ನವದೆಹಲಿ, ಡಿಸೆಂಬರ್ 25: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನಾಚರಣೆಯ ಅಂಗವಾಗಿ ದೆಹಲಿಯ ಸದೈವ್ ಅಟಲ್ ಸ್ಮಾರಕದಲ್ಲಿ ವಿಶೇಷ ಪ್ರಾರ್ಥನಾ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ಎನ್‌ಡಿಎ ಮಿತ್ರಪಕ್ಷ ಜೆಡಿ-ಯು ನಾಯಕ ಹಾಗೂ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಸೇರಿದಂತೆ ಹಲವು ಸಚಿವರು ಮತ್ತು ಸಂಸದರು ಉಪಸ್ಥಿತರಿದ್ದರು.
ಇದೇ ವೇಳೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಪಕ್ಷದ ಅನೇಕ ನಾಯಕರು ಹಾಗೂ ಗಣ್ಯರು ಭಾಗವಹಿಸಿ, ದೇಶದ ಅಭಿವೃದ್ಧಿ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅಟಲ್ ಬಿಹಾರಿ ವಾಜಪೇಯಿ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿದರು.

