By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮೀರ್ ಅಹಮದ್‌ಗೆ ದೇಶಕ್ಕಿಂತ ತಮ್ಮ ಜನಸಂಖ್ಯೆ ಅಷ್ಟೇ ಮುಖ್ಯ : ಯತ್ನಾಳ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಜಮೀರ್ ಅಹಮದ್‌ಗೆ ದೇಶಕ್ಕಿಂತ ತಮ್ಮ ಜನಸಂಖ್ಯೆ ಅಷ್ಟೇ ಮುಖ್ಯ : ಯತ್ನಾಳ್

ರಾಜಕೀಯ | PoliticsLatest

ಜಮೀರ್ ಅಹಮದ್‌ಗೆ ದೇಶಕ್ಕಿಂತ ತಮ್ಮ ಜನಸಂಖ್ಯೆ ಅಷ್ಟೇ ಮುಖ್ಯ : ಯತ್ನಾಳ್

“For Zameer Ahmed, his population is as important as the country: Yatnal

Published January 1, 2026
Share
2 Min Read
I will announce my decision on Vijayadashami: Yatnal
SHARE

ಬೆಂಗಳೂರು: ಕೋಗಿಲು ಲೇಔಟ್‌ನ ಅಕ್ರಮ ನಿವಾಸಿಗಳಿಗೆ ಸರ್ಕಾರ ಮನೆ ನೀಡುತ್ತಿರುವ ನಿರ್ಧಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಚಿವ ಜಮೀರ್ ಅಹಮದ್‌ಗೆ ದೇಶವೂ ಬೇಡ, ರಾಜ್ಯವೂ ಬೇಡ. ತಮ್ಮ ಜನಸಂಖ್ಯೆ ಹಾಗೂ ಮತದಾರರನ್ನು ಹೆಚ್ಚಿಸಿಕೊಳ್ಳುವುದೇ ಗುರಿಯಾಗಿ ಮನೆಗಳನ್ನು ಹಂಚಲಾಗುತ್ತಿದೆ” ಎಂದು ಕಿಡಿಕಾರಿದರು.

ಅಕ್ರಮ ನಿವಾಸಿಗಳೆಲ್ಲಾ ಮುಸ್ಲಿಮರು ಎನ್ನುವ ರೀತಿಯಲ್ಲಿ ಜಮೀರ್ ಮಾತನಾಡುತ್ತಿರುವುದು ಅಪಾಯಕಾರಿ ಎಂದು ಆರೋಪಿಸಿದ ಯತ್ನಾಳ್, “ದೇಶವನ್ನು ಆದಷ್ಟು ಬೇಗ ಇಸ್ಲಾಮೀಕರಣ ಮಾಡಬೇಕೆಂಬ ಟಾರ್ಗೆಟ್ ಬಿಟ್ಟರೆ ಅವರ ತಲೆಯಲ್ಲಿ ಬೇರೆ ಏನೂ ಇಲ್ಲ. ಜಾತ್ಯಾತೀತತೆಯ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಂ ತುಷ್ಟೀಕರಣ ಮಾಡುತ್ತಿದ್ದಾರೆ. ಹೀಗಾಗಿಯೇ ಇಂತಹ ನಿರ್ಣಯಗಳು ಬರುತ್ತಿವೆ” ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ತಲುಪಿದೆ ಎಂದು ಆರೋಪಿಸಿದ ಅವರು, “ನಿಜವಾದ ಕನ್ನಡಿಗರು ಹಾಗೂ ಮೂಲ ನಿವಾಸಿಗಳಿಗೆ ವಸತಿ ಕಲ್ಪಿಸುವ ಬದಲು, ಕಾಂಗ್ರೆಸ್ ಹೈಕಮಾಂಡ್‌ನ ಒತ್ತಡಕ್ಕೆ ತಲೆಬಾಗಿ ಲೋಕಲ್ ಅಲ್ಲದವರಿಗೆ ಮನೆ ನೀಡಲಾಗುತ್ತಿದೆ. ಅವರ ಪೌರತ್ವ ಪರಿಶೀಲನೆ ಮಾಡದೇ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದನ್ನು ನಾವು ವಿರೋಧಿಸುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿರುವ ನುಸುಳುಕೋರರು, ಬಾಂಗ್ಲಾದೇಶದವರು ಮತ್ತು ರೋಹಿಂಗ್ಯಾಗಳ ಕುರಿತು ಸಮಗ್ರ ತನಿಖೆ ನಡೆಸಿ, ಬಳಿಕವೇ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದ ಯತ್ನಾಳ್, “ದಶಕಗಳಿಂದ ಉತ್ತರ ಕರ್ನಾಟಕದಿಂದ ಕೂಲಿ–ನಾಲಿ ಹಾಗೂ ಜೀವನಕ್ಕಾಗಿ ಬೆಂಗಳೂರಿಗೆ ಬಂದ ಕನ್ನಡಿಗರಿಗೆ ಮೊದಲು ಪುನರ್ವಸತಿ ಕಲ್ಪಿಸಬೇಕು. ಆದರೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆಬಾಗಿ ಕನ್ನಡಿಗರಿಗೆ ಅಪಮಾನ ಮಾಡುವ ಕೆಲಸ ಈ ಸರ್ಕಾರ ಮಾಡುತ್ತಿದೆ” ಎಂದು ಆರೋಪಿಸಿದರು.

ಅಕ್ರಮ ಬಾಂಗ್ಲಾದೇಶಿಗಳ ಕುರಿತು ಕೇಂದ್ರ ಸರ್ಕಾರ ತನಿಖೆ ಆರಂಭಿಸಿದ್ದರೂ ಅದು ಈಗ ಯಾಕೆ ನಿಂತಿದೆ ಎಂಬುದು ತಿಳಿದಿಲ್ಲ ಎಂದ ಅವರು, ಈ ವಿಷಯದಲ್ಲಿ ಚರ್ಚೆ ಅಗತ್ಯವಿದೆ ಎಂದು ಹೇಳಿದರು. “ದೇಶದಲ್ಲಿ ಎಸ್‌ಐಆರ್ ನಡೆಯುತ್ತಿದೆ. ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಕೋಟಿ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲೂ ನಕಲಿ ಮತದಾರರು, ಬಾಂಗ್ಲಾ ಹಾಗೂ ರೋಹಿಂಗ್ಯಾಗಳು ಇದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 19 ಸಾವಿರ ನಕಲಿ ಮತದಾರರು ಇದ್ದಾರೆ ಎಂದು ನಾನು ಈಗಾಗಲೇ ಡಿಸಿಗೆ ಮಾಹಿತಿ ನೀಡಿದ್ದೇನೆ. ರಾಜ್ಯದಲ್ಲೂ ಎಸ್‌ಐಆರ್ ಆರಂಭಿಸಬೇಕು” ಎಂದು ಆಗ್ರಹಿಸಿದರು.

ನಕಲಿ ಮತದಾರರನ್ನು ದೇಶದ ಗಡಿಯಿಂದ ಹೊರಹಾಕಬೇಕು ಎಂದು ಹೇಳಿದ ಅವರು, “ಅದಾಗದಿದ್ದರೆ ಪರಿಸ್ಥಿತಿ ಗಂಭೀರವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ 2026ರಲ್ಲಿ ಬಿಜೆಪಿಗೆ ವಾಪಸ್ ಬರ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, “ನಾನು ಬಿಜೆಪಿಗೆ ವಾಪಸ್ ಬರಬೇಕು ಎನ್ನುವ ಅಭಿಪ್ರಾಯ ಅನೇಕ ಶಾಸಕರಲ್ಲಿದೆ. 2026ರಲ್ಲಿ ಏನಾಗುತ್ತೋ ನೋಡಬೇಕು. ಯಾರಿಗೆ ಶುಭ ಸುದ್ದಿ, ಯಾರಿಗೆ ಅಶುಭ ಸುದ್ದಿ ಎಂಬುದು ಆಗ ಗೊತ್ತಾಗುತ್ತದೆ” ಎಂದರು.

ಬೆಳಗಾವಿ ಅಧಿವೇಶನದಲ್ಲಿಯೂ ಅನೇಕ ಶಾಸಕರು ಬಿಜೆಪಿಗೆ ಬರಬೇಕು ಎಂದು ತಮ್ಮ ಬಳಿ ಹೇಳಿದ್ದಾರೆ ಎಂದು ತಿಳಿಸಿದ ಅವರು, “ನಾನು ಹೋದರೆ ಜನ ದುಡ್ಡು ಖರ್ಚು ಮಾಡದೇ ಸೇರುತ್ತಾರೆ. ನಮ್ಮ ಶಾಸಕರಿಗೆ ಈ ವರ್ಷ ಖರ್ಚು ಕಡಿಮೆ ಆಗಲಿ” ಎಂದು ವ್ಯಂಗ್ಯವಾಡಿದರು.

You Might Also Like

ಮಲ್ಟಿ ಸ್ಟಾರರ್ “ಜೀಬ್ರಾ” ಚಿತ್ರದ ಟೀಸರ್ ರಿಲೀಸ್

ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ: ಮೌನ ಮುರಿದ ಶ್ರೀದೇವಿ ಬೈರಪ್ಪ

ಮುಗಳಖೋಡ ಪಟ್ಟಣದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ

ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ

Share This Article
Facebook Copy Link Print
Previous Article Mur Mur Mur ಹಳೇ ಪ್ರಿಯತಮೆಗೆ ವಿಶ್‌ ಮಾಡಿ ಕೊಲೆಯಾದ ಯುವಕ : ಭಾವಿ ಪತಿ, ಯುವತಿ ಸಹೋದರನಿಂದ ಹತ್ಯೆ
Next Article Darshan And Vijayalakshmi Darshan And Vijayalakshmi Darshan And Vijayalakshmi ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಕಾಮೆಂಟ್ : ಇಬ್ಬರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up