Husband Suicide : ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ಜರುಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ ಪತಿ ಜೈಲಿಗೆ ಹೋದ ಸಂದರ್ಭದಲ್ಲಿ ಪತ್ನಿ ಜ್ಯೋತಿ ತವರು ಮನೆ ಸೇರಿಕೊಂಡಿದ್ದರು.
ಜೈಲಿಂದ ರಿಲೀಸ್ ಆಗಿದ್ದ ಕೀರ್ತನ್ ನಿನ್ನೆ ಸಂಜೆ ಪತ್ನಿಯನ್ನ ತನ್ನ ಮನೆಗೆ ಕರೆತರಲು ಹೋಗಿದ್ದಾನೆ. ಎಷ್ಟೇ ಕರೆದರೂ ಪತ್ನಿ ಬರಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪತಿ ನಿನ್ನೆ ಸಂಜೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

