By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯ-KarnatakaLatest

ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

SOP for the safety of those going for trekking

Published April 9, 2026
Share
2 Min Read
Trekking
SHARE

ಬೆಂಗಳೂರು, ಏಪ್ರಿಲ್ 9: ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಚಾರಣಿಗರ ನಾಪತ್ತೆ ಪ್ರಕರಣಗಳ ಹಿನ್ನೆಲೆ, ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಯನ್ನು ಖಚಿತಪಡಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಚಾರಣಿಗರ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಸಮಗ್ರ ಮಾರ್ಗಸೂಚಿ (SOP) ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಪರ್ವತದಲ್ಲಿ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ ಎಂಬ ಮಹಿಳೆ ಮೂರು ದಿನಗಳ ಕಾಲ ಕಾಡಿನಲ್ಲಿ ನಾಪತ್ತೆಯಾಗಿದ್ದ ಘಟನೆ ಆತಂಕ ಮೂಡಿಸಿತ್ತು. ಇದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿದ್ದ ಪ್ರಕರಣವೂ ಚರ್ಚೆಗೆ ಗ್ರಾಸವಾಗಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕಠಿಣ ಕ್ರಮ ಅಗತ್ಯವೆಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಚಾರಣ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಮತ್ತು ಕಟ್ಟುನಿಟ್ಟಿನ SOP ರೂಪಿಸಲು ಆದೇಶಿಸಿದ್ದಾರೆ. ಇದರ ಮೂಲಕ ಚಾರಣಕ್ಕೆ ಮಾನದಂಡಗಳನ್ನು ಜಾರಿಗೆ ತರುವ ಉದ್ದೇಶ ಹೊಂದಲಾಗಿದೆ.

ಚಾರಣಿಗರ ಮೇಲ್ವಿಚಾರಣೆಗೆ ತಂತ್ರಜ್ಞಾನ ಬಳಕೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಅರಣ್ಯ ಇಲಾಖೆಯ ಇ-ಗಸ್ತು (e-Patrolling) ವ್ಯವಸ್ಥೆಯನ್ನು ವಿಸ್ತರಿಸುವುದರ ಜೊತೆಗೆ, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆಯಲ್ಲಿರುವ ಎಂ-ಸ್ಟ್ರೈಪ್ಸ್ (M-STrIPES) ಮಾದರಿಯಲ್ಲಿ ಚಾರಣಿಗರಿಗಾಗಿ ಪ್ರತ್ಯೇಕ ಟ್ರ್ಯಾಕಿಂಗ್ ಆಪ್ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ.

ಈ ಆಪ್ ಅನ್ನು ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್‌ಗಳಲ್ಲಿ ಅಳವಡಿಸುವ ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ದಾರಿ ತಪ್ಪಿದವರ ಸ್ಥಳವನ್ನು ತಕ್ಷಣ ಪತ್ತೆಹಚ್ಚಿ ಶೋಧ ಕಾರ್ಯಾಚರಣೆಯನ್ನು ವೇಗಗೊಳಿಸಲು ಸಾಧ್ಯವಾಗುತ್ತದೆ.

ಇದರ ಜೊತೆಗೆ, ಚಾರಣಿಗರ ಭದ್ರತೆಯನ್ನು ಹೆಚ್ಚಿಸಲು ಗುಂಪು ವಿಮೆ (Group Insurance) ಕಡ್ಡಾಯಗೊಳಿಸುವ ಯೋಜನೆಯೂ ಮುಂದಾಗಿದೆ. ಅಪಘಾತ ಅಥವಾ ಅನಾಹುತ ಸಂಭವಿಸಿದರೆ ಚಾರಣಿಗರಿಗೆ ಆರ್ಥಿಕ ಭದ್ರತೆ ಒದಗಿಸುವುದು ಇದರ ಉದ್ದೇಶವಾಗಿದೆ.

ಚಾರಣದ ವೇಳೆ ಮಾರ್ಗದರ್ಶನ ನೀಡುವ ನೇಚರ್ ಗೈಡ್‌ಗಳ ಪಾತ್ರವನ್ನೂ ಬಲಪಡಿಸಲಾಗುತ್ತಿದೆ. ಗೈಡ್‌ಗಳಿಗೆ ಕಡ್ಡಾಯವಾಗಿ ವೈರ್‌ಲೆಸ್ ಸೆಟ್‌ಗಳನ್ನು ಒದಗಿಸುವ ಮೂಲಕ ಅರಣ್ಯ ಇಲಾಖೆ ಮತ್ತು ರಕ್ಷಣಾ ತಂಡಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಜೊತೆಗೆ, ಚಾರಣಿಗರೊಂದಿಗೆ ತೆರಳುವ ಗೈಡ್‌ಗಳ ಹೊಣೆಗಾರಿಕೆಯನ್ನು ಸ್ಪಷ್ಟವಾಗಿ ನಿಗದಿಪಡಿಸಲು ಸಚಿವರು ಸೂಚಿಸಿದ್ದಾರೆ.

ಈ ಕ್ರಮಗಳ ಮೂಲಕ ಚಾರಣದ ವೇಳೆ ಸಂಭವಿಸಬಹುದಾದ ಅಪಾಯಗಳನ್ನು ತಡೆಯುವ ಜೊತೆಗೆ, ಸುರಕ್ಷಿತ ಮತ್ತು ನಿಯಂತ್ರಿತ ಚಾರಣ ವ್ಯವಸ್ಥೆ ರೂಪಿಸುವತ್ತ ಸರ್ಕಾರ ಮುಂದಾಗಿದೆ.

You Might Also Like

ವಕೀಲ ದೇವರಾಜೇ ಗೌಡಾಗೆ ಬಿಗ್‌ ರಿಲೀಫ್‌- ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದ ಪಾಕ್ ಪ್ರಧಾನಿ ಶೆಹಬಾಜ್

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

2026ರಲ್ಲಿ ಸಂಭವಿಸಲಿವೆ ಭಯಾನಕ ಘಟನೆಗಳು : ಕೋಡಿಮಠದ ಶ್ರೀ ಭವಿಷ್ಯ

ಗುಜರಾತ್ : ಅಹಮದಾಬಾದ್‌ನಲ್ಲಿ ದೇಶದ 3ನೇ HMPV ಪ್ರಕರಣ ಪತ್ತೆ

Share This Article
Facebook Copy Link Print
Previous Article mamata Vs Modi mamata Vs Modi mamata Vs Modi ಪಶ್ಚಿಮ ಬಂಗಾಳ ಚುನಾವಣೆ : ದೀದಿ ವಿರುದ್ದ ಮೋದಿ ವಾಗ್ದಾಳಿ
Next Article Rice 01 Rice 01 Rice 01 ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
mamata Vs Modi mamata Vs Modi mamata Vs Modi
ಪಶ್ಚಿಮ ಬಂಗಾಳ ಚುನಾವಣೆ : ದೀದಿ ವಿರುದ್ದ ಮೋದಿ ವಾಗ್ದಾಳಿ
ರಾಷ್ಟ್ರೀಯ-National
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up