By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ : ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರು ವಶಕ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ : ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರು ವಶಕ್ಕೆ

ರಾಜ್ಯ-KarnatakaLatest

ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ : ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರು ವಶಕ್ಕೆ

Displaying ’empty trunk’, Tejasvi Surya detained during protest in Bengaluru

Published February 9, 2026
Share
3 Min Read
Tejasvi Surya Tejasvi Surya Tejasvi Surya
SHARE

ಬೆಂಗಳೂರು, ಫೆಬ್ರವರಿ 9: ಬೆಂಗಳೂರು ನಗರದ ಆರ್.ವಿ. ರಸ್ತೆ ನಮ್ಮ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಭಾರೀ ಹೈಡ್ರಾಮ ನಡೆದಿದ್ದು, ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಮ್ಮ ಮೆಟ್ರೋ ದರ ಏರಿಕೆ ಖಂಡಿಸಿ ಸಂಸದ ತೇಜಸ್ವಿ ಸೂರ್ಯ, ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮೆಟ್ರೋ ರೈಲು ಏರಲು ಮುಂದಾದ ತೇಜಸ್ವಿ ಸೂರ್ಯರನ್ನು ಪೊಲೀಸರು ತಡೆದಿದ್ದು, ಅವರ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಪ್ರತಿಭಟನೆಯ ವೇಳೆ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದುಕೊಂಡು, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಅಂಟಿಸಿಕೊಂಡು ಮೆಟ್ರೋ ಏರಲು ಯತ್ನಿಸಿದ್ದು ಗಮನ ಸೆಳೆದಿತು. ಇದನ್ನು ಪೊಲೀಸರು ತಡೆಯುತ್ತಿದ್ದಂತೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಶನಿವಾರವೂ ಮೆಟ್ರೋದಲ್ಲಿ ಪ್ರತಿಭಟನೆ

ಇದಕ್ಕೂ ಮೊದಲು ಶನಿವಾರ ಸಂಸದ ತೇಜಸ್ವಿ ಸೂರ್ಯ ‘#RollBackFareHike’ ಎಂಬ ಬರಹದ ಟೀ ಶರ್ಟ್ ಧರಿಸಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡುವ ಮೂಲಕ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, “MR CM CUT THE DRAMA” ಎಂಬ ಬರಹದ ಟೀ ಶರ್ಟ್ ಮೂಲಕ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ದರ ಏರಿಕೆಗೆ ತಾತ್ಕಾಲಿಕ ತಡೆ

ಬಿಎಂಆರ್‌ಸಿಎಲ್ ಫೆಬ್ರವರಿ 5ರಂದು, ಫೆಬ್ರವರಿ 9ರಿಂದ ನಮ್ಮ ಮೆಟ್ರೋ ದರವನ್ನು ಶೇ.5ರಷ್ಟು ಹೆಚ್ಚಿಸುವುದಾಗಿ ಘೋಷಿಸಿತ್ತು. ಈ ನಿರ್ಧಾರಕ್ಕೆ ಸಾರ್ವಜನಿಕ ವಲಯ ಹಾಗೂ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ. ಮೋಹನ್ ಅವರು ಕೇಂದ್ರ ಸರ್ಕಾರದ ಮೊರೆ ಹೋಗಿದ್ದರು. ಅಂತಿಮವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರ ಸೂಚನೆಯ ಮೇರೆಗೆ ಬಿಎಂಆರ್‌ಸಿಎಲ್ ದರ ಏರಿಕೆ ಪ್ರಸ್ತಾವನೆಗೆ ತಾತ್ಕಾಲಿಕ ತಡೆ ನೀಡಿತು.

ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಎಂಆರ್‌ಸಿಎಲ್,
“ಫೆಬ್ರವರಿ 5, 2026ರಂದು ಪ್ರಕಟಿಸಿದ್ದ ಮಾಧ್ಯಮ ಪ್ರಕಟಣೆಯಲ್ಲಿ ಫೆಬ್ರವರಿ 9ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ,” ಎಂದು ತಿಳಿಸಿದೆ.

“ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು. ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಗಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆ ಒದಗಿಸಲು ಬಿಎಂಆರ್‌ಸಿಎಲ್ ಸದಾ ಬದ್ಧವಾಗಿದೆ,” ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಹೆಚ್ಚುವರಿ ಪೊಲೀಸ್ ಭದ್ರತೆ

ಸೋಮವಾರ ಬಿಜೆಪಿ ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ಮಾಹಿತಿ ಹಿನ್ನೆಲೆಯಲ್ಲಿ, ಬಿಎಂಆರ್‌ಸಿಎಲ್ ಭಾನುವಾರವೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ನ್ಯಾಷನಲ್ ಕಾಲೇಜು ಸೇರಿದಂತೆ ವಿವಿಧ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಿ, ಮೆಟ್ರೋ ಸೇವೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.

ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ,
“ನೀಡಿದ ಭರವಸೆಯಂತೆ, ನಾಳೆಯಿಂದ ಪ್ರಸ್ತಾಪಿತ ಮೆಟ್ರೋ ಭಾಡಿ ಹೆಚ್ಚಳವನ್ನು BMRCL ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಈ ಅನ್ಯಾಯಕರ ಹೆಚ್ಚಳವನ್ನು ವಿರೋಧಿಸಿದ ಬೆಂಗಳೂರು ಜನತೆಗೆ ಇದು ಒಂದು ಜಯ,” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರದ ಜನವಿರೋಧಿ ಪ್ರಸ್ತಾಪವನ್ನು ತಡೆಯಲು ಸಮಯೋಚಿತವಾಗಿ ಹಸ್ತಕ್ಷೇಪ ಮಾಡಿದ ಮಾನ್ಯ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಜೀ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದಗಳು,” ಎಂದರು.

ಇದು ಕೇವಲ ತಾತ್ಕಾಲಿಕ ಪರಿಹಾರ ಮಾತ್ರ ಎಂದು ಹೇಳಿದ ಅವರು, “ರಾಜ್ಯ ಸರ್ಕಾರವು ಮೆಟ್ರೋಗೆ ಶ್ಯಾಡೋ ಕ್ಯಾಶ್ ಸಹಾಯವನ್ನು ಪುನಃ ನೀಡಬೇಕು. ನ್ಯಾಯಸಮ್ಮತ, ವೈಜ್ಞಾನಿಕ ಹಾಗೂ ಪಾರದರ್ಶಕ ಭಾಡಿ ಪರಿಷ್ಕರಣೆಗೆ ಹೊಸ ಭಾಡಿ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು. ಕೈಗೆಟುಕುವ ಸಾರ್ವಜನಿಕ ಸಾರಿಗೆಗಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ,” ಎಂದು ಸ್ಪಷ್ಟಪಡಿಸಿದರು.

You Might Also Like

ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, ಹಲವರು ಆಸ್ಪತ್ರೆಗೆ ದಾಖಲು

ಆಯುಧ ಪೂಜೆಗೆ ಒಂದು ಬಸ್ ಪೂಜೆಗೆ ಕೇವಲ ರೂ.150 ಮಾತ್ರ ನೀಡಿದ ಗ್ಯಾರಂಟಿ ಸರ್ಕಾರ

ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಹಿಂದೆ ಮತಾಂಧತೆ ಮತಾಂತರ ಮಾಫಿಯಾ ಕೈವಾಡ : ಸಿಟಿ ರವಿ

TAGGED:Tejasvi Surya
Share This Article
Facebook Copy Link Print
Previous Article aaCar aaCar aaCar ದೆಹಲಿಯ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆ
Next Article Fire Fire Fire ಮೈಸೂರು ಅಗ್ನಿ ಅವಘಡ, ಗೋದಾಮುಗಳು ಸುಟ್ಟು ಭಸ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up