By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ

ರಾಜ್ಯ-KarnatakaLatest

ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ

Administration at people's doorsteps through automated mutation

Published February 24, 2026
Share
4 Min Read
dzgghfh dzgghfh dzgghfh
SHARE

ಬೆಂಗಳೂರು ಫೆಬ್ರವರಿ.24: ಸ್ವಯಂ ಚಾಲಿತ ಮ್ಯುಟೇಷನ್ಗೆ ಚಾಲನೆ ನೀಡುವ ಮೂಲಕ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.

ಮಂಗಳವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ಗೆ ಚಾಲನೆ ನೀಡಿ ಮಾತನಾಡಿದ ಅವರು, “ಕಂದಾಯ ಇಲಾಖೆಯನ್ನು ಜನಪರಗೊಳಿಸಬೇಕು, ಆಡಳಿತದಲ್ಲಿ ಸುಧಾರಣೆ ಮತ್ತು ಸರಳೀಕರಣಗೊಳಿಸಬೇಕು ಎಂಬ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಿಂದ ಹೆಜ್ಜೆ ಹೆಜ್ಜೆಗೂ ಹಲವಾರು ಬದಲಾವಣೆಗಳನ್ನು ತರಲಾಗುತ್ತಿದೆ. ಆ ಬದಲಾವಣಾ ಪರ್ವದ ಮತ್ತೊಂದು ಮಹತ್ವದ ಹೆಜ್ಜೆಯೇ ಸ್ವಯಂ ಚಾಲಿತ ಮ್ಯುಟೇಶನ್ ಗೆ ಚಾಲನೆ. ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯದಲ್ಲಿ ಅನುಷ್ಠಾನಗೊಳಿಸಿ ಸಾಧಕ ಪರಿಶೀಲಿಸಿ ಇಂದಿನಿಂದ ಶೇ.98 ರಷ್ಟು ಎಲ್ಲಾ ಖಾತೆ ಬದಲಾವಣೆಗಳೂ ಸ್ವಯಂ ಚಾಲಿತಗೊಳ್ಳಲು ಮುನ್ನುಡಿ ಇಟ್ಟಿದ್ದೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ಖಾತೆ ಬದಲಾವಣೆ ಕಂದಾಯ ಇಲಾಖೆಯ ಮೂಲ ಜವಾಬ್ದಾರಿಗಳಲ್ಲೊಂದು. ಈ ಹಿಂದೆ ಶಾನುಬೋಗರು ಮಾಡುತ್ತಿದ್ದ ಕೆಲಸವನ್ನು ಈಗ ಭೂಮಿ ತಂತ್ರಾಂಶದ ಮೂಲಕ ಮಾಡಲಾಗುತ್ತಿದೆ. ಆದರೆ, ಇದಕ್ಕಾಗಿ ಜನ ಸಾಮಾನ್ಯರು ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆಯುವುದು ಸಾಮಾನ್ಯವಾಗಿತ್ತು.

ಕೆಲ ಅಧಿಕಾರಿಗಳ ಸ್ವೇಚ್ಛಾಚಾರದಿಂದ, ಅವ್ಯವಸ್ಥೆ ಮತ್ತು ಮಧ್ಯವರ್ತಿಗಳ ಕಿರುಕುಳದಿಂದ ಸಾರ್ವಜನಿಕರು ಶೋಷಣೆಗೆ ಒಳಗಾಗುತ್ತಿದ್ದರು. ಇದರಿಂದ ಸರ್ಕಾರಕ್ಕೂ ಕೆಟ್ಟ ಹೆಸರು ಉಂಟಾಗುತ್ತಿತ್ತು. ಪ್ರಸ್ತುತ ಸ್ವಯಂ ಚಾಲಿತ ಮ್ಯುಟೇಷನ್ಗೆ ಚಾಲನೆ ನೀಡಲಾಗಿದ್ದು, ಈ ಎಲ್ಲಾ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ನೀಡಿದಂತಾಗಿದೆ. ಇನ್ನೂ ಜನ ಸಾಮಾನ್ಯರು ಖಾತೆ ಬದಲಾವಣೆಗಾಗಿ ಸರ್ಕಾರಿ ಕಚೇರಿಗೆ ಅಲೆಯುವಂತಿಲ್ಲ. ಮನೆಯಲ್ಲೇ ಕುಳಿತು ಮೋಬೈಲ್ ಮೂಲಕ ಆನ್ಲೈನ್ನಲ್ಲೇ ತಮ್ಮ ಖಾತೆ ಬದಲಾವಣೆ ಕೆಲಸಗಳನ್ನು ನಿರ್ವಹಿಸಬಹುದು” ಎಂದು ವಿವರಿಸಿದರು.

“ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವ್ಯಾವ ಸೇವೆಗಳಿಗೆ ನೊಟೀಸ್ ನೀಡುವ ಅಗತ್ಯ ಇರುವುದಿಲ್ಲವೋ ಅವುಗಳನ್ನು 2024 ರ ಏಪ್ರಿಲ್ ತಿಂಗಳಿನಿಂದಲೇ ಸ್ವಯಂ ಚಾಲಿತವಾಗಿ ವರ್ಗಾವಣೆಯಾಗುವಂತೆ ಮಾಡಲಾಗಿತ್ತು. ಹಕ್ಕು-ಬಾಧ್ಯತೆ ದಾಖಲಾತಿ, ಋಣ ತೆಗೆಯುವುದು, ಭೂ ಪರಿವರ್ತನೆ, ಪೋಡಿ, ಭೂಸ್ವಾಧೀನ, ನ್ಯಾಯಾಲಯ ಆದೇಶ, ನ್ಯಾಯಾಲಯ ತಡೆಯಾಜ್ಞೆ, ಸರ್ಕಾರದ ಆದೇಶ, ಸಾಗುವಳಿ ಚೀಟಿ ನಮೂದು, ಪಹಣಿ ವರ್ಗಾವಣೆ ಸೇವೆಗಳನ್ನು ಈಗಾಗಲೇ ಸ್ವಯಂ ಚಾಲಿತಗೊಳಿಸಲಾಗಿತ್ತು. ಇಂತಹ ಪ್ರಕರಣಗಳು ತಿಂಗಳಿಗೆ ಸರಾಸರಿ 2.47 ಲಕ್ಷ ಖಾತೆ ಬದಲಾವಣೆಗಾಗಿ ಬರುತ್ತವೆ. ಈ ಪೈಕಿ 1.75 ಲಕ್ಷ ಖಾತೆ ಬದಲಾವಣೆಯನ್ನು ಈಗಾಗಲೇ ಸ್ಚಯಂ ಚಾಲಿತವಾಗಿ ನೆರವೇರಿಸಲಾಗಿದೆ. ಅಂದರೆ ಶೇ.65 ರಿಂದ ಶೇ.71 ರಷ್ಟು ಖಾತೆ ಬದಲಾವಣೆಯನ್ನು ಸ್ವಯಂ ಚಾಲಿತಗೊಳಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದರು.

ಮುಂದುವರೆದು, “2024 ಏಪ್ರಿಲ್ 01 ರಿಂದ 2026 ಫೆಬ್ರವರಿ 20ರ ವರೆಗಿನ ಅವಧಿಯಲ್ಲಿ 35,11,987 ಖಾತೆ ಬದಲಾವಣೆಯನ್ನು ಸ್ವಯಂ ಚಾಲಿತವಾಗಿ ಮಾಡಿದ್ದೇವೆ. ಖಾತೆ ಬದಲಾವಣೆಗೆ ಮೊದಲೆಲ್ಲಾ ಕಂದಾಯ ನಿರೀಕ್ಷಕರು (ಆರ್ಐ) ಕಚೇರಿಗೆ ಬಂದು ಬೆರಳಚ್ಚು ಕೊಡುವವರೆಗೆ ಈ ಕೆಲಸಗಳು ಆಗುತ್ತಿರಲಿಲ್ಲ. ಆದರೆ, ಈಗ ಅಧಿಕಾರಿಗಳ ಡಿಜಿಟಲ್ ಸಹಿಯ ಮೂಲಕ ಎಲ್ಲಾ ಕೆಲಸವೂ ಆನ್ಲೈನ್ನಲ್ಲೇ ಆಗುತ್ತಿದೆ. ಖಾತೆ ಬದಲಾವಣೆ ಮತ್ತು ತಕರಾರು ಸಲ್ಲಿಸಲು ಅಧಿಕಾರಿಗಳು ಕಚೇರಿಗೆ ಬರುವ ಅಗತ್ಯವೂ ಇಲ್ಲದ ಕಾರಣ ಅವರ ಸಮಯವೂ ಉಳಿಯುತ್ತಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಖಾತೆ ಬದಲಾವಣೆ ಹೇಗೆ?
“ಆನ್ಲೈನ್ ಮೂಲಕ ಖಾತೆ ಬದಲಾವಣೆಗೆ ಮನವಿ ಸಲ್ಲಿಸಿದರೆ 7 ದಿನ ನೊಟೀಸ್ ಅವಧಿ ಇರುತ್ತದೆ. ಈ ಅವಧಿಯಲ್ಲಿ ಯಾರು ಬೇಕಾದರೂ ಭೂಮಿ ತಂತ್ರಾಂಶದ ಮೂಲಕ ತಕರಾರು ಸಲ್ಲಿಸಬಹುದು. ಯಾರೂ ತಕರಾರು ಸಲ್ಲಿಸದಿದ್ದರೆ ಎಂಟನೇ ದಿನ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗುತ್ತದೆ. ನೋಂದಣಿಯೇತರವಾಗಿ ಖಾತೆ ಬದಲಾವಣೆಗೆ ಮನವಿ ಬಂದಂತಹ ಪ್ರಕರಣಗಳಿಗೆ 15 ದಿನ ನೊಟೀಸ್ ಅವಧಿ ಇದ್ದು, ತಕರಾರು ಸಲ್ಲಿಸಬಹುದಾಗಿದೆ. ತಕರಾರು ಇಲ್ಲದಿದ್ದರೆ 16ನೇ ದಿನ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗಲಿದೆ” ಎಂದು ತಿಳಿಸಿದರು.

“2024 ಏಪ್ರಿಲ್ 01 ರಿಂದ 2026 ಫೆಬ್ರವರಿ 20ರ ವರೆಗಿನ ಅವಧಿಯಲ್ಲಿ 35,11,987 ಖಾತೆ ಬದಲಾವಣೆಯನ್ನು ಸ್ವಯಂ ಚಾಲಿತವಾಗಿ ಮಾಡಿದ್ದರೆ, ಕೇವಲ 5207 ಪ್ರಕರಣಗಳಲ್ಲಿ ಮಾತ್ರ ತಕರಾರು ದಾಖಲಾಗಿವೆ. ಅಂದರೆ ನಾವು ಒಟ್ಟು ಮ್ಯುಟೇಶನ್ ಶೇ.98 ರಷ್ಟು ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆ ಮಾಡಿದಂತಾಗಿದೆ. ತಕರಾರು ದಾಖಲಿಸಿದ ಪ್ರಕರಣಗಳನ್ನೂ 60 ದಿನಗಳಲ್ಲಿ ಇತ್ಯರ್ಥಗೊಳಿಸಿ ಆದೇಶ ಹೊರಡಿಸುತ್ತಿದ್ದೇವೆ” ಎಂದು ವಿವರಿಸಿದರು.

ಪಹಣಿ ಜೊತೆಗೆ ಆಧಾರ್ ಜೋಡಿಸಲು ಕರೆ
ನಕಲಿ ವಹಿವಾಟು ತಪ್ಪಿಸಿ ಆಸ್ತಿ ಮಾಲೀಕತ್ವವನ್ನು ಮತ್ತಷ್ಟು ಸುಭದ್ರಗೊಳಿಸಲು ಸಾರ್ವಜನಿಕರು ತಮ್ಮ ಪಹಣಿಯ ಜೊತೆಗೆ ಆಧಾರ್ ಜೋಡಣೆಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದ ವೇಳೆ ಈ ಬಗ್ಗೆಯೂ ಗಮನ ಸೆಳೆದ ಅವರು, “ಪಹಣಿಯ ಜೊತೆಗೆ ಆಧಾರ್ ಜೋಡಣೆಯಾದರೆ ಪಹಣಿಯಲ್ಲಿ ಏನೇ ಬದಲಾವಣೆ ಆದರೂ ಆ ಸಂದೇಶವನ್ನು ಆಸ್ತಿ ಮಾಲೀಕರ ಮೊಬೈಲ್ಗೆ ಕಳುಹಿಸಲಾಗುತ್ತದೆ. ಆಗ ಆಸ್ತಿ ಮಾಲೀಕರ ಗಮನಕ್ಕೆ ಬಾರದೆ ನಡೆಯುವ ಖಾತೆ ಬದಲಾವಣೆ ಅಥವಾ ಮಾರಾಟವನ್ನು ತಡೆಯಬಹುದು. ಆ ಮೂಲಕ ಆಸ್ತಿ ಮಾಲೀಕತ್ವಕ್ಕೆ ಖಾತರಿ ಪಡೆಯಬಹುದು. ಇದಲ್ಲದೆ, ನ್ಯಾಯಾಲಯ ಆದೇಶ ನಮೂದಿಸಿದರೆ ಅಥವಾ ಪಹಣಿಯಲ್ಲಿ ಬೇರೆಯವರ ಹೆಸರು ಸೇರಿಸಿದರೂ ಸಹ ಎಸ್ಎಂಎಸ್ ಮೂಲಕ ಮಾಹಿತಿ ಬರುತ್ತೆ. ಆಧಾರ್ ಜೋಡಣೆ ಮಾಡದಿದ್ದರೆ ಆಸ್ತಿ ಮಾಲೀಕರ ಗಮನಕ್ಕೆ ಬಾರದೆ ಖಾತೆ ಬದಲಾವಣೆ ಆಗುವಂತಹ ಅಪರೂಪದ ಸಾಧ್ಯತೆಗಳಿವೆ. ಹೀಗಾಗಿ ಮಾಲಿಕತ್ವ ಸುಭದ್ರವಾಗಿರಬೇಕಾದರೆ ಮೊದಲು ಪಹಣಿ ಜೊತೆಗೆ ಆಧಾರ್ ಜೋಡಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್ ಉಪಸ್ಥಿತರಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಸಂಬಂಧಿತ ಎಲ್ಲಾ ಅಧಿಕಾರಿಗಳೂ ಭಾಗವಹಿಸಿದ್ದರು.

You Might Also Like

ಕಿಡ್ನಾಪ್ ಪ್ರಕರಣ: ರೇವಣ್ಣ ಜೈಲುಪಾಲು

ಸದ್ಯಕ್ಕಿಲ್ಲ “ಡಿ ಗ್ಯಾಂಗ್‌ಗೆ” ರಿಲೀಫ್‌- ದಾಸ ಸೇರಿ 17 ಮಂದಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ

ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ

ಭಾರತ-ಪಾಕ್ ಡಿಜಿಎಂಒಗಳ ನಡುವೆ ಇಂದು ಮಾತುಕತೆ, ಮಹತ್ವದ ಒಪ್ಪಂದ ಸಾಧ್ಯತೆ

TAGGED:Krishna Byre Gowda
Share This Article
Facebook Copy Link Print
Previous Article dhsfhfh dhsfhfh dhsfhfh ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್
Next Article Yatnal Yatnal Yatnal ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up