ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಶ್ರೀಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಶ್ರೀ ರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನದಲ್ಲಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದರ್ಶನಾನಂತರ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸ್ವಾಮೀಜಿಗಳು ಶ್ರೀ ಋಷಬ್ ಶೆಟ್ಟಿ ಹಾಗೂ ಅವರ ಕುಟುಂಬಕ್ಕೆ ಶೇಷವಸ್ತ್ರ, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಈ ಭೇಟಿಯ ವೇಳೆ ಭಕ್ತಿಭಾವ ಹಾಗೂ ಆತ್ಮೀಯ ವಾತಾವರಣ ಕಂಡುಬಂತು.

