ಬೆಂಗಳೂರು: ಕಾರಿನ ಡೋರ್ ಒಪನ್ ಮಾಡುವಾಗ ನಮ್ಮ ಕಾರ್ಯಕರ್ತ ಹಿಂದಿನಿಂದ ಬಂದು ಗುದ್ದಿದ್ದಾನೆ. ಈ ವೇಳೆ ಬೈಕ್‌ನಿಂದ ಬಿದ್ದಾಗ ಅವನ ಮೇಲೆ ಬಸ್ ಹರಿದಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಂದು ನಮ್ಮ ಪಕ್ಷದ ರ‍್ಯಾಲಿ ಇತ್ತು. ಎಲ್ಲರೂ ರ‍್ಯಾಲಿ ಮುಗಿಸಿಕೊಂಡು ಬರುವಾಗ ಕೆಆರ್ ಪುರಂ ಸರ್ಕಲ್ ಬಳಿ ಕಾರು ನಿಲ್ಲಿಸಿದ್ವಿ. ನಮ್ಮ ಕಾರ್ಯಕರ್ತ ಹಿಂಬದಿಯಿoದ ಬಂದು ಗುದ್ದಿಕೊಂಡಿದ್ದಾನೆ. ಕಾರ್ ನಮ್ಮದೇ, ಡೋರ್ ತೆಗೆದಾಗ ಬಿದ್ದಿದ್ದಾರೆ. ನಂತರ ಅವರ ಮೇಲೆ ಬಸ್ ಹರಿದಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಎಲ್ಲವೂ ತಿಳಿಯುತ್ತೆ ಎಂದು ಶೋಭಾ ಹೇಳಿದರು. ಇದನ್ನೂ ಓದಿ:ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ನಿರಾಕರಿಸಿದ ಕೋರ್ಟ್
ಪ್ರಕಾಶ್ ಸಾವು ಸಂಭವಿಸಿರೋದು ನಿಜಕ್ಕೊ ದುರ್ದೈವ.ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ನಾವು ಅವರ ಕುಟುಂಬಕ್ಕೆ ಏನು ಸಹಾಯ ಮಾಡಬೇಕೋ ಮಾಡ್ತೀವಿ. ಅವರ ಕುಟುಂಬದ ಜೊತೆಗೆ ನಾವೀದ್ದೇವೆ. ಅಲ್ಲದೇ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಮ್ಮ ಪಕ್ಷ ನಿರ್ಧರಿಸುತ್ತೆ ಎಂದು ಹೇಳಿದರು. ಇದನ್ನೂ ಓದಿ: ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಹೆತ್ತ ತಂದೆ