ಮಂಡ್ಯ, ಏಪ್ರಿಲ್ 11: Narendra Modi ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಗಮಂಗಲ ತಾಲೂಕಿನ Adichunchanagiri Muttದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೂತನ ಗದ್ದಿಗೆ ಉದ್ಘಾಟಿಸಲಿರುವ ಅವರು, ಬಳಿಕ ಕೇರಳಕ್ಕೆ ಪ್ರಯಾಣಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ಬೆಳಿಗ್ಗೆ ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ಮಠಕ್ಕೆ ತೆರಳಿ, ಮಾಜಿ ಪೀಠಾಧಿಪತಿ Balagangadharanatha Swamiji ಅವರ ನೂತನ ಗದ್ದಿಗೆ (ಮಂದಿರ) ಉದ್ಘಾಟನೆ ನೆರವೇರಿಸಲಿದ್ದಾರೆ.
ಬಳಿಕ BGS ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮರಳಿ ಅಲ್ಲಿಂದ ಕೇರಳಕ್ಕೆ ಮುಂದಿನ ಪ್ರಯಾಣ ಕೈಗೊಳ್ಳಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆ ಜಿಲ್ಲಾಧಿಕಾರಿ ಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಭದ್ರತೆ, ಪ್ರೋಟೋಕಾಲ್ ಹಾಗೂ ಲಾಜಿಸ್ಟಿಕ್ಸ್ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ. ಕಾರ್ಯಕ್ರಮ ಸ್ಥಳದ ಸಮೀಪ ಮೂರು ಹೆಲಿಪ್ಯಾಡ್‌ಗಳ ನಿರ್ಮಾಣ, ವಿಶೇಷ ಗ್ರೀನ್ ರೂಂ ಸಿದ್ಧತೆ, ನಿರಂತರ ವಿದ್ಯುತ್ ಪೂರೈಕೆ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಎಸ್‌ಪಿ ವಿ.ಜೆ. ಶೋಭಾರಾಣಿ ಹಾಗೂ ಎಡಿಸಿ ಬಿ.ಸಿ. ಶಿವಾನಂದ ಮೂರ್ತಿ ಉಪಸ್ಥಿತರಿದ್ದರು.

