By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಮಾನದಲ್ಲಿ ಅಸ್ವಸ್ಥಗೊಂಡ ಯುವತಿಗೆ ಸಿಪಿಆರ್ ನೀಡಿ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್‌
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ವಿಮಾನದಲ್ಲಿ ಅಸ್ವಸ್ಥಗೊಂಡ ಯುವತಿಗೆ ಸಿಪಿಆರ್ ನೀಡಿ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್‌
ರಾಜ್ಯ-KarnatakaLatest

ವಿಮಾನದಲ್ಲಿ ಅಸ್ವಸ್ಥಗೊಂಡ ಯುವತಿಗೆ ಸಿಪಿಆರ್ ನೀಡಿ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್‌

Former MLA Dr. Anjali Nimbalkar saves life by giving CPR to a sick woman on a plane

Published December 14, 2025
Share
2 Min Read
SHARE

ಬೆಂಗಳೂರು: ವಿಮಾನ ಪ್ರಯಾಣದ ವೇಳೆ ತೀವ್ರ ಅಸ್ವಸ್ಥಗೊಂಡ ಯುವತಿಗೆ ತಕ್ಷಣ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಖಾನಾಪುರದ ಮಾಜಿ ಶಾಸಕಿ ಹಾಗೂ ವೈದ್ಯೆ ಡಾ. ಅಂಜಲಿ ನಿಂಬಾಳ್ಕರ್‌ (Anjali Nimbalkar) ಅವರ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೋವಾ ರಾಜ್ಯದ ಎಐಸಿಸಿ ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ವಿಮಾನದ ಮೂಲಕ ಗೋವದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ, ಸಹಪ್ರಯಾಣಿಕೆಯಾಗಿದ್ದ ಅಮೆರಿಕ ಮೂಲದ ಯುವತಿಯೊಬ್ಬರಿಗೆ ತೀವ್ರ ನಡುಕ ಕಾಣಿಸಿಕೊಂಡು, ಆಕೆ ಸ್ಥಳದಲ್ಲೇ ಪ್ರಜ್ಞಾಹೀನರಾಗಿ ಕುಸಿದುಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ವಿಮಾನದಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಗಾಬರಿಗೊಂಡಾಗ, ಡಾ. ಅಂಜಲಿ ಅವರು ತಕ್ಷಣವೇ ಧಾವಿಸಿ ತಮ್ಮ ವೈದ್ಯಕೀಯ ಅನುಭವದ ಆಧಾರದಲ್ಲಿ ‘ಕಾರ್ಡಿಯೋ–ಪಲ್ಮನರಿ ರಿಸಸ್ಸಿಟೇಷನ್’ (ಸಿಪಿಆರ್) ನೀಡಲು ಆರಂಭಿಸಿದರು. ಅವರ ಸತತ ಪ್ರಯತ್ನದಿಂದ ಯುವತಿಯ ಉಸಿರಾಟ ಮರುಕಳಿಸಿತು. ಆದರೆ, ಸುಮಾರು ಅರ್ಧ ಗಂಟೆಯ ಬಳಿಕ ಯುವತಿ ಮತ್ತೆ ಪ್ರಜ್ಞೆ ತಪ್ಪಿದಾಗ ಪರಿಸ್ಥಿತಿ ಮತ್ತಷ್ಟು ಗಂಭೀರವಾಯಿತು. ಧೈರ್ಯ ಕಳೆದುಕೊಳ್ಳದ ಡಾ. ಅಂಜಲಿ ಅವರು ಮತ್ತೆ ತುರ್ತು ಚಿಕಿತ್ಸೆ ನೀಡಿ ಯುವತಿಯ ಪ್ರಾಣ ಉಳಿಸಿದರು.

ಇದೇ ವೇಳೆ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ತುರ್ತು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಸಿದ್ದರು. ವಿಮಾನ ನಿಲ್ದಾಣ ತಲುಪಿದ ಕೂಡಲೇ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸುವ ವ್ಯವಸ್ಥೆಯನ್ನು ಖುದ್ದಾಗಿ ನಿಂತು ಮಾಡಿದರು.

ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಕೊಂಡಾಡಿದ್ದಾರೆ. ಗೋವಾ–ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ತುರ್ತು ವೈದ್ಯಕೀಯ ನೆರವಿನ ಅಗತ್ಯವನ್ನು ಅರಿತು ತಕ್ಷಣ ಸಿಪಿಆರ್ ನೀಡಿ ಅಮೆರಿಕಾದ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಹೆಮ್ಮೆಯೆನಿಸಿತು ಎಂದು ಅವರು ತಿಳಿಸಿದ್ದಾರೆ.

ವೈದ್ಯ ವೃತ್ತಿಯಿಂದ ಸಕ್ರಿಯ ರಾಜಕೀಯದಲ್ಲಿದ್ದರೂ ಸಹ, ಸಮಯಪ್ರಜ್ಞೆ ಮತ್ತು ಸೇವಾ ಮನೋಭಾವದಿಂದ ರೋಗಿಯ ನೆರವಿಗೆ ಧಾವಿಸಿದ ಅಂಜಲಿಯವರ ನಡೆ ಅತ್ಯಂತ ಶ್ಲಾಘನೀಯ. ಅಧಿಕಾರವಿರಲಿ ಅಥವಾ ಇಲ್ಲದಿರಲಿ, ಜನಸೇವೆ ಎಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ಕೈಲಾದ ಸಹಾಯಕ್ಕೆ ನಿಲ್ಲುವಂತಹವರು ಸಮಾಜಕ್ಕೆ ಮಾದರಿ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ನೂರುಕಾಲ ಆಯಸ್ಸು ಮತ್ತು ಆರೋಗ್ಯ ನೀಡಿ, ಇನ್ನಷ್ಟು ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

You Might Also Like

ಕೊನೆಗೂ ಅನುಶ್ರೀ ಕೂಡಿಬಂತು ಕಂಕಣ ಭಾಗ್ಯ, ಯಾರು ಆ ಅದೃಷ್ಟವಂತ ವರ..?

ಮನೆಗೆ ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ಚಿನ್ನದ ನಿಧಿ ಪತ್ತೆ

ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್

ರಾಜ್ಯದಲ್ಲಿ ಮಳೆಗಾಲ ಆರಂಭ – ಹೆಚ್ಚಾದ ಹಾವುಗಳ ಕಾಟ

TAGGED:Dr Anjali Nimbalkar
Share This Article
Facebook Copy Link Print
Previous Article ದರ್ಶನ್ ಅಭಿಮಾನಿಗಳ ಪಣ: ‘ಡೆವಿಲ್’ ಗೆಲುವಿಗೆ ಥಿಯೇಟರ್‌ಗಳಲ್ಲಿ ಸಂಭ್ರಮ
Next Article ಲವ್ ಮಾಡಿ ಕೈಕೊಟ್ಟ ಆರೋಪ : ಮದುವೆ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
February 25, 2026
6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್
ಬೆಂಗಳೂರು-Bengaluru
February 25, 2026
ದಾವಣಗೆರೆಯಲ್ಲಿ ದುರ್ಗಾಂಬಿಕಾ ಜಾತ್ರೆ ಸಂಭ್ರಮ, ಹರಕೆ, ಹಬ್ಬ ಮತ್ತು ನೆಂಟರ ಕಲರವ
ದಾವಣಗೆರೆ-Davanagere
February 25, 2026
ಚಿತ್ತಾಪೂರ ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಸೇರಿ 14.73 ಲಕ್ಷ ರೂ. ಕಾಣಿಕೆ ಸಂಗ್ರಹ
ಬೆಳಗಾವಿ-Belagavi
February 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up