ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಹೊಸ ಚರ್ಚೆಗೆ ಎಡೆಮಾಡಿಕೊಡುವಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನ ತ್ಯಾಗದ ಸೂಚನೆ ನೀಡಿದ್ದಾರೆ.
ಸಿಎಂ ಬದಲಾವಣೆ ಕುರಿತ ರಾಜಕೀಯ ಕಿಚ್ಚು ಇನ್ನೂ ಶಮನವಾಗದೇ ಇರುವ ನಡುವೆಯೇ, ಡಿಕೆಶಿಯವರ ಇತ್ತೀಚಿನ ಹೇಳಿಕೆ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
“ಅಧ್ಯಕ್ಷ ಸ್ಥಾನದಲ್ಲಿ ನಾನು ಶಾಶ್ವತವಾಗಿ ಇರಲು ಬಯಸಲ್ಲ. ಈಗಾಗಲೇ 5 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು” ಎಂದು ಡಿಕೆಶಿ ಹೇಳಿದ್ದಾರೆ.
ಈ ಮಾತುಗಳ ಮೂಲಕ ಅವರು ಪರೋಕ್ಷವಾಗಿ ಅಧ್ಯಕ್ಷ ಸ್ಥಾನ ತ್ಯಜಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದಂತಾಗಿದೆ.
ರಾಜ್ಯದ ಕಾಂಗ್ರೆಸ್ ಒಳರಾಜಕೀಯಕ್ಕೆ ಡಿಕೆಶಿಯ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದೇನು ನಡೆಯಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಿಸಿದೆ.

