By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಲ್ಕತ್ತಾದಲ್ಲಿ ಎರಡು ಗೋದಾಮುಗಳ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 21ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕೋಲ್ಕತ್ತಾದಲ್ಲಿ ಎರಡು ಗೋದಾಮುಗಳ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 21ಕ್ಕೆ ಏರಿಕೆ

ರಾಷ್ಟ್ರೀಯ-NationalLatest

ಕೋಲ್ಕತ್ತಾದಲ್ಲಿ ಎರಡು ಗೋದಾಮುಗಳ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 21ಕ್ಕೆ ಏರಿಕೆ

Death toll in two warehouses fire in Kolkata rises to 21

Published January 30, 2026
Share
2 Min Read
Kolko Kolko Kolko
SHARE

ಕೋಲ್ಕತ್ತಾ, ಜನವರಿ 30: ಕೋಲ್ಕತ್ತಾದ ದಕ್ಷಿಣ ಹೊರವಲಯದ ಆನಂದಪುರ ಪ್ರದೇಶದಲ್ಲಿರುವ ಎರಡು ಗೋದಾಮುಗಳಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ನಾಪತ್ತೆಯಾಗಿರುವ ಸಾಧ್ಯತೆ ಇದ್ದು, ಶೋಧ ಕಾರ್ಯಾಚರಣೆ ಮುಂದುವರಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ಮೃತರ ಗುರುತು ಪತ್ತೆಗಾಗಿ ಸಂಬಂಧಿಕರ 16 ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ, ಡಿಎನ್‌ಎ ಮ್ಯಾಪಿಂಗ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆನಂದಪುರದಲ್ಲಿರುವ ಪುಷ್ಪಾಂಜಲಿ ಡೆಕೋರೇಟರ್ಸ್ ಎಂಬ ಸಂಸ್ಥೆಯ ಗೋದಾಮಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿದ್ದ ವಾವ್ ಮೊಮೊ ಕಂಪನಿಯ ಗೋದಾಮಿಗೆ ಕ್ಷಿಪ್ರವಾಗಿ ಹರಡಿದೆ. ಅಗ್ನಿ ಅವಘಡ ಸಂಭವಿಸಿದ ವೇಳೆ ಗೋದಾಮುಗಳಲ್ಲಿ ಹಲವಾರು ಕಾರ್ಮಿಕರು ನಿದ್ರಿಸುತ್ತಿದ್ದರು. ಸಕಾಲದಲ್ಲಿ ಹೊರಬರಲು ಸಾಧ್ಯವಾಗದೆ ಅನೇಕರು ಬೆಂಕಿಗೆ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾದ ಕಾರ್ಮಿಕರ ಕುಟುಂಬಗಳು ಪೊಲೀಸರಿಗೆ ದೂರು ಸಲ್ಲಿಸಿದ್ದು, ಕೆಲವರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದೆಂಬ ಆತಂಕ ವ್ಯಕ್ತವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪಾಂಜಲಿ ಡೆಕೋರೇಟರ್ಸ್ ಗೋದಾಮಿನ ಮಾಲೀಕ ಗಂಗಾಧರ್ ದಾಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ಗರಿಯಾ ಪ್ರದೇಶದಿಂದ ಅವರನ್ನು ವಶಕ್ಕೆ ಪಡೆದು, ಬುಧವಾರ ವೈದ್ಯಕೀಯ ಪರೀಕ್ಷೆ ನಡೆಸಿ ಉಪ-ವಿಭಾಗೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಗುರುವಾರ ನ್ಯಾಯಾಲಯವು ಅವರನ್ನು ಫೆಬ್ರವರಿ 4ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಡೆಕೋರೇಟರ್ ಸಂಸ್ಥೆಯ ನಾಲ್ವರು ಕಾರ್ಮಿಕರು ಬೆಂಕಿಯಿಂದ ಪಾರಾಗಿದ್ದಾರೆ.

ಅಗ್ನಿ ಅವಘಡದಲ್ಲಿ ಎರಡೂ ಗೋದಾಮುಗಳು ಭಾರೀ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ವಾವ್ ಮೊಮೊ ಸಂಸ್ಥೆ ಗಂಗಾಧರ್ ದಾಸ್ ಅವರಿಂದ ಗೋದಾಮನ್ನು ಬಾಡಿಗೆಗೆ ಪಡೆದಿದ್ದು, ಅಗ್ನಿ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ವಾವ್ ಮೊಮೊ ಸಂಸ್ಥೆ ಸುಮಾರು 12,000 ಚದರ ಅಡಿ ವಿಸ್ತೀರ್ಣದ ಗೋದಾಮನ್ನು ಈ ಸ್ಥಳದಲ್ಲಿ ನಡೆಸುತ್ತಿದ್ದು, ಪ್ಯಾಕೇಜಿಂಗ್ ಸಾಮಗ್ರಿಗಳು, ಪಾನೀಯಗಳು ಹಾಗೂ ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸಲಾಗುತ್ತಿತ್ತು. ಬಹುತೇಕ ಸಾಮಗ್ರಿಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ನಾಶವಾಗಿವೆ.

ಇದಲ್ಲದೆ, ಗೋದಾಮು ಹಾಗೂ ಗೋದಾಮು ಸಂಕೀರ್ಣಕ್ಕೆ ಅಗ್ನಿಶಾಮಕ ಇಲಾಖೆಯಿಂದ ಅಗತ್ಯ ಅನುಮತಿ ಪಡೆದಿರಲಿಲ್ಲ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಒಂದು ಕಾಲದಲ್ಲಿ ನಗರಕ್ಕೆ ಪ್ರಮುಖ ಜಲಮೂಲವಾಗಿದ್ದ ಪೂರ್ವ ಕೋಲ್ಕತ್ತಾದ ಈ ಪ್ರದೇಶವು ಇತ್ತೀಚಿನ ವರ್ಷಗಳಲ್ಲಿ ಅಕ್ರಮ ಗೋದಾಮುಗಳಿಂದ ತುಂಬಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

You Might Also Like

ಮತವನ್ನು ನಮ್ಮ ಪ್ರಜಾಪ್ರಭುತ್ವವ ಬಲಪಡಿಸಲು ಚಲಾಯಿಸಿ: ಮೋದಿ ಕರೆ

ಲಾಲೂ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ರಾಜಧಾನಿಯಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಳ

ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ

ಬಾಲಿವುಡ್ ನಟಿ ದಿಶಾ ಪಟಾನಿ ತಂದೆಗೆ 25 ಲಕ್ಷ ರೂ. ಪಂಗನಾಮ

TAGGED:Kolkata
Share This Article
Facebook Copy Link Print
Previous Article Durandar 01 Durandar 01 Durandar 01 ನೆಟ್​​ಫ್ಲಿಕ್ಸ್ ಮೂಲಕ ಒಟಿಟಿಗೆ ಲಗ್ಗೆಯಿಟ್ಟ ‘ಧುರಂಧರ್’, ಕನ್ನಡಿಗರಿಗೆ ಮಾತ್ರ ನಿರಾಸೆ
Next Article PT Usha ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
RCB KMF RCB KMF RCB KMF
ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up