ಬಳ್ಳಾರಿ : ಅಂಬೇಡ್ಕರ್ ಜಯಂತಿ ಅಂಗವಾಗಿ ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮಗಳು ಜರುಗಿದವು. ನಗರದ ಮುನ್ಸಿಪಲ್ ಮೈದಾನದಲ್ಲಿ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಗೆ ವೇದಿಕೆ ಸಜ್ಜುಗೊಂಡಿತು.
ಈ ಮೆರವಣಿಗೆಗೆ ಪಾಲಿಕೆ ಮೇಯರ್ ಗಾದೆಪ್ಪ ಅವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳು ಆಕರ್ಷಕ ಪ್ರದರ್ಶನ ನೀಡಿ ಗಮನ ಸೆಳೆದವು. ಮೆರವಣಿಗೆ ಬಳ್ಳಾರಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹಬ್ಬದ ವಾತಾವರಣ ಸೃಷ್ಟಿಸಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಎಸ್‌ಪಿ ಸುಮನ್ ಡಿ ಪನ್ನೇಕರ್ ಭಾಗವಹಿಸಿದ್ದರು. ಎಡಿಸಿ ಮೊಹಮ್ಮದ್ ಜುಬೇರ್ ಹಾಗೂ ಸಿಇಒ ಮೊಹಮ್ಮದ್ ಸುಮೇರ್ ಉಪಸ್ಥಿತರಿದ್ದರು.

