ಪುಣೆ: ಮಾರ್ಚ್ 8ರಂದು ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ನಡೆದ ಸಂಭ್ರಮಾಚರಣೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಭಾರತ ತಂಡದ ಆಲ್‌ರೌಂಡರ್ Hardik Pandya ಅವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪುಣೆಯಲ್ಲಿ ದೂರು ದಾಖಲಾಗಿದೆ.
ಅಹಮದಾಬಾದ್‌ನ Narendra Modi Stadium ನಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ಪಾಂಡ್ಯ ರಾಷ್ಟ್ರಧ್ವಜವನ್ನು ಮೈಮೇಲೆ ಸುತ್ತಿಕೊಂಡು ಮೈದಾನದಲ್ಲೇ ಮಲಗಿದ್ದಾರೆಯೆಂಬ ಆರೋಪ ಕೇಳಿಬಂದಿದೆ. ಅಲ್ಲದೆ ಸಂಭ್ರಮಾಚರಣೆ ವೇಳೆ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಪೋಡಿಯಂ ಮೇಲೆ ಮಲಗಿದ್ದಾಗಲೂ ರಾಷ್ಟ್ರಧ್ವಜವನ್ನು ಮೈಮೇಲೆ ಧರಿಸಿದ್ದರು ಎನ್ನಲಾಗಿದೆ. ಇದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಂತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Prevention of Insults to National Honour Act, 1971 ಪ್ರಕಾರ ರಾಷ್ಟ್ರಧ್ವಜವನ್ನು ವಸ್ತ್ರದಂತೆ ಬಳಸುವುದು ಅಥವಾ ಅದು ನೆಲಕ್ಕೆ ತಾಗುವಂತೆ ಮಾಡುವುದು ನಿಯಮ ವಿರೋಧವಾಗಿದೆ.
ಈ ಹಿನ್ನೆಲೆಯಲ್ಲಿ ಪುಣೆ ಪೊಲೀಸರು ದೂರು ಸ್ವೀಕರಿಸಿದ್ದು, ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ. ಆರೋಪ ಸಾಬೀತಾದರೆ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯಡಿ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸುವ ಸಾಧ್ಯತೆ ಇದೆ.

