ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಹೊಸ ತಿರುವು ಸಿಕ್ಕಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜನವರಿ 6ರಂದು ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು, ಅವರಿಗೆ ಅವಕಾಶ ಸಿಗಬೇಕು ಎಂಬ ಅಭಿಪ್ರಾಯವನ್ನು ಹೈಕಮಾಂಡ್ ಪರಿಗಣಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. “ಬಹುಶಃ ಜನವರಿ 6ರಂದು ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಕುರಿತು ನನಗೆ ಶೇ.99ರಷ್ಟು ವಿಶ್ವಾಸ ಇದೆ” ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಈ ಹೇಳಿಕೆಯೊಂದಿಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳು ಜೋರಾಗಿದ್ದು, ಹೈಕಮಾಂಡ್‌ನ ಮುಂದಿನ ನಿರ್ಧಾರಕ್ಕೆ ಎಲ್ಲರ ಕಣ್ಣೂ ಕಾದಿದೆ.

