ಅಥಣಿ, ಜ.6: ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಖಂಡಿಸಿ ಡಿಸಿಸಿ ಬ್ಯಾಂಕ್ ನೌಕರರು ಶನಿವಾರ ಸಂಜೆ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ನೌಕರರು, ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಶಾಸಕ ಲಕ್ಷ್ಮಣ ಸವದಿ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಬ್ಯಾಂಕ್ ನೌಕರರು, ಆರೋಪಿಗಳ ಬಂಧನವಾಗುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ. ನಾಳೆ ಬೃಹತ್ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವರದಿ : ಸೂರಜ ಕೋರೆ, ಚಿಕ್ಕೋಡಿ ವರದಿಗಾರರು

