By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್
ರಾಷ್ಟ್ರೀಯ-NationalLatest

ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್

Police Vs Police: Delhi Police Arrest in Shimla

Published February 26, 2026
Share
2 Min Read
SHARE

ಶಿಮ್ಲಾ, ಫೆಬ್ರವರಿ 26: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಪ್ರಕರಣವು ಭಾರೀ ನಾಟಕೀಯ ತಿರುವು ಪಡೆದುಕೊಂಡಿದೆ. ಆರೋಪಿಗಳನ್ನು ಬಂಧಿಸಲು ಶಿಮ್ಲಾಗೆ ತೆರಳಿದ್ದ Delhi Police ತಂಡವನ್ನೇ Himachal Pradesh Police ವಶಕ್ಕೆ ಪಡೆದ ಘಟನೆ ಚರ್ಚೆಗೆ ಗ್ರಾಸವಾಗಿದೆ.

ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಏಕಾಂಶ್ ಕಪಿಲ್ ನೀಡಿದ ಟ್ರಾನ್ಸಿಟ್ ರಿಮಾಂಡ್ ಆಧಾರದ ಮೇಲೆ ದೆಹಲಿ ಪೊಲೀಸ್ ತಂಡ ಮೂವರು ಆರೋಪಿಗಳಾದ ಸೌರವ್, ಅರ್ಬಾಜ್ ಮತ್ತು ಸಿದ್ಧಾರ್ಥ್ ಅವರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಶಿಮ್ಲಾ ಪೊಲೀಸರು ತಡೆಹಿಡಿದು, ಆರೋಪಿಗಳನ್ನು ಬಲವಂತವಾಗಿ ಕರೆದೊಯ್ಯಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಜೊತೆಗೆ, ಆರೋಪಿಗಳು ತಂಗಿದ್ದ ರೆಸಾರ್ಟ್‌ನ ಸಿಸಿಟಿವಿ ಡಿವಿಆರ್‌ಗಳನ್ನು ಯಾವುದೇ ಅನುಮತಿ ಇಲ್ಲದೇ ತೆಗೆದುಕೊಂಡಿದ್ದಾರೆ ಎಂಬ ಆರೋಪವನ್ನೂ ಮಾಡಿದರು.

ಘಟನೆಯ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿ, ದೆಹಲಿ ಪೊಲೀಸರ ವಾಹನಗಳನ್ನೂ ವಶಕ್ಕೆ ಪಡೆಯಲಾಯಿತು. ಇದರಿಂದ ಎರಡು ರಾಜ್ಯಗಳ ಖಾಕಿ ಪಡೆಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ, ಕೆಲಕಾಲ ಘರ್ಷಣೆ ಏರ್ಪಟ್ಟಿತು. ಬಳಿಕ ಮೂವರು ಆರೋಪಿಗಳನ್ನು ಕರೆದೊಯ್ಯಲು ಅವಕಾಶ ನೀಡಿದ ನಂತರ 24 ಗಂಟೆಗಳ ಬಳಿಕ ಪರಿಸ್ಥಿತಿ ಶಮನವಾಯಿತು.

ಬಂಧಿತ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ನಂತರ ಶಿಮ್ಲಾ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ಸಹ ಹಾಜರಿದ್ದರು.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಪೊಲೀಸರು ಹಲವರನ್ನು ಬಂಧಿಸಿದ್ದರು. ಇನ್ನುಳಿದ ಮೂವರು Himachal Pradeshದ ರೋಹ್ರು ಪ್ರದೇಶದಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ಮಾಹಿತಿ ಆಧರಿಸಿ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದರು.

ಬುಧವಾರ ತಡರಾತ್ರಿ ಶಿಮ್ಲಾದ ದೀನ್ಡಯಾಳ ಉಪಾಧ್ಯಾಯ ವಲಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಆರೋಪಿಗಳನ್ನು ಕರೆತರುತ್ತಿದ್ದ ವೇಳೆ, ಧರ್ಮಪುರ ಸಮೀಪದ ಚಂಡೀಗಢ–ಕಲ್ಕಾ–ಶಿಮ್ಲಾ ಹೆದ್ದಾರಿಯಲ್ಲಿ ಶಿಮ್ಲಾ ಪೊಲೀಸರು ಬ್ಯಾರಿಕೇಡ್ ನಿರ್ಮಿಸಿ ದೆಹಲಿ ಪೊಲೀಸರನ್ನು ತಡೆದರು. ಸುಮಾರು 20 ಮಂದಿ ದೆಹಲಿ ಪೊಲೀಸ್ ಸಿಬ್ಬಂದಿಯನ್ನು ವಶಕ್ಕೆ ಪಡೆದು, ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲಾಯಿತು.

ಶಿಮ್ಲಾ ಪೊಲೀಸರು ಮೂವರು ಸಿಬ್ಬಂದಿ ಮಾತ್ರ ಆರೋಪಿಗಳನ್ನು ಕರೆದುಕೊಂಡು ರಾಜಧಾನಿಗೆ ಹಿಂತಿರುಗಬಹುದು, ಉಳಿದವರು ತನಿಖೆಗೆ ಸಹಕರಿಸಲು ಶಿಮ್ಲಾದಲ್ಲೇ ಉಳಿಯಬೇಕು ಎಂದು ಸೂಚಿಸಿದರು. ಜೊತೆಗೆ ವಶಪಡಿಸಿಕೊಂಡ ಡಿವಿಆರ್‌ಗಳನ್ನು ಹಿಂದಿರುಗಿಸುವಂತೆ ಆಗ್ರಹಿಸಿದರು. ಇದಕ್ಕೆ ದೆಹಲಿ ಪೊಲೀಸರು ಒಪ್ಪದೆ ತಮ್ಮ ಸಿಬ್ಬಂದಿಯನ್ನು ಹಿಂದೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಾಗ್ವಾದಕ್ಕೂ ಕಾರಣವಾಗಿದೆ.

You Might Also Like

ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಕೊಂದ ಮಗ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ರೋಹಿತ್‌ ಶರ್ಮಾ ಟಿ20 ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

ಆಸಿಡ್ ದಾಳಿ ಮಾಡಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ದಾಳಿಗೊಳಗಾದ ಮಾಲೀಕನೇ ವಿಲನ್

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಆರಂಭ, ಹರಿದು ಬಂದ ಭಕ್ತಸಾಗರ

TAGGED:Delhi Police
Share This Article
Facebook Copy Link Print
Previous Article Kerala Story 2 ‘ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಕೇರಳ ಹೈಕೋರ್ಟ್
Next Article ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ
ಬೆಂಗಳೂರು-Bengaluru
February 26, 2026
ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ದೇವರಲ್ಲಿ ಹರಿಕೆ
ಬೆಳಗಾವಿ-Belagavi
February 26, 2026
ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
ತುಮಕೂರು-Tumakuru
February 26, 2026
ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ
ರಾಜ್ಯ-Karnataka
February 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up