By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ

ರಾಜ್ಯ-KarnatakaLatest

ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ

Meeting with 28 MLAs soon on air pollution in Bengaluru: Eshwar B Khandre

Published February 26, 2026
Share
2 Min Read
Eshwar Khandre Eshwar Khandre Eshwar Khandre
SHARE

ಬೆಂಗಳೂರು, ಫೆ.26: ರಾಷ್ಟ್ರ ರಾಜಧಾನಿ ದೆಹಲಿಯಂತೆಯೇ ಬೆಂಗಳೂರು ಮತ್ತೊಂದು “ಗ್ಯಾಸ್ ಛೇಂಬರ್” ಆಗದಂತೆ ತಡೆಯಲು ಶೀಘ್ರದಲ್ಲೇ ನಗರದ ಎಲ್ಲಾ 28 ಶಾಸಕರೊಂದಿಗೆ ಸಮಗ್ರ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಇಂದು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ನಗರದಲ್ಲಿ ವಾಯು, ಜಲ ಹಾಗೂ ಶಬ್ದ ಮಾಲಿನ್ಯ ದಿನೇದಿನೇ ಹೆಚ್ಚುತ್ತಿರುವುದರಿಂದ ಪಕ್ಷಾತೀತವಾಗಿ ಎಲ್ಲಾ ಜನಪ್ರತಿನಿಧಿಗಳ ಸಹಕಾರ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ರಸ್ತೆಗಳಲ್ಲಿನ ಧೂಳು ಮತ್ತು ವಾಹನಗಳ ದಟ್ಟಣೆ ಕಾರಣದಿಂದ ವಾಯು ಗುಣಮಟ್ಟ ಕುಸಿಯುತ್ತಿದ್ದು, ಮಕ್ಕಳಲ್ಲಿ ಉಸಿರಾಟ ಸಮಸ್ಯೆಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಕೆಲ ವೈದ್ಯರು ಬೆಂಗಳೂರು ಹೊರವಲಯಕ್ಕೆ ತೆರಳುವಂತೆ ಸಲಹೆ ನೀಡುತ್ತಿರುವ ಸ್ಥಿತಿ ಉಂಟಾಗಿದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಸೂಚನೆ

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಾಪಿತ ಮತ್ತು 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕ (AQI) ಮೌಲ್ಯಮಾಪನ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. AQI ಮೌಲ್ಯ 100 ದಾಟಿದಲ್ಲಿ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ ನಿಗದಿತ ಅವಧಿಯಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಸೂಚಿಸಬೇಕು. ನಿಯಮ ಪಾಲಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಉಪ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಹಿರಿಯ ಅಧಿಕಾರಿಗಳ ಸಭೆ ಕರೆದಿಡಲಾಗುವುದು ಎಂದು ಸಚಿವರು ತಿಳಿಸಿದರು.

ಒಮ್ಮೆ ‘ನಿವೃತ್ತರ ಸ್ವರ್ಗ’ ಹಾಗೂ ‘ಉದ್ಯಾನ ನಗರಿ’ ಎಂಬ ಖ್ಯಾತಿ ಪಡೆದಿದ್ದ ಬೆಂಗಳೂರಿನಲ್ಲಿ ಇತ್ತೀಚೆಗೆ ಬಿಸಿಲಿನ ತೀವ್ರತೆ ಹೆಚ್ಚುತ್ತಿರುವುದರ ಬಗ್ಗೆ ಅವರು ಚಿಂತನೆ ವ್ಯಕ್ತಪಡಿಸಿದರು. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಕಾರಣಗಳಾಗಿದ್ದರೂ, ನಗರದ ಹಸಿರು ಹೊದಿಕೆ ವಿಸ್ತರಣೆ ಮೂಲಕ ವಾಯು ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಜಾಗೃತಿ

ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ಸಮಸ್ಯೆ ಗಂಭೀರವಾಗಿರುವುದರಿಂದ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ದಳ ರಚಿಸಿ ನಿಯಂತ್ರಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ಶುದ್ಧೀಕರಣ ಘಟಕಗಳ ಸಂಖ್ಯೆ, ಅವುಗಳ ಸಾಮರ್ಥ್ಯ ಹಾಗೂ ದ್ರವ ತ್ಯಾಜ್ಯ ಸಂಸ್ಕರಣೆ ಪ್ರಮಾಣದ ಕುರಿತು ಒಂದು ತಿಂಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಪರಿಸರ ಇಲಾಖೆಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.

You Might Also Like

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಇಬ್ಬರು ಮಕ್ಕಳು ಕೋಲಾರದ ಸೇರಿ 5 ಜನ ಸಾವು

ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ

ಇಂದು ಜೈಲಿಗೆ ದರ್ಶನ್ ಕುಟುಂಬ ಭೇಟಿ- ತಾಯಿ ನೋಡಿ ದರ್ಶನ್‌ ಭಾವುಕ

ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ಫಿಕ್ಸ್‌

TAGGED:Bengaluru Air Pollution
Share This Article
Facebook Copy Link Print
Previous Article sgdshh sgdshh sgdshh ತಾಯಿಯ ಕಣ್ಣೆದುರೇ ರೌಡಿಶೀಟರ್ ಪವನ್ ಕುಮಾರ್ ಹತ್ಯೆ: ಥಣಿಸಂದ್ರದಲ್ಲಿ ರಿವೇಂಜ್ ಮರ್ಡರ್ ಶಂಕೆ
Next Article Dhanush Dhanush Dhanush ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up