ಬೆಂಗಳೂರು, ಏಪ್ರಿಲ್ 08: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ 2026ನೇ ಸಾಲಿನ ದ್ವಿತೀಯ ಪಿಯುಸಿ (PUC) ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 09 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು ಎಂದು ಅಧಿಕೃತವಾಗಿ ತಿಳಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in
ವೆಬ್‌ಸೈಟ್ ಹಾಗೂ KarnatakaOne ಮೊಬೈಲ್ ಆಪ್ ಮೂಲಕ ಪರಿಶೀಲಿಸಬಹುದಾಗಿದೆ. ಜೊತೆಗೆ, ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಹಾಗೂ ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳಿಗೆ ಡಿಜಿಲಾಕರ್ (DigiLocker) ಮೂಲಕ ಡಿಜಿಟಲ್ ಅಂಕಪಟ್ಟಿ ಲಭ್ಯವಾಗಲಿದೆ. ವಿದ್ಯಾರ್ಥಿಗಳು https://www.digilocker.gov.in
ವೆಬ್‌ಸೈಟ್ ಬಳಸಿಕೊಂಡು ತಮ್ಮ ಮಾರ್ಕ್ಸ್ ಕಾರ್ಡ್ ಅನ್ನು ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಇದಲ್ಲದೆ, ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೂ ಇದೇ ದಿನ ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು.

