ಬೆಂಗಳೂರು: ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 43ನೇ ವಸಂತಕ್ಕೆ ಕಾಲಿಟ್ಟಿರುವ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಉತ್ತಮ ಕಥೆಗಾಗಿ ನಿರೀಕ್ಷೆಯಲ್ಲಿದ್ದ ರಮ್ಯಾ, ಕೆಲವು ಸ್ಕ್ರಿಪ್ಟ್‌ಗಳನ್ನು ಕೇಳಿಕೊಂಡಿದ್ದು, ಅವುಗಳಲ್ಲಿ ಒಂದು ಐತಿಹಾಸಿಕ ಸಿನಿಮಾದ ಕಥೆಗೂ ಹಸಿರು ನಿಶಾನೆ ನೀಡಿದರೆಂಬ ಸುದ್ದಿ ಹರಿದಾಡುತ್ತಿದೆ.
ಅಭಿ ಸಿನಿಮಾದ ಮೂಲಕ ಅಪ್ಪು ಜೊತೆ ತೆರೆ ಹಂಚಿಕೊಂಡು ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ರಮ್ಯಾ, ಕನ್ನಡ, ತೆಲುಗು, ತಮಿಳು ಚಿತ್ರರಂಗಗಳಲ್ಲಿ ನಟಿಸಿ ದಕ್ಷಿಣ ಭಾರತದಲ್ಲಿ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಜೊತೆಗೆ ಸಂಸದೆಯಾಗಿ ರಾಜಕೀಯ ರಂಗದಲ್ಲೂ ತಮ್ಮದೇ ಮುದ್ರೆಯನ್ನು ಮೂಡಿಸಿದ್ದರು.
2021ರಲ್ಲಿ ಬಿಡುಗಡೆಯಾದ ನಾಗರಹಾವು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅವರು, ಬಳಿಕ ಚಿತ್ರರಂಗದಿಂದ ಸ್ವಲ್ಪ ದೂರ ಉಳಿದಿದ್ದರು. 2023ರಲ್ಲಿ ಬಿಡುಗಡೆಯಾದ ಹಾಸ್ಟೆಲ್ ಹುಡುಗರು ಸಿನಿಮಾದಲ್ಲಿ ಗೆಸ್ಟ್ ಅಪಿಯರೆನ್ಸ್ ನೀಡಿ ಕಮ್‌ಬ್ಯಾಕ್ ಮಾಡಿದರು.
ರಮ್ಯಾ ಈಗ ಚಿತ್ರ ನಿರ್ಮಾಣಕ್ಕೆ ಸಹ ಕೈ ಹಾಕಲು ಸಿದ್ಧರಾಗಿದ್ದು, ಈ ಹಿನ್ನಲೆಯಲ್ಲಿ ಹಲವಾರು ಸ್ಕ್ರಿಪ್ಟ್‌ಗಳ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ರಮ್ಯಾಗಾಗಿ ಕಥೆಯನ್ನು ರೆಡಿ ಮಾಡಿದ್ದಾಗಿ ತಿಳಿಸಿದ್ದಾರೆ. ರಮ್ಯಾ ಕೂಡಾ ಒಂದು ಕಥೆಯನ್ನು ಆಯ್ಕೆ ಮಾಡಿರುವುದಾಗಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಹೊಸ ಚಿತ್ರ ಘೋಷಣೆ ಸಾಧ್ಯ ಎಂಬ ನಿರೀಕ್ಷೆ ಮೂಡಿದೆ. ಶೀಘ್ರದಲ್ಲೇ ಮತ್ತೊಮ್ಮೆ ಸ್ಯಾಂಡಲ್‌ವುಡ್‌ನಲ್ಲಿ ರಮ್ಯಾ ಮಿಂಚಲಿದ್ದಾರೆ ಎನ್ನುವ ನಿರೀಕ್ಷೆಯಿಂದ ಅಭಿಮಾನಿಗಳು ಖುಷಿಪಡುತ್ತಿದ್ದಾರೆ.

