By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ

ರಾಜ್ಯ-KarnatakaLatest

ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ

Cabinet meeting: Many important decisions approved

Published January 8, 2026
Share
3 Min Read
Cabinet Meeting
SHARE

ಬೆಂಗಳೂರು, ಜನವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಜನಪರ ಹಾಗೂ ಅಭಿವೃದ್ಧಿ ಪರ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಹಾಗೂ ರಾಯಚೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡುವ ಮಹತ್ವದ ತೀರ್ಮಾನಕ್ಕೂ ಅನುಮೋದನೆ ನೀಡಲಾಗಿದೆ.

Contents
ಸಚಿವ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳುಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರುಸನ್ನಡತೆ ಆಧಾರದಲ್ಲಿ ಕೈದಿಗಳಿಗೆ ಬಿಡುಗಡೆ

ಸಚಿವ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು

  • ಕೆಎಸ್‌ಡಿಎಲ್ (KSDL) ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ರೂ. ವೆಚ್ಚದಲ್ಲಿ ಸಾಬೂನು ತಯಾರಿಕಾ ಯಂತ್ರಗಳ ಖರೀದಿ
  • ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಮಾದರಿಯ 50 TPD ಬಯೋ-ಸಿಎನ್‌ಜಿ ಘಟಕ ಸ್ಥಾಪನೆ
  • ಕೆಕೆಆರ್‌ಡಿಬಿ ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ
  • ಕೆಕೆಆರ್‌ಡಿಬಿ ಅನುದಾನದಿಂದ ಕಲಬುರಗಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ ನಿರ್ಮಾಣ
  • ಪಿಎಂ–ಎಬಿಹಿಂ (PM-ABHIM) ಯೋಜನೆಯಡಿ 2024–26ನೇ ಸಾಲಿನಲ್ಲಿ ರಾಜ್ಯಾದ್ಯಂತ 196 ಗ್ರಾಮೀಣ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಗಳು (SC-AAM) ಸ್ಥಾಪನೆಗೆ 127.40 ಕೋಟಿ ರೂ. ಅನುಮೋದನೆ
  • ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿಗೆ 24 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ
  • ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅಗತ್ಯ ಯಂತ್ರೋಪಕರಣ–ಪೀಠೋಪಕರಣ ಖರೀದಿಗೆ 40 ಕೋಟಿ ರೂ. ಅನುಮೋದನೆ
  • ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣಕ್ಕೆ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಒಪ್ಪಿಗೆ
  • ಚಾಮರಾಜನಗರ ಜಿಲ್ಲೆಯ 166 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಹಾಗೂ ನಿರ್ವಹಣೆಗೆ 33.04 ಕೋಟಿ ರೂ. ಅನುಮೋದನೆ
  • ಹಳಿಯಾಳ ಪಟ್ಟಣದ ಒಳಚರಂಡಿ ವ್ಯವಸ್ಥೆ ಯೋಜನೆಯಡಿ ನಿರ್ಮಿತ ಘಟಕಗಳ 5 ವರ್ಷಗಳ ನಿರ್ವಹಣೆ ಹಾಗೂ ದುರಸ್ತಿ ಕಾಮಗಾರಿಗೆ 10.60 ಕೋಟಿ ರೂ. ಅನುಮೋದನೆ
  • ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳ ಸ್ಥಾಪನೆಗೆ ಒಪ್ಪಿಗೆ
  • ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ರೂ. ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ
  • ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಗೆ 11.03 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ
  • ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ.87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗಕ್ಕೆ ಮಂಜೂರು

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49ರಲ್ಲಿ 7.5 ಗುಂಟೆ ಹಾಗೂ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಅವರಿಗೆ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸನ್ನಡತೆ ಆಧಾರದಲ್ಲಿ ಕೈದಿಗಳಿಗೆ ಬಿಡುಗಡೆ

ಸನ್ನಡತೆ ಆಧಾರದ ಮೇಲೆ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಇರುವ 33 ಜೀವಾವಧಿ ಶಿಕ್ಷಾ ಬಂಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಬ್ಬರು ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಇಲಾಖೆಯಿಂದ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.

You Might Also Like

ಪಂಕ್ಚರ್ ಶಾಪ್‌ನಲ್ಲಿ ಟೈರ್ ಸ್ಪೋಟಗೊಂಡು ಯುವಕನಿಗೆ ಗಂಭೀರ ಗಾಯ

ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್

ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ಸಮವಸ್ತ್ರ

ಭಾರಿ ಮಳೆಗೆ ನಲುಗಿದ ಬೆಂಗಳೂರು, ಹಲವು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು

ಪತಿ ಬಂಧನ, ಈಗ ಪತ್ನಿ ಭವಾನಿಗೂ ಸಂಕಷ್ಟ?

TAGGED:Cabinet Meeting
Share This Article
Facebook Copy Link Print
Previous Article Thanisandra Thanisandra Thanisandra ಬೆಂಗಳೂರಲ್ಲಿ ಅಕ್ರಮ ಮನೆಗಳ ತೆರವು ಮುಂದುವರಿಕೆ, ಥಣಿಸಂದ್ರದದಲ್ಲಿ 60 ಮನೆಗಳ ತೆರವು
Next Article Yash 01 Yash 01 Yash 01 ಯಶ್ ಹುಟ್ಟುಹಬ್ಬ : ಅಭಿಮಾನಿಗಳಿಗೆ ಕಿಕ್ಕೇರಿಸುವಂತಹ ‘ಟಾಕ್ಸಿಕ್’ ಟೀಸರ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up