುದು. ಆ ಮೂಲಕ, ಕನಿಷ್ಠ ಒಂದು ಕೋಟಿ ಮಹಿಳೆಯರು ವಾರ್ಷಿಕ ಕಡಿಮೆಯೆಂದರೂ ಒಂದು ಲಕ್ಷ ರೂಪಾಯಿ ಸಂಪಾದಿಸುವಂತೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಬಿಹಾರವನ್ನು ದಕ್ಷಿಣ ಏಷ್ಯಾದ ಜವಳಿ ಮತ್ತು ರೇಷ್ಮೆ ಕೇಂದ್ರವನ್ನಾಗಿಸುವ ಜೊತೆಗೆ, ಪ್ರತಿ ಜಿಲ್ಲೆಯಲ್ಲೂ ಹೊಸ ಕೈಗಾರಿಕೆಗಳು, ಕಾರ್ಖಾನೆಗಳನ್ನು ನಿರ್ಮಿಸುವುದಾಗಿ ಭರವಸೆ ನೀಡಲಾಗಿದೆ.

’50 ಲಕ್ಷ ಹೊಸ ಪಕ್ಕಾ ಮನೆಗಳನ್ನು ನಿರ್ಮಿಸುವುದಾಗಿ, ಪ್ರತಿ ಮನೆಗೂ 125 ಯೂನಿಟ್ವರೆಗೆ ವಿದ್ಯುತ್ ಪೂರೈಸುವುದಾಗಿ, ₹5 ಲಕ್ಷದವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಒದಗಿಸುವುದಾಗಿ ಎನ್‌ಡಿಎ ಸರ್ಕಾರ ಭರವಸೆ ನೀಡಿದೆ. ಇದಲ್ಲದೆ, ಸದ್ಯ ನೀಡುತ್ತಿರುವ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಮಾಸಿಕ ₹ 400ರಿಂದ ₹ 1,100ಕ್ಕೆ ಹೆಚ್ಚಿಸಲಾಗುವುದು’ ಎಂದು ನಡ್ಡಾ ಹೇಳಿದ್ದಾರೆ.

ರೈತರನ್ನು ಆಕರ್ಷಿಸುವ ಪ್ರಯತ್ನಗಳನ್ನೂ ಮಾಡಲಾಗಿದೆ. ‘ರೈತರಿಗೆ ಸದ್ಯ ನೀಡುತ್ತಿರುವ ಸಹಾಯಧನದ ಜೊತೆಗೆ ‘ಕರ್ಪೂರಿ ಠಾಕೂರ್’ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ ಅಡಿಯಲ್ಲಿ ಹೆಚ್ಚುವರಿಯಾಗಿ ₹3,000 ನೀಡಲಾಗುವುದು. ಇದರೊಂದಿಗೆ, ರೈತರಿಗೆ ನೀಡುವ ಆರ್ಥಿಕ ನೆರವಿನ ಮೊತ್ತ ₹ 6,000 ದಿಂದ ₹9.000ಕ್ಕೆ ಏರಿಕೆಯಾಗಲಿದೆ’ ಎಂದು ಬಿಹಾರ ಹಣಕಾಸು ಸಚಿವ, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಘೋಷಿಸಿದ್ದಾರೆ.

‘ಈ ಸಂಕಲ್ಪ ಪತ್ರವು ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿಶ್ವಾಸದ ಪ್ರತೀಕ’ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಪ್ರತಿಪಾದಿಸಿದ್ದಾರೆ.

You Might Also Like

ಬರ್ತಡೇ ದಿನವೇ ಸಾವಿಗೀಡಾದ ಕಾಲೇಜು ವಿದ್ಯಾರ್ಥಿನಿ

ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

ಬೆಳಗಾವಿಯಲ್ಲಿ ಶೂಟೌಟ್ ​; ಗಂಭೀರವಾಗಿ ಗಾಯಗೊಂಡ ಯುವಕ

ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು- ಜೈಲಾ.. ಬೇಲಾ?

ಪ್ರಧಾನಿ ಏ.28,29 ಕ್ಕೆ ರಾಜ್ಯಕ್ಕೆ – ಉತ್ತರ ಕರ್ನಾಟಕದಲ್ಲಿ ಮತಯಾಚನೆ

TAGGED:#ManifestoBihar Assembly Elections
Share This Article
Facebook Copy Link Print
Previous Article PM Modio PM Modio PM Modio ಸರ್ದಾರ್ ಪಟೇಲ್ 150ನೇ ಜನ್ಮ ದಿನಾಚರಣೆ : ರಾಷ್ಟ್ರೀಯ ಏಕತೆಯ ಪ್ರತಿಜ್ಞೆ ಬೋಧಿಸಿದ ಪ್ರಧಾನಿ ಮೋದಿ
Next Article Namma MEtro 01 Namma MEtro 01 Namma MEtro 01 ನ.1ರಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸಂಚಾರ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up