By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ

ಬೆಳಗಾವಿ-Belagaviರಾಜ್ಯ-Karnataka

ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ

Home Minister Dr. G. Parameshwara praised CM Siddaramaiah

Published April 17, 2026
Share
2 Min Read
Parameshwar Parameshwar Parameshwar
SHARE

ಬೆಳಗಾವಿ : ಬೆಳಗಾವಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪೊಲೀಸ್ ಇಲಾಖೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.ನಗರದ ಸಿಟಿ ಲೈನ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತೋಷದಿಂದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಎಂದು ತಿಳಿಸಿದರು.

ಬೆಳಗಾವಿ ಪೊಲೀಸ್ ಕಮೀಷನರ್ ಕಚೇರಿ ವ್ಯಾಪ್ತಿಯ ಸಿಬ್ಬಂದಿಗೆ ಶೇ.100ರಷ್ಟು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 67 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದರು.

ಶಹಾಪುರದಲ್ಲಿ ಪೊಲೀಸ್ ಸಿಬ್ಬಂದಿಗೆ ವಸತಿ ನಿಲಯ ನಿರ್ಮಾಣಕ್ಕೆ 3 ಕೋಟಿ ರೂಪಾಯಿ ವೆಚ್ಚದಲ್ಲಿ ಅಡಿಗಲ್ಲು ಇಡಲಾಗಿದೆ. ಇದುವರೆಗೆ ಸಿಂಗಲ್ ರೂಮ್ ವ್ಯವಸ್ಥೆ ಇದ್ದು, ಅದು ನಾಗರಿಕ ಸಮಾಜದಲ್ಲಿ ಅಪಮಾನಕಾರಿಯಾಗಿದೆ. ಈ ಹಿನ್ನೆಲೆ ಉತ್ತಮ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ ಎಂದು ವಿವರಿಸಿದರು. ಪೊಲೀಸ್ ವಸತಿ ಗೃಹ ವಿಭಾಗದಿಂದಲೇ 38 ಲಕ್ಷ ವೆಚ್ಚದಲ್ಲಿ ಕೆಲವು ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ಎರಡು ದೊಡ್ಡ ಸವಾಲುಗಳು
ಗೃಹ ಸಚಿವರು ರಾಜ್ಯದ ಮುಂದೆ ಇರುವ ಎರಡು ಪ್ರಮುಖ ಸವಾಲುಗಳನ್ನು ಉಲ್ಲೇಖಿಸಿದರು:

ಡ್ರಗ್ಸ್ ಮಾಫಿಯಾ ವಿರುದ್ಧ ಯುದ್ಧ
ಯುವಕರನ್ನು ಹಾಳು ಮಾಡುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ನಿನ್ನೆ ರಾತ್ರಿ ಬೆಂಗಳೂರಿನಲ್ಲಿ 24 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವುದನ್ನು ಉದಾಹರಿಸಿ, ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವತ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ವಿದ್ಯಾರ್ಥಿಗಳು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸೈಬರ್ ಕ್ರೈಮ್ ಏರಿಕೆ
ಸಾಮಾನ್ಯ ಅಪರಾಧಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧಗಳು ಹೆಚ್ಚುತ್ತಿರುವುದು ದೊಡ್ಡ ಸವಾಲಾಗಿದೆ. ವರ್ಷಕ್ಕೆ 22ರಿಂದ 30 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ ಎಂದು ಮಾಹಿತಿ ನೀಡಿದರು.

ಹಿರಿಯ ನಾಗರಿಕರನ್ನು ‘ಡಿಜಿಟಲ್ ಅರೆಸ್ಟ್’ ಮಾಡುವಂತಹ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಸೈಬರ್ ಕ್ರೈಮ್ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಕೆ ಹೆಚ್ಚಿಸಲಾಗಿದೆ. ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೂ ಸೈಬರ್ ಅಪರಾಧಗಳ ಬಗ್ಗೆ ತರಬೇತಿ ನೀಡಲು ಸೂಚಿಸಲಾಗಿದೆ ಎಂದರು.

ಪೊಲೀಸ್ ಇಲಾಖೆ ಕಾರ್ಯಕ್ಕೆ ಪ್ರಶಂಸೆ
ಕರ್ನಾಟಕ ಪೊಲೀಸ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವರು, ತಪ್ಪುಗಳಾಗಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜೈಲು ವ್ಯವಸ್ಥೆಯ ಮೇಲೂ ಕಣ್ಣಿಟ್ಟಿದ್ದು, ಡಿಐಜಿ ಅಲೋಕ್ ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ವಸತಿ ಸಮಸ್ಯೆ ಉಂಟಾಗುತ್ತದೆ. ಇದನ್ನು ಮನಗಂಡು ವಸತಿ ವ್ಯವಸ್ಥೆ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ಅವರು 20 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದು ಹೇಳಿದರು.

You Might Also Like

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಹತ್ಯೆಗೆ ಯತ್ನಿಸಿದ್ದ ಆರೋಪಿಗಳು ಅರೆಸ್ಟ್

ಕಾರಿಗೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರ ಸಾವು

ಬೀದರ್‌ನಲ್ಲಿ ರಾಜಾರೋಷವಾಗಿ ಭೂಸಂಪತ್ತು ಲೂಟಿ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ಗೆ‌ ಬಾಂಬ್ ಬೆದರಿಕೆ

ವಿಜಯನಗರ : ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

TAGGED:Siddaramaiah
Share This Article
Facebook Copy Link Print
Previous Article Bid Bid Bid ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
Next Article Bus Bus Bus ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bus Bus Bus
ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
ಬೆಳಗಾವಿ-Belagavi
April 17, 2026
Bid Bid Bid
ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
ಬೀದರ್​-Bidar
April 17, 2026
Vinay Kulkarni Yogesh Gow Vinay Kulkarni Yogesh Gow Vinay Kulkarni Yogesh Gow
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ರಾಜ್ಯ-Karnataka
April 17, 2026
Trump Trump Trump
ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್
ವಿದೇಶ-International
April 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up