By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ಒಂದೇ ಕುಟುಂಬದ ಐವರ ಅನುಮಾನಾಸ್ಪದ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ಒಂದೇ ಕುಟುಂಬದ ಐವರ ಅನುಮಾನಾಸ್ಪದ ಸಾವು

ರಾಷ್ಟ್ರೀಯ-NationalLatest

ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ಒಂದೇ ಕುಟುಂಬದ ಐವರ ಅನುಮಾನಾಸ್ಪದ ಸಾವು

UP horror: Family of five found dead in Kasganj, mass suicide suspected

Published February 22, 2026
Share
2 Min Read
Family Suico Family Suico Family Suico
SHARE

ಕಾಸಗಂಜ್ (ಉತ್ತರ ಪ್ರದೇಶ), ಫೆಬ್ರವರಿ 22: ಉತ್ತರ ಪ್ರದೇಶ ರಾಜ್ಯದ ಕಾಸಗಂಜ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಅಮಾಪುರದ ಕೋಟ್ವಾಲಿ ವ್ಯಾಪ್ತಿಯ ಏಟಾ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪದ ಮನೆಯಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ‘ಫೌಜಿ’ (50), ಅವರ ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12) ಮತ್ತು ಅಮರವತಿ (10), ಹಾಗೂ ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. ಐವರ ಸಾವಿನ ಬಗ್ಗೆ ಸ್ಥಳೀಯರು ಸಾಮೂಹಿಕ ಆತ್ಮಹತ್ಯೆಯ ಶಂಕೆ ವ್ಯಕ್ತಪಡಿಸಿದರೂ, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಸತ್ಯವೀರ್ ವೃತ್ತಿಯಲ್ಲಿ ವೆಲ್ಡರ್ ಆಗಿದ್ದು, ಕಳೆದ 2-3 ದಿನಗಳಿಂದ ಕುಟುಂಬದವರು ಮನೆಯಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಬಾಗಿಲು ಒಳಗಿನಿಂದ ಬೀಗ ಹಾಕಲ್ಪಟ್ಟಿರುವುದು ಗಮನಕ್ಕೆ ಬಂದಿದ್ದು, ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಸತ್ಯವೀರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಪತ್ನಿ ಮತ್ತು ಮೂವರು ಮಕ್ಕಳು ಹಾಸಿಗೆಯ ಮೇಲೆ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪ್ರತಿಕ್ರಿಯಿಸಿ, ಕುಟುಂಬವು 2-3 ದಿನಗಳಿಂದ ಹೊರಗೆ ಕಾಣಿಸದಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಆಧರಿಸಿ ಹೇಳುವುದಾದರೆ, ಕುಟುಂಬದ ಉಳಿದ ಸದಸ್ಯರನ್ನು ಹತ್ಯೆ ಮಾಡಿ ಬಳಿಕ ಸತ್ಯವೀರ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇರುವುದಾಗಿ ಶಂಕಿಸಲಾಗಿದೆ. ಆದರೆ, ಪ್ರಕರಣದ ನಿಜಸ್ವರೂಪ ತಿಳಿಯಲು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಫಾರೆನ್ಸಿಕ್ ತಂಡ ಹಾಗೂ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪೊಲೀಸರು ಪಂಚನಾಮೆ ಕಾರ್ಯವಿಧಾನ ಪೂರ್ಣಗೊಳಿಸಿ, ಶವಗಳನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ಆರ್ಥಿಕ ಸಂಕಷ್ಟವೇ ಈ ದುರ್ಘಟನೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗುತ್ತಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

You Might Also Like

ರೇಣುಕಾಸ್ವಾಮಿ ಕೊಲೆ ಪ್ರಕರಣ : ಶೀಘ್ರವೇ ಪೊಲೀಸರ ಕೈಸೇರಲಿದೆ FSL ವರದಿ

ನಟ ರಿಷಭ್‌ ಶೆಟ್ಟಿಗೆ ರಾಷ್ಟ್ರಪತಿಗಳಿಂದ “ಅತ್ಯುತ್ತಮ ನಟ’ ಪ್ರಶಸ್ತಿ ಪ್ರದಾನ

ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್

ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಕೋಟ್ಯಂತರ ರೂ. ವಂಚಿಸಿ ಮಾರ್ವಾಡಿ ಪರಾರಿ

ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದು 5 ಮಂದಿ ಸಾವು

TAGGED:Family SuicideMass Suicide
Share This Article
Facebook Copy Link Print
Previous Article Accc Accc Accc ಮಾಜಿ ಶಾಸಕ ಸುರೇಶ್ ಗೌಡರ ಕಾರು ಪಲ್ಟಿ, ಇಬ್ಬರಿಗೆ ಗಾಯ
Next Article Arr Arr Arr ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು, ಬಾಂಗ್ಲಾದೇಶಿಯರೂ ಸೇರಿ ಎಂಟು ಮಂದಿ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Dhurandar Dhurandar Dhurandar
₹3,000 ಕೋಟಿ ಗಡಿ ದಾಟಿದ ‘ಧುರಂದರ್’ ಫ್ರಾಂಚೈಸಿ : ಐತಿಹಾಸಿಕ ಸಾಧನೆ
ಬಾಲಿವುಡ್​ - Bollywood
April 15, 2026
CBSC CBSC CBSC
CBSE 10ನೇ ತರಗತಿಯ ಫಲಿತಾಂಶ ಪ್ರಕಟ
ರಾಷ್ಟ್ರೀಯ-National
April 15, 2026
Adichunchanagiri Adichunchanagiri Adichunchanagiri
ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ
ರಾಜ್ಯ-Karnataka
April 15, 2026
Samrat Choudhary Samrat Choudhary Samrat Choudhary
ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ
ರಾಷ್ಟ್ರೀಯ-National
April 15, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up