By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಸ್ರೇಲ್ ಮತ್ತು ಪಾಲೆಸ್ತೀನ್ ಎರಡೂ ದೇಶಗಳ ಅತ್ಯುನ್ನತ ಗೌರವ ಪಡೆದ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಇಸ್ರೇಲ್ ಮತ್ತು ಪಾಲೆಸ್ತೀನ್ ಎರಡೂ ದೇಶಗಳ ಅತ್ಯುನ್ನತ ಗೌರವ ಪಡೆದ ಪ್ರಧಾನಿ ಮೋದಿ

ವಿದೇಶ-InternationalLatest

ಇಸ್ರೇಲ್ ಮತ್ತು ಪಾಲೆಸ್ತೀನ್ ಎರಡೂ ದೇಶಗಳ ಅತ್ಯುನ್ನತ ಗೌರವ ಪಡೆದ ಪ್ರಧಾನಿ ಮೋದಿ

PM Modi receives highest honour from both Israel and Palestine

Published February 26, 2026
Share
2 Min Read
PM PM PM
SHARE

ಜೆರುಸಲೇಮ್, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್‌ನ ಅತ್ಯುನ್ನತ ಪುರಸ್ಕಾರವಾದ ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ಪ್ರದಾನಿಸಿ ಗೌರವಿಸಲಾಗಿದೆ. ಭಾರತ–ಇಸ್ರೇಲ್ ನಡುವಿನ ದೀರ್ಘಕಾಲದ ಸ್ನೇಹ ಹಾಗೂ ಸಹಕಾರವನ್ನು ಬಲಪಡಿಸುವಲ್ಲಿ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ, ಇಸ್ರೇಲ್ ಸಂಸತ್ತಾದ ನೆಸ್ಸೆಟ್‌ನ ಸ್ಪೀಕರ್ ಅಮೀರ್ ಒಹಾನಾ ಅವರು ಈ ಗೌರವವನ್ನು ಪ್ರಧಾನ ಮಾಡಿದರು.

ಈ ಮೂಲಕ ಪ್ರಧಾನಿ ಮೋದಿ ಅವರು ಇಸ್ರೇಲ್ ಮತ್ತು ಪಾಲೆಸ್ತೀನ್ ಎರಡೂ ರಾಷ್ಟ್ರಗಳಿಂದಲೂ ಅತ್ಯುನ್ನತ ಗೌರವ ಪಡೆದ ಅಪರೂಪದ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. 2018ರಲ್ಲಿ ಪಾಲೆಸ್ತೀನ್ ಸರ್ಕಾರವು ವಿದೇಶಿ ನಾಯಕರಿಗೆ ನೀಡುವ ಅತ್ಯುನ್ನತ ‘ಗ್ರ್ಯಾಂಡ್ ಕಾಲರ್ ಆಫ್ ದಿ ಸ್ಟೇಟ್ ಆಫ್ ಪಾಲೆಸ್ತೀನ್’ ಪ್ರಶಸ್ತಿಯನ್ನು ಮೋದಿಗೆ ನೀಡಿತ್ತು.

ಬುಧವಾರ ನೆಸ್ಸೆಟ್ ಅನ್ನು ಉದ್ದೇಶಿಸಿ ಭಾಷಣ ಮಾಡುವ ಮೊದಲು ಪ್ರಧಾನಿ ಮೋದಿಯನ್ನು ಸಂಸತ್ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಮೊದಲ ಭಾರತೀಯ ನಾಯಕ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾದರು.

ಇಸ್ರೇಲ್ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರನ್ನು ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬಿಗಿಯಾಗಿ ಅಪ್ಪಿಕೊಂಡು ಆತ್ಮೀಯವಾಗಿ ಸ್ವಾಗತಿಸಿದರು.

ಗೌರವ ಸ್ವೀಕರಿಸಿದ ನಂತರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಮೋದಿ, “ನೆಸ್ಸೆಟ್ ಪದಕ ಸ್ವೀಕರಿಸುವುದು ನನಗೆ ಅಪಾರ ಗೌರವ. ಇದನ್ನು ನಾನು ವಿನಮ್ರತೆ ಹಾಗೂ ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಇದು ಭಾರತ ಮತ್ತು ಇಸ್ರೇಲ್ ನಡುವಿನ ಶಾಶ್ವತ ಸ್ನೇಹಕ್ಕೆ ಸಲ್ಲಿಸಿದ ಗೌರವ,” ಎಂದು ಹೇಳಿದರು.

ನೆಸ್ಸೆಟ್‌ನಲ್ಲಿ ಭಾಷಣ ಮಾಡಿದ ಮೋದಿ, ಭಯೋತ್ಪಾದನೆ ಎಲ್ಲೆಡೆ ಶಾಂತಿಗೆ ಬೆದರಿಕೆಯಾಗಿದೆ ಎಂದು ತಿಳಿಸಿದರು. ಗಾಜಾ ಶಾಂತಿ ಒಪ್ಪಂದಕ್ಕಾಗಿ ಭಾರತ ಶ್ರಮಿಸುತ್ತಿದೆ ಎಂದ ಅವರು, ಅಲ್ಲಿನ ಜನತೆಗೆ ನ್ಯಾಯ ಹಾಗೂ ಶಾಂತಿ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.

2023ರಲ್ಲಿ ಹಮಾಸ್ ನಡೆಸಿದ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ ಮೋದಿ, “ನಿಮ್ಮ ನೋವನ್ನು ನಾವು ಅನುಭವಿಸುತ್ತೇವೆ. ನಾಗರಿಕರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಭಯೋತ್ಪಾದನೆಗೆ ಯಾವತ್ತೂ ನ್ಯಾಯವಿಲ್ಲ,” ಎಂದು ಹೇಳಿದರು.

ಭಾರತವು ದೀರ್ಘಕಾಲದಿಂದ ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದೆ ಎಂದು ಹೇಳಿದ ಅವರು, 26/11 ಮುಂಬೈ ದಾಳಿಯನ್ನು ಉಲ್ಲೇಖಿಸಿದರು. ಇಸ್ರೇಲ್‌ನಂತೆ ಭಾರತವೂ ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ನಿಲುವು ಹೊಂದಿದೆ ಎಂದ ಅವರು, ಜಾಗತಿಕ ಮಟ್ಟದಲ್ಲಿ ಸಂಘಟಿತ ಕ್ರಮಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ಮೋದಿ ಒಂಬತ್ತು ವರ್ಷಗಳಲ್ಲಿ ಇದು ಎರಡನೇ ಬಾರಿ ಇಸ್ರೇಲ್‌ಗೆ ಭೇಟಿ ನೀಡಿರುವುದು ಗಮನಾರ್ಹ. 2017ರ ಜುಲೈನಲ್ಲಿ ನಡೆದ ಮೊದಲ ಭೇಟಿಯಲ್ಲಿ ಭಾರತ–ಇಸ್ರೇಲ್ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಮೇಲ್ದರ್ಜೆಗೇರಿಸಲಾಗಿತ್ತು. ಈ ಎರಡನೇ ಭೇಟಿಯು ರಕ್ಷಣಾ, ತಂತ್ರಜ್ಞಾನ, ಕೃಷಿ ಮತ್ತು ಆರ್ಥಿಕ ಸಹಕಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶ ಹೊಂದಿದೆ.

You Might Also Like

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

ಕಾಲೇಜ್ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ

ಭಾರತದ ರಾಯಭಾರಿಯಾಗಿ ಟ್ರಂಪ್ ಅತ್ಯಾಪ್ತ ಸೆರ್ಗಿಯೊ ಗೋರ್ ನೇಮಕ

ರಾಜ್ಯದಲ್ಲಿ ಮುಂದುವರಿದ ರಸ್ತೆ ಅಪಘಾತಗಳು, ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

Virat Kohli : ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ದವೂ ಕೇಸ್

TAGGED:PM Modi
Share This Article
Facebook Copy Link Print
Previous Article Veerappan Veerappan Veerappan ಅಣ್ಣಾವ್ರ ಅಪಹರಣ ಪ್ರಕರಣ : ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್
Next Article Shikhar Dhawan ಮಾಜಿ ಪತ್ನಿಗೆ 5.72 ಕೋಟಿ ಹಿಂತಿರುಗಿಸುವಂತೆ ಶಿಖರ್ ಧವನ್‌ಗೆ ಕೋರ್ಟ್‌ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up