ಬೆಂಗಳೂರು: ಮುಖ್ಯಮಂತ್ರಿ Siddaramaiah ಮಂಡಿಸಿದ ರಾಜ್ಯ ಬಜೆಟ್ ಕರಾವಳಿ ಜಿಲ್ಲೆಗಳ ವಿರುದ್ಧವಾಗಿದೆ ಎಂದು ಬಿಜೆಪಿ ನಾಯಕ Sunil Kumar ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರಾವಳಿ ಭಾಗದ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ನಾವು ಹಲವು ಬಾರಿ ಬೇಡಿಕೆ ಇಟ್ಟಿದ್ದೇವೆ ಎಂದು ಹೇಳಿದರು. ವಿಶೇಷವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು.
ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಸಹ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಬಜೆಟ್‌ನಲ್ಲಿ ಈ ವಿಷಯಗಳಿಗೆ ಯಾವುದೇ ಪ್ರಾಮುಖ್ಯತೆ ನೀಡಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಂತೆ ನಾವು ಆಗ್ರಹಿಸಿದ್ದೇವೆ. ಪಶ್ಚಿಮ ವಾಹಿನಿ ಯೋಜನೆಯ ಮೂಲಕ ಅದನ್ನು ಕೈಗೊಳ್ಳಬೇಕು ಎಂದು ಹೇಳಿದ್ದರೂ ಈ ಬಜೆಟ್‌ನಲ್ಲಿ ಅದಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದರು.
ಇದೇ ವೇಳೆ ಬಂದರು ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿಲ್ಲ. ಮೀನುಗಾರರ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಿಲ್ಲ ಎಂದು ಸುನೀಲ್ ಕುಮಾರ್ ಆರೋಪಿಸಿದರು.

