Arvind Venkatesh Reddy : ಸ್ಯಾಂಡಲ್‌ವುಡ್ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ವೆಂಕಟೇಶ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈತ AVR ಗ್ರೂಪ್ ಸಂಸ್ಥಾಪಕನಾಗಿದ್ದು ಅಲ್ಲದೆ ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾನೆ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಸದ್ಯ ಪೋಲಿಸಲು ಉದ್ಯಮಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಬಂಧಿಸಲಾಗಿದೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಅಲ್ಲಿಂದ ಪ್ರೀತಿ-ಕಾಳಜಿಯಿಂದ ಅರವಿಂದ್ ನಡೆದುಕೊಳ್ಳುತ್ತಿದ್ದನಂತೆ. ಆ ಬಳಿಕ 2022ರ ಆಗಸ್ಟ್ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಳೆದುಕೊಂಡ. ಇದಕ್ಕೆ ಕಾರಣ ನಟಿಗೆ ತಿಳಿದಿರಲಿಲ್ಲ.
ನಂತರ ಅರವಿಂದ್ ಮತ್ತೆ ನಟಿಯ ಜೊತೆ ಸಂಪರ್ಕ ಬೆಳೆಸಿದ್ದೂ ಅಲ್ಲದೆ, ನಟಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಮಾನಸಿಕ ಸ್ಥಿತಿ ಹಾಗೂ ಕುಡಿತದ ಚಟದ ಬಗ್ಗೆ ನಟಿಗೆ ಆಗ ಗೊತ್ತಾಯಿತು. 2024ರಲ್ಲಿ ಒಮ್ಮೆ ಅರವಿಂದ್ ನಟಿಗೆ ಕರೆ ಮಾಡಿದ್ದೂ ಅಲ್ಲದೆ, ನಿನ್ನನ್ನು ಮದುವೆ ಆಗುತ್ತೇನೆ ಎಂದು ಹೇಳಿದ್ದ.ಈ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಸಿನಿಮಾ ಇಂಡಸ್ಟ್ರಿಯ ಜನರ ಜೊತೆಗೆ ಹೆಚ್ಚಾಗಿ ಗುರ್ತಿಸಿಕೊಂಡಿದ್ದ ಅರವಿಂದ್ ರೆಡ್ಡಿ, ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿಯನ್ನ ಕೂಡ ಆಯೋಜಿಸಿದ್ದ. ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್ ನ ಪ್ರಮುಖ ಸ್ಪಾನ್ಸರ್ ಆಗಿದ್ದ ಎವಿಆರ್ ಗ್ರೂಪ್ ಮಾಲೀಕನ ವಿರುದ್ಧ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

