ಬೆಂಗಳೂರು, ಫೆಬ್ರವರಿ 17: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ ಎಂದು ತಿಳಿಸಿದರು.
ಪರೀಕ್ಷೆಗಳ ಸುಗಮ ಆಯೋಜನೆಗಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನಿಸಿ ಸಮರ್ಪಕ ಸಿದ್ಧತೆ ನಡೆಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ದ್ವಿತೀಯ ಪಿಯುಸಿ ಪರೀಕ್ಷೆ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್, ಹಿಂದಿ ಇತ್ಯಾದಿ)
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬೆಳಗ್ಗೆ 10ರಿಂದ ಮಧ್ಯಾಹಧಿ 1.15ರವರೆಗೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ
ಮೇ 18: ಪ್ರಥಮ ಭಾಷೆ
ಮೇ 19: ವಿಜ್ಞಾನ
ಮೇ 20: ದ್ವಿತೀಯ ಭಾಷೆ
ಮೇ 21: ಗಣಿತ
ಮೇ 22: ತೃತೀಯ ಭಾಷೆ
ಮೇ 23: ಸಮಾಜ ವಿಜ್ಞಾನ
ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ:
ಒಟ್ಟು ವಿದ್ಯಾರ್ಥಿಗಳು – 7,10,363
ಹೊಸಬರು – 6,46,801
ಪುನರಾವರ್ತಿತ – 50,540
ಖಾಸಗಿ ಅಭ್ಯರ್ಥಿಗಳು – 13,022
ಎಸ್‌ಎಸ್‌ಎಲ್‌ಸಿ:
ಒಟ್ಟು ವಿದ್ಯಾರ್ಥಿಗಳು – 9,02,889
ಹೊಸಬರು – 8,12,855
ಪುನರಾವರ್ತಿತ – 62,845
ಖಾಸಗಿ ಅಭ್ಯರ್ಥಿಗಳು – 27,189

