ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆಯ ಮೇಲೂ ಪರಿಣಾಮ ಬೀರುವ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಿರ್ದೇಶನದ ಮೇರೆಗೆ ಪ್ರಕಟಣೆ ಹೊರಡಿಸಲಾಗಿದೆ.
ಪ್ರಕಟಣೆಯ ಪ್ರಕಾರ, ಮಧ್ಯಪ್ರಾಚ್ಯದ ಭೌಗೋಳಿಕ ಹಾಗೂ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆಗೆ ನೀಡಲಾಗುತ್ತಿದ್ದ ಎಲ್ಲಾ ರಿಯಾಯಿತಿಗಳನ್ನು ಮುಂದಿನ ಅಧಿಸೂಚನೆ ಹೊರಬರುವವರೆಗೆ ತಡೆಹಿಡಿಯಲಾಗಿದೆ. IOCL ಪ್ರಧಾನ ಕಚೇರಿಯ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಡೇನ್ ಗ್ಯಾಸ್ ವಿತರಕರು ತಿಳಿಸಿದ್ದಾರೆ.
ಸದ್ಯ ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ ₹1,814 ಇದ್ದು, 47.5 ಕೆಜಿ ಸಿಲಿಂಡರ್ ₹4,532ಕ್ಕೆ ಮಾರಾಟವಾಗುತ್ತಿದೆ. ರಿಯಾಯಿತಿಗಳ ಸ್ಥಗಿತದಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಇತರೆ ವಾಣಿಜ್ಯ ಬಳಕೆದಾರರ ಖರ್ಚು ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

