By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುವರ್ಣಸೌಧದಲ್ಲಿ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸುವರ್ಣಸೌಧದಲ್ಲಿ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣ

ರಾಜ್ಯ-KarnatakaLatestಬೆಳಗಾವಿ-Belagavi

ಸುವರ್ಣಸೌಧದಲ್ಲಿ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣ

World's second largest Khadi national flag unveiled at Suvarna Soudha

Published December 9, 2025
Share
3 Min Read
Fla 1 Fla 1 Fla 1
SHARE

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.

ಈ ಭವ್ಯ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ತಯಾರಿಸಿ ಸರ್ಕಾರಕ್ಕೆ ಸಮರ್ಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು

ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲ್ಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ರಾಷ್ಟ್ರಭಕ್ತಿ ಸಾರುವ ಸಂದೇಶ
ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು.ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ವಿವರಿಸಿದರು.

ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು.
ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.

ನಾವೆಲ್ಲರೂ ಜಾತ್ಯತೀತರಾಗಬೇಕು
ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಜಾ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಎಷ್ಟರಮಟ್ಟಿಗೆ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.

ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮ :
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

You Might Also Like

ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಆಕ್ರೋಶ

ಇಂದು ಆರನೇ ಹಂತದ ಚುನಾವಣೆ- 58 ಕ್ಷೇತ್ರಗಳಿಗೆ ಮತದಾನ

`ತಿಥಿ’ ಚಿತ್ರದ ಖ್ಯಾತಿಯ ನಟ ಗಡ್ಡಪ್ಪ (Gaddappa) ನಿಧನ

49 ದಿನಗಳ ನಂತರ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

“ರಾಕ್ಷಸ”ನಿಗೆ ನಾಯಕಿಯಾದ ಸೋನಲ್, ಫೆ.26ರಂದು ಚಿತ್ರ ತೆರೆಗೆ

TAGGED:national flagSuvarna Soudha
Share This Article
Facebook Copy Link Print
Previous Article Menstrual Leave ಮಹಿಳಾ ನೌಕರರ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
Next Article IPL 2025 IPL 2025 IPL 2025 ಐಪಿಎಲ್ 2026 ಹರಾಜು : 350 ಆಟಗಾರರ ಅಂತಿಮ ಪಟ್ಟಿ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up