By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ
ರಾಜಕೀಯ | PoliticsLatest

ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ

BJP is the father of 'Operation Kamal', known for horse trading: DK Shivakumar

Published March 14, 2026
Share
2 Min Read
DK Shivakuamr
SHARE

ಬೆಂಗಳೂರು, ಮಾ.14: “ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು. ಕುದುರೆ ವ್ಯಾಪಾರಕ್ಕೆ ಹೆಸರುವಾಸಿಯಾಗಿರುವ ಬಿಜೆಪಿ ವಿರುದ್ಧ ನಾವು ಎಚ್ಚರಿಕೆಯಿಂದಿದ್ದೇವೆ. ಅದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ,” ಎಂದು ಉಪ ಮುಖ್ಯಮಂತ್ರಿ D. K. Shivakumar ತೀವ್ರವಾಗಿ ವಾಗ್ದಾಳಿ ನಡೆಸಿದರು.

ವಿಧಾನಸೌಧದ ಆವರಣದಲ್ಲಿ ಹಾಗೂ ಬಿಡದಿಯ ರೆಸಾರ್ಟ್ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಒಡಿಶಾ ಶಾಸಕರು ರಾಮನಗರದ ರೆಸಾರ್ಟ್‌ನಲ್ಲಿ ತಂಗಿರುವ ವಿಚಾರಕ್ಕೆ ಸ್ಪಷ್ಟನೆ ನೀಡಿದರು.

ರಾಜಕೀಯ ಪಕ್ಷಗಳಿಗೆ ಕೆಲವೊಮ್ಮೆ ಕುದುರೆ ವ್ಯಾಪಾರದ ಭೀತಿ ಇರುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳು ಎದುರಿಸುವ ಸಾಮಾನ್ಯ ಸಮಸ್ಯೆ ಇದಾಗಿದೆ. ಒಡಿಶಾ ಶಾಸಕರು ಇಲ್ಲಿಗೆ ಬಂದಿರುವಾಗ ಅವರಿಗೆ ಅಗತ್ಯ ನೆರವು ನೀಡುವುದು ನಮ್ಮ ಕರ್ತವ್ಯ. ನಾನು ಹಾಗೂ ನಮ್ಮ ಶಾಸಕರು ಅವರನ್ನು ಭೇಟಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಅವರದೇ ಶಾಸಕರ ಮೇಲೆ ನಂಬಿಕೆ ಇಲ್ಲ ಎಂಬ ಕೇಂದ್ರ ಸಚಿವ Pralhad Joshi ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಹಾಗಿದ್ದರೆ ಅವರು ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಿದ್ದು ಯಾಕೆ?” ಎಂದು ಪ್ರಶ್ನಿಸಿದರು.

ನಮ್ಮ ಶಾಸಕರಿಗೆ ದೊಡ್ಡ ಆಫರ್‌ಗಳು ಬಂದಿವೆ

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಭೀತಿ ಎದುರಾಗಿರುವುದಾಗಿ ಅವರು ಹೇಳಿದರು. ನಮ್ಮ ಶಾಸಕರ ಮೇಲೆ ಒತ್ತಡವಿದ್ದು, ದೊಡ್ಡ ದೊಡ್ಡ ಆಫರ್‌ಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದರು. ಸುಮಾರು 14–15 ಜನ ಶಾಸಕರು ಇಲ್ಲಿ ತಂಗಿದ್ದಾರೆ. ಒಡಿಶಾ ಪಿಸಿಸಿ ಅಧ್ಯಕ್ಷರು ಕರೆ ಮಾಡಿ ಜಾತ್ಯಾತೀತ ಪಕ್ಷಗಳು ಒಂದಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಅವರ ಮನವಿಗೆ ಗೌರವ ನೀಡಿ ಇಲ್ಲಿ ಉತ್ತಮ ವಾತಾವರಣವಿದೆ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ಬಿಜೆಡಿ, ಕಮ್ಯುನಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಬಿಜೆಪಿ ತಮ್ಮ ಕೆಲಸ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಯಾರೂ ಮುಟ್ಟಲೂ ಆಗುವುದಿಲ್ಲ

ಟ್ರಬಲ್ ಶೂಟರ್ ಕೆಲಸ ಮುಗಿದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಮಾಗಡಿ ಬಾಲಕೃಷ್ಣ ಮತ್ತು ಸಿ.ಪಿ. ಯೋಗೇಶ್ವರ್ ಅವರಂತಹ ನಾಯಕರ ಅನುಭವದ ಮೇಲೆ ನಾವು ನಂಬಿಕೆ ಇಟ್ಟುಕೊಂಡಿದ್ದೇವೆ. ನಮ್ಮ ಜಿಲ್ಲೆಯ ಎಲ್ಲ ಶಾಸಕರಿಗೂ ಜವಾಬ್ದಾರಿ ಇದೆ. ಯಾರೂ ಇಲ್ಲಿ ಬರಲು ಆಗುವುದಿಲ್ಲ, ಮುಟ್ಟಲೂ ಆಗುವುದಿಲ್ಲ, ಮಾತನಾಡುವುದಕ್ಕೂ ಅವಕಾಶ ಇಲ್ಲ ಎಂದು ಹೇಳಿದರು.

ಈ ಹಿಂದೆ ಗುಜರಾತ್ ಚುನಾವಣೆಯ ಸಮಯದಲ್ಲೂ ಪಕ್ಷಕ್ಕೆ ನೆರವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ನಾನು ಅದ ಬಗ್ಗೆ ಮಾತನಾಡುವುದಿಲ್ಲ. ಕಾದು ನೋಡೋಣ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ,” ಎಂದು ಹೇಳಿದರು.

ಶಾಸಕರನ್ನು ಯಾವಾಗ ವಾಪಸ್ ಕರೆದುಕೊಂಡು ಹೋಗುವುದು ಎಂಬ ಪ್ರಶ್ನೆಗೆ, “ಅದನ್ನು ನಾವು ತೀರ್ಮಾನ ಮಾಡುತ್ತೇವೆ,” ಎಂದು ಅವರು ಹೇಳಿದರು.

You Might Also Like

ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ಆರೋಪಿಗೆ ಗುಂಡೇಟು

ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಮತ್ತೆ ಶೇ.10ರಷ್ಟು ಜಾಗತಿಕ ಶುಲ್ಕ ಘೋಷಣೆ ಮಾಡಿದ ಟ್ರಂಪ್

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ

ಭಾರತದ ರಕ್ಷಣಾ ಬಜೆಟ್ ಹೆಚ್ಚಳಕ್ಕೆ ಮುಂದಾದ ಭಾರತ ಸರ್ಕಾರ

TAGGED:DK ShivakumarOperation Kamala
Share This Article
Facebook Copy Link Print
Previous Article CA CA CA ಮಾಧ್ಯಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಪರ ನಿಲ್ಲಬೇಕು, ವೃತ್ತಿಧರ್ಮ ಕಾಪಾಡಿಕೊಳ್ಳಬೇಕು : ಸಿಎಂ
Next Article LPG LPG LPG LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

LPG LPG LPG
LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ
ರಾಜ್ಯ-Karnataka
March 14, 2026
CA CA CA
ಮಾಧ್ಯಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಪರ ನಿಲ್ಲಬೇಕು, ವೃತ್ತಿಧರ್ಮ ಕಾಪಾಡಿಕೊಳ್ಳಬೇಕು : ಸಿಎಂ
ರಾಜ್ಯ-Karnataka
March 14, 2026
Priyank Kharge Priyank Kharge Priyank Kharge
ಗ್ಯಾಸ್ ಸಿಲಿಂಡರ್ ಬಿಕ್ಕಟ್ಟಿಗೆ ಮೋದಿ ವಿಫಲ ವಿದೇಶಾಂಗ ನೀತಿ ಕಾರಣ : ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ-Karnataka
March 14, 2026
Hasn Hasn Hasn
ಗಾಂಜಾ ಅಮಲಿನಲ್ಲಿ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಪುಂಡರಿಗೆ ಹಿಗ್ಗಾಮುಗ್ಗ ಥಳಿಸಿದ ಜನ
ಹಾಸನ-Hassan
March 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up