ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಿದೆ. ಸುಮಾರು 22 ಸಾವಿರ ಪುಟಗಳಿರುವ ದೋಷರೋಪಟ್ಟಿಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು ಏಳು ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಪ್ರಕರಣದ ತನಿಖೆಯನ್ನು ವಿಸ್ತೃತವಾಗಿ ನಡೆಸಿರುವ ಎಸ್‌ಐಟಿ, ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರಿಸುವುದು ಮತ್ತು ತೆಗೆದುಹಾಕುವುದು ಸೇರಿದಂತೆ ವಿವಿಧ ಅಕ್ರಮಗಳ ಕುರಿತು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಲಾಗಿದ್ದು, ಮುಂದಿನ ವಿಚಾರಣೆ ಪ್ರಕ್ರಿಯೆ ಆರಂಭವಾಗಲಿದೆ.
ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಕ್ರಮಗಳ ಮೇಲೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ನ್ಯಾಯಾಲಯದ ಮುಂದಿನ ಆದೇಶಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ.

