ಕರ್ನೂಲ್ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದ ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಐವರು ದುರ್ಮರಣ ಹೊಂದಿದ್ದಾರೆ.
ಚಿಕ್ಕಹೊಸಹಳ್ಳಿ (ಬಂಗಾರಪೇಟೆ ತಾಲೂಕು) ನಿವಾಸಿಗಳಾದ ಸತೀಶ್–ಮೀನಾಕ್ಷಿ ದಂಪತಿ ಹಾಗೂ ಅವರ ಕುಟುಂಬದ ಇಬ್ಬರು ಮಕ್ಕಳು ಸೇರಿ ಐವರು ಮಂತ್ರಾಲಯಕ್ಕೆ ತೆರಳುವ ಮಾರ್ಗದಲ್ಲಿ ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ ಸುಮಾರು 5 ಗಂಟೆಯ ಸುಮಾರಿಗೆ ಎರಡು ಕಾರುಗಳ ನಡುವೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಮತ್ತೊಂದು ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರವಾನಗಿ ಮೀರಿದ ವೇಗವೇ ಅಪಘಾತಕ್ಕೆ ಕಾರಣ ಎನ್ನುವ ಪ್ರಾಥಮಿಕ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

