ಬೆಂಗಳೂರು : ಸ್ಯಾಂಡಲ್‌ವುಡ್ ಸೂಪರ್‌ಸ್ಟಾರ್ ನಟ ಯಶ್ ಅವರಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಆದಾಯ ತೆರಿಗೆ ಇಲಾಖೆ ಹಾಕಿದ್ದ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ.
2013ರಿಂದ 2019ರ ಅವಧಿಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ವಿಚಾರವಾಗಿ ಐಟಿ ಇಲಾಖೆ ಯಶ್ ವಿರುದ್ಧ ಕೇಸ್ ದಾಖಲಿಸಿತ್ತು. ಹೊಂಬಾಳೆ ಕನ್ಸ್‌ಟ್ರಕ್ಷನ್ಸ್‌ಗೆ ಸಂಬಂಧಿಸಿದ ತನಿಖೆಯ ವೇಳೆ, ಯಶ್ ಅವರು ವಾಸಿಸುತ್ತಿದ್ದ ಹೊಸಕೆರೆಹಳ್ಳಿಯ ಮನೆಯಲ್ಲಿ ಶೋಧ ಕಾರ್ಯಾಚರಣೆ ನೆರವೇರಿಸಲಾಗಿತ್ತು. ನಂತರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 153C ಅಡಿ ಯಶ್‌ಗೆ ನೋಟಿಸ್ ಜಾರಿ ಮಾಡಲಾಗಿತ್ತು.
ಈ ನೋಟಿಸ್ ಪ್ರಶ್ನಿಸಿ ನಟ ಯಶ್ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಐಟಿ ಇಲಾಖೆ ನೀಡಿದ್ದ ನೋಟಿಸ್ ಕಾನೂನುಬದ್ಧವಲ್ಲ ಎಂದು ತಿಳಿದು ಅದನ್ನು ವಜಾಗೊಳಿಸಿದೆ.
ಸದ್ಯ ಯಶ್ ಅವರು ಟಾಕ್ಸಿಕ್ ಮತ್ತು ರಾಮಾಯಣ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

