By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ರಾಜ್ಯ-KarnatakaLatest

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

16 people including MLA Vinay Kulkarni sentenced to life imprisonment in Yogish Gowda murder case

Published April 17, 2026
Share
2 Min Read
Vinay Kulkarni Yogesh Gow Vinay Kulkarni Yogesh Gow Vinay Kulkarni Yogesh Gow
SHARE

ಬೆಂಗಳೂರು | ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಈ ಮೂಲಕ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಪ್ರಮುಖ ಜನಪ್ರತಿನಿಧಿಗಳಲ್ಲಿ ವಿನಯ್ ಕುಲಕರ್ಣಿ ಎರಡನೇ ವ್ಯಕ್ತಿಯಾಗಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವುದು ಗಮನಾರ್ಹ. ನ್ಯಾಯಾಲಯದ ತೀರ್ಪಿನಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ತಕ್ಷಣದಿಂದಲೇ ಅನರ್ಹಗೊಂಡಿದೆ.

ನ್ಯಾಯಮೂರ್ತಿ ಸಂತೋಷ ಗಜನನ ಭಟ್ ಅವರು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿ, ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ಸೆಕ್ಷನ್ 120(ಬಿ) (ಪಿತೂರಿ) ಅಡಿಯಲ್ಲಿ 7 ವರ್ಷ ಕಠಿಣ ಶಿಕ್ಷೆ ವಿಧಿಸಿದರು. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಅನುಭವಿಸಬೇಕೆಂದು ಆದೇಶಿಸಲಾಗಿದೆ.

ಒಟ್ಟು 17 ಆರೋಪಿಗಳ ಪೈಕಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 19ನೇ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಇನ್ನು ಎ1 ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯಾಗಿ ಕೋರ್ಟ್ ಪರಿಗಣಿಸಿದೆ. ಯೋಗೀಶ್ ಗೌಡ ಕುಟುಂಬಕ್ಕೆ ₹16 ಲಕ್ಷ ಪರಿಹಾರ ನೀಡಲು ನ್ಯಾಯಾಲಯ ಸೂಚಿಸಿದೆ.

ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಸಾಕ್ಷಿಗಳಾಗಿ ಪರಿವರ್ತಿಸಲಾಗಿದ್ದು, ಅವರಲ್ಲಿ ಒಬ್ಬರಾದ ಶಿವಾನಂದ ಬಿರಾದರ್ ನಂತರ ಪ್ರತಿಕೂಲ ಸಾಕ್ಷಿಯಾಗಿ ಬದಲಾಗಿರುವ ಹಿನ್ನೆಲೆಯಲ್ಲಿ ಮತ್ತೆ ಆರೋಪಿಯಾಗಿ ಸೇರಿಸಲು ಸಿಬಿಐ ಅರ್ಜಿ ಸಲ್ಲಿಸಿದೆ.

20ನೇ ಆರೋಪಿ ವಾಸುದೇವ ನಿಲೇಕಣಿ ಮತ್ತು 21ನೇ ಆರೋಪಿ ಸೋಮಶೇಖರ ಅವರಿಗೆ ಅನುಮಾನದ ಲಾಭ ನೀಡಿ ಖುಲಾಸೆ ಮಾಡಲಾಗಿದೆ. ತೀರ್ಪು ಹೊರಬಿದ್ದ ತಕ್ಷಣ ನ್ಯಾಯಾಲಯದ ಕಟಕಟೆಯಲ್ಲಿ ನಿಂತಿದ್ದ ಆರೋಪಿಗಳು ಭಾವುಕರಾದ ದೃಶ್ಯ ಕಂಡುಬಂದಿತು. ಬಳಿಕ ಸಿಬಿಐ ಅಧಿಕಾರಿಗಳು ಕಠಿಣ ಭದ್ರತೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು.

ನ್ಯಾಯಾಲಯವು ಸುಳ್ಳು ಸಾಕ್ಷಿ ನೀಡಿದ ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸ್ವತಂತ್ರ ಸಾಕ್ಷಿಗಳ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದೆ.

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿ ಯೋಗೀಶ್ ಗೌಡ ಹತ್ಯೆ ನಡೆದಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದರೂ, ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ರಾಜಕೀಯ ವೈಮನಸ್ಸು ಮತ್ತು ಪ್ರಭಾವದ ಹಿನ್ನೆಲೆ ಈ ಹತ್ಯೆ ನಡೆದಿರುವುದಾಗಿ ತನಿಖೆಯಲ್ಲಿ ಬಹಿರಂಗವಾಯಿತು.

2020ರಲ್ಲಿ ಸಿಬಿಐ ವಿನಯ್ ಕುಲಕರ್ಣಿಯನ್ನು ಬಂಧಿಸಿತ್ತು. 2021ರಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ, 2025ರಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನದ ಆರೋಪದ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡಲಾಗಿತ್ತು.

ಬಿಜೆಪಿ ಜಿಪಂ ಸದಸ್ಯರಾಗಿದ್ದ ಯೋಗೀಶ್ ಗೌಡ ರಾಜಕೀಯವಾಗಿ ವೇಗವಾಗಿ ಬೆಳೆಯುತ್ತಿದ್ದರು. ಇದರಿಂದ ರಾಜಕೀಯ ವೈಮನಸ್ಸು ಉಂಟಾಗಿ, 2016ರಲ್ಲಿ ಜಿಮ್‌ನಲ್ಲಿ ಅವರ ಹತ್ಯೆ ನಡೆದಿತ್ತು ಎಂದು ಆರೋಪಿಸಲಾಗಿದೆ.

ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಈಗ ನ್ಯಾಯಾಲಯದ ತೀರ್ಪಿನಿಂದ ಬಹು ವರ್ಷಗಳ ಬಳಿಕ ಅಂತಿಮ ಘಟ್ಟ ತಲುಪಿದೆ.

You Might Also Like

ಮೆಕ್ಸಿಕೊದಲ್ಲಿ ಬಂದೂಕುಧಾರಿಯಾ ಅಟ್ಟಹಾಸ, 12 ಮಂದಿ ಹತ್ಯೆ

ಕೇಂದ್ರ ಸರ್ಕಾರಿ ನೌಕರರಿಗೆ ನೂತನ ಏಕೀಕೃತ ಪಿಂಚಣಿ ಯೋಜನೆ

ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ

ಬೆಳಗಾವಿ : ಶಿವರಾತ್ರಿ ದಿನವೇ ಗೋಮಾಂಸ ಸಾಗಿಸುತ್ತಿದ್ದ ಲಾರಿ ವಶಕ್ಕೆ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ‘ಹರ್‌ ಘರ್‌ ತಿರಂಗಾ’ ಅಭಿಯಾನ

TAGGED:life imprisonmentVinay KulkarniYogish GowdaYogish Gowda murder case
Share This Article
Facebook Copy Link Print
Previous Article Trump Trump Trump ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್
Next Article Bid Bid Bid ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up