ಮುಂಬೈ: Bollywoodನಲ್ಲಿ ಬಹು ನಿರೀಕ್ಷಿತವಾಗಿದ್ದ Ramayana ಸಿನಿಮಾದ ಟೀಸರ್ ಬಿಡುಗಡೆಯಾಗಿ ಭಾರೀ ಸಂಚಲನ ಮೂಡಿಸಿದೆ. Ranbir Kapoor ಅವರು ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಲುಕ್ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅದ್ಭುತ ಕಲರ್‌ಫುಲ್ ದೃಶ್ಯಾವಳಿಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ VFX ತಂತ್ರಜ್ಞಾನದಿಂದ ಸಿನಿಮಾ ಕಂಗೊಳಿಸುತ್ತಿದ್ದು, ಇದು ಭಾರತೀಯ ಚಿತ್ರರಂಗದ ಅತಿದೊಡ್ಡ ಪ್ರಾಜೆಕ್ಟ್ ಆಗುವ ನಿರೀಕ್ಷೆ ಹೆಚ್ಚಿಸಿದೆ. ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಶುರುವಾಗಿದೆ.
ಈ ಭವ್ಯ ಚಿತ್ರವನ್ನು ನಿರ್ಮಾಪಕ Namit Malhotra ನಿರ್ಮಿಸುತ್ತಿದ್ದು, ದೊಡ್ಡ ಮಟ್ಟದಲ್ಲಿ ಹಣ ಹೂಡಿಕೆ ಮಾಡಲಾಗಿದೆ. Nitesh Tiwari ನಿರ್ದೇಶನದ ಈ ಚಿತ್ರದಲ್ಲಿ ಪ್ರಾಚೀನ ರಾಮಾಯಣ ಕಥೆಯನ್ನು ಆಧುನಿಕ ತಂತ್ರಜ್ಞಾನ ಬಳಸಿ ಜಾಗತಿಕ ಮಟ್ಟದಲ್ಲಿ ತೆರೆಗೆ ತರಲಾಗುತ್ತಿದೆ.
ಸುಮಾರು 4000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ Yash ರಾವಣನಾಗಿ, Sai Pallavi ಸೀತೆಯಾಗಿ, Sunny Deol ಹನುಮಂತನಾಗಿ ಹಾಗೂ Ravi Dubey ಲಕ್ಷ್ಮಣನಾಗಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದ VFX ಕಂಪನಿ DNEG ಹಾಗೂ ವಿದೇಶಿ ತಂತ್ರಜ್ಞರ ಸಹಯೋಗದೊಂದಿಗೆ ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬರುತ್ತಿದೆ.
‘ರಾಮಾಯಣ’ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, 2026 ಮತ್ತು 2027ರ ದೀಪಾವಳಿಯಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ಇದು ಭಾರತೀಯ ಸಿನಿ ಇತಿಹಾಸದಲ್ಲೇ ಅತಿದೊಡ್ಡ ಮತ್ತು ಮಹತ್ವಾಕಾಂಕ್ಷಿ ಯೋಜನೆ ಎನ್ನಲಾಗುತ್ತಿದೆ.

