ಹೈದರಾಬಾದ್, ಫೆ.19 – ಟಾಲಿವುಡ್‌ನ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಇದೇ ತಿಂಗಳ 26ರಂದು ರಾಜಸ್ಥಾನದ ಉದಯಪುರ ಪ್ಯಾಲೇಸ್‌ನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ವಿಜಯ್ ಅವರು ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿರುವುದಾಗಿ ತಿಳಿದುಬಂದಿದೆ.
ಆದರೆ, ಮದುವೆ ಆಹ್ವಾನ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಲೀಕ್ ಆದ ಕಾರ್ಡ್ ಪ್ರಕಾರ, ಫೆಬ್ರವರಿ 26ರಂದು ಖಾಸಗಿ ಸಮಾರಂಭದಲ್ಲಿ ವಿವಾಹ ನಡೆಯಲಿದ್ದು, ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಇದಲ್ಲದೆ, ಕೆಲವು ದುಷ್ಕರ್ಮಿಗಳು ಈವೆಂಟ್ ವಿವರಗಳು ಹಾಗೂ ಫೋನ್ ನಂಬರ್‌ಗಳನ್ನು ವೈರಲ್ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಿಜಯ್ ಮತ್ತು ರಶ್ಮಿಕಾ ಅವರ ವೈಯಕ್ತಿಕ ಫೋನ್ ನಂಬರ್‌ಗಳು ಹಾಗೂ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿರುವುದು ಅವರ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ತಂಡ ಆಕ್ರೋಶ ವ್ಯಕ್ತಪಡಿಸಿದೆ.
“ಮದುವೆ ವೈಯಕ್ತಿಕ ವಿಚಾರ. ದಯವಿಟ್ಟು ಗೌರವಿಸಿ,” ಎಂದು ಅವರ ತಂಡ ಮನವಿ ಮಾಡಿದೆ. ಉದಯಪುರದಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಕೇವಲ ಆಪ್ತರು ಮತ್ತು ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

