By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ : ಸಚಿವ ಬೈರತಿ ಸುರೇಶ್ ವ್ಯಂಗ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ : ಸಚಿವ ಬೈರತಿ ಸುರೇಶ್ ವ್ಯಂಗ್ಯ

ರಾಜ್ಯ-Karnatakaಕೃಷಿ-Agriculture

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ : ಸಚಿವ ಬೈರತಿ ಸುರೇಶ್ ವ್ಯಂಗ್ಯ

BJP has no arrows in its arsenal: Minister Bairati Suresh sarcastic

Published December 8, 2025
Share
2 Min Read
Byrathi Suresh Byrathi Suresh Byrathi Suresh
SHARE

ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ ವಿರುದ್ಧ ಹಲವಾರು ಅಸ್ತ್ರಗಳನ್ನು ಪ್ರಯೋಗಿಸಲಾಗುವುದು ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಆದರೆ, ಅವರ ಪಕ್ಷದ ಬತ್ತಳಿಕೆಯಲ್ಲಿ ಬಾಣವೇ ಇಲ್ಲ ಎಂದು ವ್ಯಂಗ್ಯವಾಡಿದರು.

ಪ್ರತಿಪಕ್ಷ ಬಿಜೆಪಿಯಲ್ಲೇ ಅಶೋಕ ಬಣ, ವಿಜಯೇಂದ್ರ ಬಣ, ಕುಮಾರ್ ಬಂಗಾರಪ್ಪ ಬಣ ಮತ್ತು ರಮೇಶ್ ಜಾರಕಿಹೊಳಿ ಬಣಗಳಿವೆ. ಮೊದಲು ಆ ಬಣಗಳ ಕಿತ್ತಾಟವನ್ನು ಅಶೋಕ್ ಅವರು ಪರಿಹರಿಸಲಿ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ನಮ್ಮದೇನಿದ್ದರೂ ಕಾಂಗ್ರೆಸ್ ಬಣ ಎಂದು ಅವರು ಸ್ಪಷ್ಟಪಡಿಸಿದರು.

ಬಿಜೆಪಿಯವರು ಜನರಲ್ಲಿ ಕೇವಲ ಮತೀಯ ಭಾವನೆಗಳನ್ನು ಕೆರಳಿಸಿ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆಯೇ ಹೊರತು, ಯಾವತ್ತಾದರೂ ಅಭಿವೃದ್ಧಿ ಬಗ್ಗೆ ರಾಜಕೀಯ ಮಾಡಿಲ್ಲ. ಜನರ ಪರವಾಗಿ ಎಂದಿಗೂ ಕೆಲಸವನ್ನೂ ಮಾಡಿಲ್ಲ ಎಂದು ಸಚಿವ ಬೈರತಿ ಸುರೇಶ್ ಟೀಕಿಸಿದರು.
ವಿಪಕ್ಷ ಶಾಸಕರೇ ನಮ್ಮ ಪರವಿದ್ದಾರೆ.

ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೇಳಿಕೊಂಡಿವೆ. ಆ ನಿರ್ಣಯ ಮಂಡಿಸಲಿ. ಆ ಪಕ್ಷಗಳ ಕೆಲವು ಶಾಸಕರೇ ನಮ್ಮ ಸರ್ಕಾರದ ಪರವಾಗಿ ಮತ ಹಾಕುವ ವಿಶ್ವಾಸ ನನಗಿದೆ. ಹೀಗಾಗಿ ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತವಾಗಲಿದೆ ಎಂದು ಸುರೇಶ್ ಕಿಡಿ ಕಾರಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಯಾರು ಯಾವಾಗ, ಎಷ್ಟು ದಿನ ಮುಖ್ಯಮಂತ್ರಿಯಾಗಿರಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಹೀಗಾಗಿ ನಾಯಕತ್ವದ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ರೈತರ ಪರ ಸರ್ಕಾರ
ಪ್ರತಿಪಕ್ಷಗಳು ರೈತರನ್ನು ಎತ್ತಿಕಟ್ಟಿ ಅವರ ಪರವಾಗಿದ್ದೇವೆ ಎಂದು ನಾಟಕವಾಡುತ್ತಿದ್ದಾರೆ. ಧೈರ್ಯವಿದ್ದರೆ ಅವರದೇ ಸರ್ಕಾರವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ ಎಂದು ಸವಾಲು ಹಾಕಿದ ಸುರೇಶ್, ಕಬ್ಬು ಮತ್ತು ಮೆಕ್ಕೆಜೋಳ ಸೇರಿದಂತೆ ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ನಮ್ಮ ಸರ್ಕಾರ ರೈತರ ಪರವಾಗಿ ನಿಂತಿದೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಮತ್ತು ರೈತರ ಪರವಾದ ನಿರ್ಣಯ ತೆಗೆದುಕೊಳ್ಳುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಈ ದಿಸೆಯಲ್ಲಿ ಪ್ರತಿಪಕ್ಷಗಳು ಈಗಲಾದರೂ ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಟ್ಟು ರೈತರ ಪರವಾಗಿ ಧ್ವನಿ ಎತ್ತುವುದನ್ನು ಕಲಿತುಕೊಳ್ಳಲಿ ಎಂದು ಬೈರತಿ ಸುರೇಶ್ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.

You Might Also Like

ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸಿ ಇಲಾಖೆ ಆದೇಶ

ಧಾರವಾಡದಲ್ಲಿ ಬೆಳ್ಳಂ ಬೆಳಗ್ಗೆ ಘರ್ಜಿಸಿದ ಪೊಲೀಸರ ಪಿಸ್ತೂಲ್, ಕಳ್ಳರ ಮೇಲೆ ಫೈರಿಂಗ್

ಪ್ರಜ್ವಲ್‌ ರೇವಣ್ಣSIT ಕಸ್ಟಡಿ ಇಂದಿಗೆ ಅಂತ್ಯ- ಕೋರ್ಟ್‌ ಮುಂದೆ ಹಾಜರು

ಪ್ರೀತಿಸಿ ಓಡಿಹೋದ ಹಿರಿಯ ಪುತ್ರಿ : ಮನನೊಂದು ಅಪ್ಪ-ಅಮ್ಮ ಕಿರಿಯ ಪುತ್ರಿ ಆತ್ಮಹತ್ಯೆಗೆ ಶರಣು

11 ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ : ಜೆಡಿಎಸ್

TAGGED:BJP
Share This Article
Facebook Copy Link Print
Previous Article Goap Goap Goap ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಕೆ.ಗೋಪಾಲಯ್ಯ ಚಾಲನೆ
Next Article Madhu Bangarappa Madhu Bangarappa Madhu Bangarappa ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ ಭಾಗ್ಯ : ಸಚಿವ ಮಧು ಬಂಗಾರಪ್ಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up